ಉಡುಪಿ ನಗರದ ಅಂಬಾಗಿಲು ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರನ ಕಾಲಿಗೆ ಗಾಯವಾದ ಘಟನೆ ನಡೆದಿದೆ.
ಉಡುಪಿ ಕಡೆಯಿಂದ ಕುಂದಾಪುರದತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಯೂ-ಟರ್ನ್ ತೆಗೆದುಕೊಳ್ಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮವಾಗಿ ಬೈಕ್ ಸವಾರನ ಕಾಲಿಗೆ ಗಾಯವಾಗಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಸ್ ನಿರ್ವಾಹಕ ಮಾಹಿತಿ ನೀಡಿದ್ದಾರೆ.

ಸ್ಥಳೀಯರ ಪ್ರಕಾರ, ಅಂಬಾಗಿಲು, ಸಂತೆಕಟ್ಟೆ ಪ್ರದೇಶದಲ್ಲಿ ಪದೇಪದೇ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ದಿನನಿತ್ಯವೂ ಇಂತಹ ಘಟನೆಗಳು ಮರುಕಳಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಶಾಶ್ವತ ಪರಿಹಾರ ಹಾಗೂ ಸೂಕ್ತ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ.





