ಬಾಗೇಪಲ್ಲಿ | ಸಾಲುಗಟ್ಟಿ ನಿಂತರೂ ಸಿಗದ ರಸಗೊಬ್ಬರ; ಸರ್ಕಾರದ ವಿರುದ್ಧ ರೈತರ ಆಕ್ರೋಶ

Date:

ಬಿತ್ತನೆ ವೇಳೆಗೆ ಸಮರ್ಪಕವಾಗಿ ಬಾರದ ಮಳೆಯಿಂದಾಗಿ ಬೇಸತ್ತಿರುವ ರೈತರಿಗೆ ಸಮರ್ಪಕವಾಗಿ ಯೂರಿಯಾ ರಸಗೊಬ್ಬರವೂ ಸಿಗುತ್ತಿಲ್ಲ. ಸಕಾಲಕ್ಕೆ ರಸಗೊಬ್ಬರ ಸರಬರಾಜು ಮಾಡದ ಸರಕಾರ ರೈತರನ್ನು ಕಡೆಗಣಿಸಿವೆ ಎಂದು ಆರೋಪಿಸಿ ಕೆಪಿಆರ್‌ಎಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಬಾಗೇಪಲ್ಲಿ ಪಟ್ಟಣದ ಟಿಎಪಿಸಿಎಂಸಿ ರಸಗೊಬ್ಬರಗಳ ಮಾರಾಟ ಕೇಂದ್ರದ ಹಾಗೂ ತಾಲೂಕಿನ ಗೂಳೂರಿನಲ್ಲಿ ಸೊಸೈಟಿಯ ಮುಂದೆ ಮುಂಜಾನೆ ಸುಮಾರು 4.30 ಗಂಟೆಯಿಂದಲೇ ರಸಗೊಬ್ಬರಕ್ಕಾಗಿ ನೂರಾರು ರೈತರು ಸಾಲುಗಟ್ಟಿ ಪರದಾಡಿದರು. ಆದರೂ ಹಲವಾರು ರೈತರು ರಸಗೊಬ್ಬರ ದೊರೆಯದೆ ವಾಪಸ್ಸು ಹೋದರು.

ಈ ವೇಳೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕ ಚನ್ನರಾಯಪ್ಪ, “ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷಿ ಇಲಾಖೆ ಅಧಿಕಾರಿಗಳಿಗಾಗಲಿ,ಶಾಸಕರಿಗೆ ಕಿಂಚಿತ್ತು ರೈತಪರ ಕಾಳಜಿ ಇಲ್ಲ. ರೈತರ ನೋವು ನಲಿವುಗಳ ಬೇಕಾಗಿಲ್ಲ. ಹಾಗಾಗಿ ಸಮರ್ಪಕ ರಸಗೊಬ್ಬರ ಪೂರೈಸುತ್ತಿಲ್ಲ” ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 09 09 at 4.04.53 PM

“ರೈತರು ಬೆಳಗ್ಗೆಯಿಂದಲೇ ರಸಗೊಬ್ಬರಕ್ಕಾಗಿ ಅಂಗಡಿ ಮುಂದೆ ನಿಂತರೂ ಸಮರ್ಪಕವಾಗಿ ಗೊಬ್ಬರ ಸಿಗುತ್ತಿಲ್ಲ. ಕೆಲವರು ರಸಗೊಬ್ಬರಗಳನ್ನು ಸ್ಟಾಕ್‌ ಇಟ್ಟು ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿಸುತ್ತಿದ್ದು, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಆದರೆ ಈಗ ಅಧಿಕಾರದಲ್ಲಿರುವ ಕಾಂಗ್ರೆಸ್‌ ಸರಕಾರ ಲಂಚಗುಳಿತನ, ದುರಾಡಳಿತ, ಆಡಳಿತ ವೈಫಲ್ಯತೆಯಿಂದ ಜನರ ಆಕ್ರೋಶಕ್ಕೆ ತುತ್ತಾಗಿದೆ. ಸಮರ್ಪಕವಾಗಿ ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜ ಪೂರೈಸುವಲ್ಲಿ ವಿಫಲವಾಗಿದೆ. ಮುಂಜಾಗ್ರತಾ ಕ್ರಮವಾಗಿ ಗೊಬ್ಬರ ದಾಸ್ತಾನು ಮಾಡದೆ ನಿರ್ಲಕ್ಷ್ಯವಹಿಸಿದೆ” ಎಂದು ಅಸಮಾಧಾನಗೊಂಡರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಸರ್ಕಾರಿ ನೌಕರರು ತಮ್ಮ ಹುದ್ದೆಯ ಪಾವಿತ್ರ್ಯತೆಯನ್ನು ಕಾಪಾಡಬೇಕು: ಷಡಕ್ಷರಿ

“ನಾವು ರೈತ ಪರ ಎನ್ನುವ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಹಾಗೂ ಕೇಂದ್ರ ಬಿಜೆಪಿಯವರು ರಾಜಕೀಯ ಲಾಭ ಗಳಿಸಲು ಮಾತ್ರ ರೈತರ ಮಾತು ಬರುತ್ತದೆ. ಉಳಿದಂತೆ ರೈತನ ಸಂಕಷ್ಟಗಳಿಗೆ ಕೊನೆ ಇಲ್ಲದಂತಾಗಿದೆ. ಹಾಗಾಗಿ ಸರಕಾರಗಳು ಇನ್ನಾದರೂ ಎಚ್ಚೆತ್ತುಕೊಂಡು ರೈತರ ಸಮಸ್ಯೆಗೆ ಸ್ಪಂದಿಸಬೇಕು. ಇಲ್ಲವೆ ಅಧಿಕಾರ ಬಿಟ್ಟು ತೊಲಗಲಿ” ಎಂದು ಆಕ್ರೋಶ ವ್ಯಕ್ತ ಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...