ಬಾಗೇಪಲ್ಲಿ | ಹಿಂದುಳಿದ ಸಮುದಾಯಗಳಿಗೆ ಕಲ್ಯಾಣ ಕಾರ್ಯಕ್ರಮ ರೂಪಿಸಲು ಸಮೀಕ್ಷೆ ಅತ್ಯಗತ್ಯ: ತಹಶೀಲ್ದಾರ್‌ ಮನೀಷಾ

Date:

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂದರೆ, ಒಂದು ದೇಶದಲ್ಲಿ ವಿವಿಧ ಜಾತಿಗಳ ಜನರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆ. ಸರ್ಕಾರವು ಹಿಂದುಳಿದ ಸಮುದಾಯಗಳಿಗೆ ಕಲ್ಯಾಣ ಕಾರ್ಯಕ್ರಮ, ನೀತಿಗಳು ಮತ್ತು ಮೀಸಲಾತಿಗಳನ್ನು ರೂಪಿಸಲು ಈ ಮಾಹಿತಿ ಅತ್ಯಗತ್ಯ ಎಂದು ಬಾಗೇಪಲ್ಲಿ ತಹಶೀಲ್ದಾರ್ ಮನೀಷಾ ಎನ್.ಪತ್ರಿ ಹೇಳಿದರು.

ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ದೇವರಾಜ ಅರಸು ಭವನದಲ್ಲಿ ಗುರುವಾರ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಗಣತಿದಾರರಿಗೆ ಕಿಟ್ ವಿತರಿಸಿ ಅವರು ಮಾತನಾಡಿದರು.

“ಈ ಸಮೀಕ್ಷೆಯಲ್ಲಿ, ಬಡತನ, ಅನಕ್ಷರತೆ ಮತ್ತು ಅಸಮಾನತೆಯಂತಹ ಸಮಸ್ಯೆಗಳನ್ನು ಪರಿಹರಿಸಲು ಯಾವ ಸಮುದಾಯಗಳು ಹೆಚ್ಚು ಬಾಧಿತವಾಗಿವೆ ಎಂದು ತಿಳಿಯುವುದು ಬಹಳ ಮುಖ್ಯ. ಆದರಿಂದ ಜನರು ಈ ಸಮೀಕ್ಷೆಗೆ ನಿಖರ ಮತ್ತು ಸಂಪೂರ್ಣ ಮಾಹಿತಿಯನ್ನು ನೀಡುವ ಮೂಲಕ ಸಹಕರಿಸಬೇಕು. ಅವರ ಪ್ರಾಮಾಣಿಕ ಸಹಭಾಗಿತ್ವದಿಂದ ಸರ್ಕಾರದ ಸಾಮಾಜಿಕ ರಚನೆ ಮತ್ತು ಜನರ ಅಗತ್ಯಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗುತ್ತದೆ. ಭಾಗವಹಿಸುವುದರಿಂದ, ಜನರು ತಮ್ಮ ಮತ್ತು ದೇಶದ ಪ್ರಗತಿಗೆ ಕೊಡುಗೆ ನೀಡಿದಂತಾಗುತ್ತದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಇಒ ಎನ್.ವೆಂಕಟೇಶಪ್ಪ ಮಾತನಾಡಿ, “ಸೆ.22ರಿಂದ ಅ.7ರವರೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು 60 ಪ್ರಶ್ನೆಗಳನ್ನೊಳಗೊಂಡಿದ್ದು, ಗಣತಿದಾರರಿಗೆ ಸರಿಯಾದ ಮಾಹಿತಿ ನೀಡಬೇಕು’ ಎಂದು ಸಾರ್ವಜನಿಕರಲ್ಲಿ ಕೋರಿದರು.

ಇದನ್ನೂ ಓದಿ: ಬಾಗೇಪಲ್ಲಿ | ಡಾ. ಬಿ ಆರ್ ಅಂಬೇಡ್ಕರ್ ಸೇನೆಯ ತಾಲೂಕು ಪದಾಧಿಕಾರಿಗಳ ಆಯ್ಕೆ

ಬಿಸಿಎಂ ಅಧಿಕಾರಿ ಶಿವಪ್ಪ ಮಾತನಾಡಿ, “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಮೀಕ್ಷೆ ಕುರಿತು ತಪ್ಪು ಕಲ್ಪನೆ ಬೇಡ. ಇದು ಜಾತಿಗಣಿತಿಯಲ್ಲ. ಸಮಾಜದಲ್ಲಿ ದುರ್ಬಲ ವರ್ಗದವರನ್ನು ಮುಖ್ಯ ವಾಹಿನಿಗೆ ತರುವ ಒಂದು ಐತಿಹಾಸಿಕ ನಿರ್ಣಯವಾಗಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಣ ಸಮನ್ವಯಾಧಿಕಾಕಿಗಳಾದ ವೆಂಕಟರಾಮ್, ಚಂದ್ರಶೇಖರ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...