ಬಳ್ಳಾರಿ | ಜಿಟಿಟಿಸಿ ತರಬೇತಿಗಾಗಿ ಅರ್ಜಿ ಆಹ್ವಾನ; ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಉಚಿತ

Date:

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ(ಜಿಟಿಟಿಸಿ ತರಬೇತಿ) ಹಾಗೂ ತರಬೇತಿ ಸಂಸ್ಥೆಯ ಬಹುಕೌಶಾಲ್ಯಾಭಿವೃದ್ದಿ ಕೇಂದ್ರವು ಬಳ್ಳಾರಿ ಜಿಲ್ಲೆಯಲ್ಲಿ ನೂತನವಾಗಿ ಪ್ರಾರಂಭವಾಗಿದ್ದು, ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹತ್ತನೇ ತರಗತಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಯುವಜನರಿಗೆ ‘ಟೂಲ್‌ರೂಮ್ ಮಶಿನಿಸ್ಟ್’ ತಾಂತ್ರಿಕ ವೃತ್ತಿ ತರಬೇತಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಎಸ್ಎಸ್ಎಲ್‌ಸಿ ಉತ್ತೀರ್ಣರಾದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲಾಗುತ್ತದೆ.

ತರಬೇತಿ ಹೊಂದಿದ ಅಭ್ಯರ್ಥಿಗಳಿಗೆ ಕೈಗಾರಿಕೆಗಳಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಒಂದೇ ಕೋರ್ಸಿನಲ್ಲಿ ಟರ್ನರ್, ಮಿಲ್ಲರ್, ಗ್ರೈಂಡರ್, ಸಿಎನ್‌ಸಿ, ಕ್ಯಾಡ್-ಕ್ಯಾಮ್ ಹಾಗೂ ಟೂಲ್ ಆಂಡ್ ಡೈ ಮೇಕಿಂಗ್ ಟ್ರೇಡ್‌ಗಳಲ್ಲಿ ಆನ್ ದಿ ಜಾಬ್ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶಗಳು ದೊರಕುತ್ತವೆ. ಅಲ್ಲದೆ ಅಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯ ಹಾಗೂ ಉದ್ಯೋಗ ಕೌಶಲ್ಯಗಳನ್ನು ಕಲಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ತರಬೇತಿ ಸೌಲಭ್ಯಗಳನ್ನು ಅಳವಡಿಸಿಕೊಂಡಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ಶಿಕ್ಷಕರನ್ನು ಹೊಂದಿದೆ. ತರಬೇತಿಯ ನಂತರ ವಿದ್ಯಾರ್ಥಿಗಳಿಗೆ ಟೂಲಿಂಗ್, ವಿಮಾನ ತಯಾರಿಕೆ ಮತ್ತು ಆಟೊಮೊಬೈಲ್ ವಲಯಗಳ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಿ ಕೊಡಲಾಗುತ್ತದೆ.

ಸರ್ಕಾರದ ವಿವಿಧ ಯೋಜನೆಯಡಿ ʼಮೆಕ್ಯಾನಿಕಲ್–ಕ್ಯಾಡ್/ಕಾಮ್, “ಎಲೆಕ್ಟ್ರಾನಿಕ್ಸ್‌-ಆಟೋಮೇಶನ್ ಮನೆ/ಕೈಗಾರಿಕೆ, ಪಿಎಲ್‌ಸಿ ಪ್ರೋಗ್ರಾಮಿಂಗ್, ಅಡ್ವಾನ್ಸ್ ಹೈಡ್ರಾಲಿಕ್ಸ್ ಮತ್ತು ನ್ಯೂಮ್ಯಾಟಿಕ್ಸ್ʼ, ʼಎಲೆಕ್ಟ್ರಿಕಲ್- ಮನೆ/ಕೈಗಾರಿಕೆ ಇನ್ಸಾಲೇಷನ್, ಸಿಕ್ಯಾಡ್ ಮತ್ತು ಕಂಪ್ಯೂಟರ್ ಸೈನ್ಸ್ – ಕಂಪ್ಯೂಟರ್ ಅಪ್ಲಿಕೇಷನ್ ವಿಭಾಗದ ಉಚಿತ ಮತ್ತು ಪಾವತಿ ತಾಂತ್ರಿಕ ಕೌಶಲ್ಯ ಅಲ್ಪಾವಧಿ ತರಬೇತಿಗಳನ್ನು ಪ್ರಾರಂಭಿಸಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಆಲಮಟ್ಟಿ ಜಲಾಶಯದ ನೀರು ಸಂಗ್ರಹ ಹೆಚ್ಚಳಕ್ಕೆ ಆಗ್ರಹ; ಜೂ.30ರಂದು ಬೃಹತ್‌ ರೈತ ಹೋರಾಟ

ಕನಿಷ್ಠ 8ನೇ ತರಗತಿ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಬಿಇ ಉತ್ತೀರ್ಣರಾದ 16 ರಿಂದ 35 ವಯೋಮಿತಿಯೊಳಗಿನ ಅಭ್ಯರ್ಥಿಗಳು ತರಬೇತಿ ಪಡೆಯಲು ಅರ್ಹರು. ತರಬೇತಿ ಪಡೆಯಲು ಆದಾಯದ ಮಿತಿ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆಂಟ್‌ನ ಐಶ್ವರ್ಯ ಕಾಲೋನಿಯ ಸರ್ಕಾರಿ ಉಪಕರಣಾಗಾರ ಮತ್ತು ಐಟಿಐ ತರಬೇತಿ ಕೇಂದ್ರ ಅಥವಾ ಮೊ.9972320076, 9620057086ಕ್ಕೆ ಸಂಪರ್ಕಿಸಬಹುದು ಎಂದು ಜಿಟಿಟಿಸಿಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...