ಬಾಣಂತಿ ಸಾವು ಪ್ರಕರಣ | ತನಿಖೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗೆ ಸಚಿವ ಜಮೀರ್‌ ಸೂಚನೆ

Date:

ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾಗಿದ್ದಾರೆ ಎನ್ನುವ ಆರೋಪ ಕೇಳಿವರುತ್ತಿದೆ. ಮೃತರ ಪೈಕಿ ನಾಲ್ವರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಜೇರಿಯನ್ ಮಾಡಿಸಿಕೊಂಡಿದ್ದರು.

ಒಂದು ವಾರದ ಅಂತರದಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಬುಧವಾರ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೆ ಓರ್ವ ಬಾಣಂತಿ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಿಎಸ್‌ಪುರ ಗ್ರಾಮದ ಮಹಾಲಕ್ಷ್ಮಿ (20) ಎಂಬ ಗರ್ಭಿಣಿ, ರವಿವಾರ ಬಳ್ಳಾರಿಯ ಬಿಮ್ಸ್‌ ಆಸ್ಪತ್ರೆಗೆ ಹೆರಿಗೆ‌ಗೆ ದಾಖಲಾಗಿದ್ದರು. ಬಳಿಕ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿಯೇ ಮಹಾಲಕ್ಷ್ಮಿ‌ಗೆ ನಾರ್ಮಲ್ ಹೆರಿಗೆ ಮಾಡಲಾಗಿತ್ತು. ಆದರೆ ಹೆರಿಗೆ ಬಳಿಕ ತೀವ್ರ ರಕ್ತ ಸ್ರಾವ ಹಾಗೂ ನಂಜಾಗಿ ಬಾಣಂತಿ‌ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ.

ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ

ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವು ಪ್ರಕರಣ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರ ಬಳಿ ಮಾಹಿತಿ ಪಡೆದ ಸಚಿವರು ಘಟನೆಯನ್ನು ಗಂಭೀರ ವಾಗಿ ಪರಿಗಣಿಸಿ ಮುನ್ನಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದ್ದಾರೆ.

“ಈ ಹಿಂದೆ ಜಿಲ್ಲಾ ಆಸ್ಪತ್ರೆ ಯಲ್ಲಿ ಸಂಭವಿಸಿದ್ದ ನಾಲ್ಕು ಬಾಣಂತಿಯರ ಸಾವು ಪ್ರಕರಣಕ್ಕೂ ಈ ಘಟನೆಗೆ ಸಂಬಂಧ ಇಲ್ಲ. ಕೂಡ್ಲಿಗಿ ಗುಡೇಕೋಟೆ ಪ್ರಾಥಮಿಕ ಅರೋಗ್ಯ ಕೇಂದ್ರ ದಿಂದ ಮಹಾಲಕ್ಷ್ಮಿ ಎಂಬುವರು ವಿಮ್ಸ್ ಗೆ ಇದೇ 24 ರಂದು ದಾಖಲಾಗಿ 26 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ಅರೋಗ್ಯ ಅಧಿಕಾರಿಗಳಿಂದ ವರದಿ ಪಡೆಯಲಾಗಿದೆ. ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲಾಗುವುದು” ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...