ಬಾಗೇಪಲ್ಲಿ | ಬೇಡಿಕೆ ಈಡೇರಿಸಲು ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಧರಣಿ

Date:

ಗ್ರಾಮ ಆಡಳಿತಾಧಿಕಾರಿಗಳ ಮೇಲಿನ ಕಾರ್ಯ ಒತ್ತಡ ಕಡಿಮೆ ಮಾಡಿ, ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಬಾಗೇಪಲ್ಲಿ ತಹಶೀಲ್ದಾರ್ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಯಿತು.

ಈ ವೇಳೆ ತಾಲೂಕು ಘಟಕದ ಸಂಘದ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಸರಕಾರವು ಮೊಬೈಲ್ ಆ್ಯಪ್‌ಗಳ ಮೂಲಕ ಲ್ಯಾಂಡ್ ಬಿಟ್ , ಆಧಾರ್ ಸಂಖ್ಯೆ ಸಂಯೋಜನೆ ಸೇರಿದಂತೆ ನಾನಾ ಕೆಲಸಗಳನ್ನು ನಿಗದಿಪಡಿಸಲಾಗಿದೆ. ಇಂತಹ ಕೆಲಸಗಳನ್ನು ನಿರ್ವಹಿಸಲು ಕನಿಷ್ಟ ಸೌಲಭ್ಯಗಳನ್ನೂ ಒದಗಿಸಿಲ್ಲ. ಲ್ಯಾಪ್‌ಟಾಪ್,‌ ಇಂಟರ್‌ನೆಟ್‌ ಸೌಲಭ್ಯ, ಪೀಠೋಪಕರಣಗಳ ವ್ಯವಸ್ಥೆ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಒದಗಿಸದೇ ಕಾರ್ಯದೊತ್ತಡ ಹೇರಲಾಗುತ್ತಿದೆ. ಹಾಗಾಗಿ, ರಾಜ್ಯ ಸಂಘಟನೆಯ ನಿರ್ಧಾರಂತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದೇವೆ. ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರವನ್ನು ಮುಂದುವರೆಸುತ್ತೇವೆ ಎಂದು ತಿಳಿಸಿದರು.

WhatsApp Image 2024 09 27 at 4.59.55 PM

ಗ್ರಾಮ ಆಡಳಿತ ಅಧಿಕಾರಿ ಪ್ರೀತಮ್ ಮಾತನಾಡಿ, ಬಗರ್ ಹುಕುಂ ಸಾಗುವಳಿ, ಭೂಮಿ, ಹಕ್ಕುಪತ್ರ, ಆಧಾರ್ ಸೀಡಿಂಗ್, ಚುನಾವಣೆ, ಆದಾಯ ತೆರಿಗೆ ಇಲಾಖೆ, ಬ್ಯಾಂಕ್ ಕೆಲಸಗಳನ್ನು ಸೇರಿದಂತೆ 21 ಮೊಬೈಲ್ ತಂತ್ರಾಂಶಗಳನ್ನು ನಿರ್ವಹಣೆ ಮಾಡಬೇಕಿದೆ. ಇವೆಲ್ಲವನ್ನು ಒಟ್ಟಿಗೆ ನಿರ್ವಹಿಸುವುದು ಕಷ್ಟಕರವಾಗಿದೆ. ಅಂತರ ಜಿಲ್ಲಾ ವರ್ಗಾವಣೆ, ಪತಿ–ಪತ್ನಿ ಪ್ರಕರಣದಲ್ಲಿ ವರ್ಗಾವಣೆಗೆ ಅವಕಾಶ ನೀಡಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚುನಾವಣಾ ಬಾಂಡ್‌ ಮೂಲಕ ಸುಲಿಗೆ: ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್‌ ಆದೇಶ

ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಮನೀಷಾ ಮಹೇಶ್ ಪತ್ರಿಯವರು, ಕೂಡಲೇ ಬೇಡಿಕೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಗಮನಕ್ಕೆ ತರುತ್ತೇವೆ. ಗ್ರಾಮ ಆಡಳಿತ ಅಧಿಕಾರಿಗಳು ಕಂದಾಯ ಇಲಾಖೆಯ ಅಡಿಗಲ್ಲುಗಳಿದ್ದಂತೆ. ಹಾಗಾಗಿ ಸರಕಾರದ ಯೋಜನೆಗಳ ಅನುಷ್ಟಾನದಲ್ಲಿ ಅವರ ಪಾತ್ರ ಮುಖ್ಯವಾದದ್ದು ಎಂದು ತಿಳಿಸಿದರು.

ಈ ವೇಳೆ ಗ್ರಾಮ ಆಡಳಿತಾಧಿಕಾರಿಗಳಾದ ಬಿ.ಸಿ ನರಸಿಂಹಪ್ಪ, ರೋಶಿನಿ, ಅಭಿಷೇಕ್, ಸಂತೋಷ್ ಕುಮಾರ್, ಕೆ.ಎನ್ ವೇಣುಗೋಪಾಲ್, ಕಿರಣ್, ಪ್ರಿಯಾಂಕ, ಕೀರ್ತಿ, ರಂಜಿತಾ, ಈಶ್ವರ್, ಮಾಳಪ್ಪ, ಜಕ್ಕು, ವೆಂಕಟೇಶ್, ಶ್ರೀಧರ್, ಯಶೋಧ ಮತ್ತು ಜಯರಾಮ್ ಸೇರಿದಂತೆ ಹಲವಾರು ಮಂದಿ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...