ಬಾಗೇಪಲ್ಲಿ | ರಾಷ್ಟ್ರಮಟ್ಟದಲ್ಲಿ ಗೆಲುವು ಸಾಧಿಸಿ ಕೀರ್ತಿ ತರಲಿ : ಬಿಇಒ ಎನ್‌ ವೆಂಕಟೇಶಪ್ಪ

Date:

ರಾಜ್ಯಮಟ್ಟದ ಹ್ಯಾಂಡ್‌ ಬಾಲ್‌ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲೂ ಉತ್ತಮ ಪ್ರದರ್ಶನ ತೋರಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಾಗಲಿ ಎಂದು ಬಿಇಒ ಎನ್‌ ವೆಂಕಟೇಶಪ್ಪ ಶುಭಕೋರಿದರು.

ಬಾಗೇಪಲ್ಲಿ ಪಟ್ಟಣದ ಬಿಇಒ ಕಚೇರಿಯಲ್ಲಿ ಗುರುವಾರ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳಿಗೆ ಆಯೋಜಿಸಿದ್ದ ಸರಳ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಗಡಿ ತಾಲೂಕಿನಿಂದ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವಂತೆ ತಯಾರುಗೊಳಿಸಿದ ದೈಹಿಕ ಶಿಕ್ಷಕರು ಹಾಗೂ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರಂಗನಾಥ್ ಮತ್ತಿತರ ಶ್ರಮವೂ ಅಪಾರವಾದದ್ದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರಂಗನಾಥ್ ಮಾತನಾಡಿ, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಆಶ್ರಮದ ಆವರಣದಲ್ಲಿ ಇತ್ತೀಚೆಗೆ ನಡೆದ 2024-25 ಸಾಲಿನ ರಾಜ್ಯ ಮಟ್ಟದ 14 ವರ್ಷದೊಳಗಿನ ಬಾಲಕರ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ನಮ್ಮ ತಾಲೂಕಿನ ಶ್ರೀ ಸತ್ಯಸಾಯಿ ವಿದ್ಯಾನಿಕೇತನ್ ಶಾಲೆಯ ವಿದ್ಯಾರ್ಥಿಗಳಾದ ಪ್ರಜ್ವಲ್, ಎನ್.ಆರ್.ದಿಲೀಪ್ ಮತ್ತು ಭುವನಜ್ ಅವರು ಗೆಲುವು ಸಾಧಿಸಿರುವುದು ಸಂತಸದ ವಿಚಾರ. ನ.25 ರಿಂದ 29ರವರೆಗೆ 14 ವರ್ಷದೊಳಗಿನ ರಾಷ್ಟ್ರ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಉತ್ತಮವಾಗಿ ಆಡಿ ಗೆಲುವು ಸಾಧಿಸಬೇಕು ಎಂದರು.

ಇದೇ ವೇಳೆ ಕ್ರೀಡಾಪಟುಗಳು ಮತ್ತು ದೈಹಿಕ ಶಿಕ್ಷಕ ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ : ಬಾಗೇಪಲ್ಲಿ | ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಬಡವರಿಗೆ ಅನ್ಯಾಯ : ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು.ಬಸವರಾಜು ವಾಗ್ದಾಳಿ

ಈ ವೇಳೆ ತಾಲೂಕು ಶಿಕ್ಷಣ ಸಮನ್ವಯ ಅಧಿಕಾರಿ ಆರ್.ವೆಂಕಟರಾಮ್, ವಕೀಲರ ಸಂಘದ ಅಧ್ಯಕ್ಷ ಎ.ನಂಜುಂಡಪ್ಪ, ಇಸಿಒಗಳಾದ ರವಿಕುಮಾರ್, ಆನಂದಬಾಬು, ಪಿ‌.ಎನ್ ನಾರಾಯಣಸ್ವಾಮಿ, ಪದ್ಮಾವತಿ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...