ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮನೆಯ ರಸ್ತೆಯಲ್ಲಿ ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದು ಈ ಬೆನ್ನಲ್ಲೇ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರು ಅಮಾನತು ಮಾಡಲಾಗಿದೆ.
ನಿನ್ನೆ ಬೆಳಿಗ್ಗೆಯಷ್ಟೇ ಬಳ್ಳಾರಿ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ್ದ ಪವನ್ ನೆಜ್ಜೂರು ಇಂದು ಅಮಾನತುಗೊಂಡಿದ್ದಾರೆ. ಬಳ್ಳಾರಿಯಲ್ಲಿ ನಿನ್ನೆ ಮುಂಜಾನೆವರೆಗೂ ಶೋಭಾರಾಣಿ ಎಸ್‌ಪಿಯಾಗಿದ್ದರು.
ಇದನ್ನು ಓದಿದ್ದೀರಾ? ಬಳ್ಳಾರಿ ಘರ್ಷಣೆ ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ
ಪವನ್ ನೆಜ್ಜೂರು ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಗಲಾಟೆ ನಡೆದು ಓರ್ವನ ಸಾವು ಸಂಭವಿಸಿತ್ತು. ಈ ಗಲಾಟೆಗಳನ್ನು ನಿಯಂತ್ರಿಸಲು ವಿಫಲವಾದ ಕಾರಣಕ್ಕಾಗಿ ಪವನ್ ಅವರನ್ನು ಅಮಾನತುಗೊಳಿಸಲಾಗಿದೆ.
ಪವನ್ ನೆಜ್ಜೂರು ಅವರು ಬಳ್ಳಾರಿ ಗಲಾಟೆಯನ್ನು ನಿಯಂತ್ರಿಸಲು ವಿಫಲವಾಗಿದ್ದು ಮಾತ್ರವಲ್ಲದೆ ಹಿರಿಯ ಅಧಿಕಾರಿಗಳಿಗೂ ಸರಿಯಾದ ಮಾಹಿತಿ ನೀಡಿಲ್ಲ ಎಂಬ ಕಾರಣದಿಂದಾಗಿ ಅಮಾನತುಗೊಳಿಸಲಾಗಿದೆ. ಬಳ್ಳಾರಿ ಡಿಐಜಿ ಶಿಫಾರಸು ಮೇರೆಗೆ ರಾಜ್ಯ ಸರ್ಕಾರ ಈ ಕ್ರಮಕೈಗೊಂಡಿದೆ.





