ಬನವಾಸಿ ಹೋಬಳಿ ವ್ಯಾಪ್ತಿಯ ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ₹7 ಕೋಟಿ 50 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಶಿವರಾಮ ಹೆಬ್ಬಾರ್ ಅವರು, “ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ” ಎಂದು ತಿಳಿಸಿದರು. ಸಾಮಾಜಿಕವಾಗಿ ಹಿಂದುಳಿದ ಮತ್ತು ಮೂಲಸೌಕರ್ಯ ಕೊರತೆ ಎದುರಿಸುತ್ತಿರುವ ಪರಿಶಿಷ್ಟ ಜಾತಿ ಕಾಲೋನಿಗಳಿಗೆ ಉತ್ತಮ ರಸ್ತೆ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಹಾಗೂ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವುದು ಈ ಯೋಜನೆ ಮುಖ್ಯ ಗುರಿಯಾಗಿದೆ. ಈ ಅನುದಾನದಡಿ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣದಂತಹ ಪ್ರಮುಖ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಎಂದು ಶಾಸಕರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿರಸಿ | ಬೆಳಗಾವಿಯಲ್ಲಿ ಡಿಸೆಂಬರ್ 23ರಂದು ‘ನಮ್ಮ ನಡೆ ಮಾದಿಗರ ಕೇರಿಯ ಕಡೆಗೆ’ ಜನಾಂದೋಲನ ಸಮಾವೇಶ
ಈ ಕಾರ್ಯಕ್ರಮದಲ್ಲಿ ಬನವಾಸಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗಣಪತಿ ನಾಯ್ಕ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದ್ಯಾಮಣ್ಣ ದೊಡ್ಮನಿ, ಬದನಗೋಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಟರಾಜ ಹೊಸೂರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಸವರಾಜ ದೊಡ್ಮನಿ ಮತ್ತು ರೂಪಾ ನಾಯ್ಕ, ಕಾಳಂಗಿ ಸೊಸೈಟಿ ಅಧ್ಯಕ್ಷರಾದ ಆರ್.ಪಿ.ಗೌಡ್ರು, ಎ.ಪಿ.ಎಮ್.ಸಿ ಮಾಜಿ ಅಧ್ಯಕ್ಷರಾದ ಪ್ರಶಾಂತ ಗೌಡ, ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಉಮೇಶ್ ಗೌಡ್ರು, ಅಕ್ಷಯ ಜಕ್ಲಣ್ಣನವರ್ ಸೇರಿದಂತೆ ಇತರ ಪ್ರಮುಖರು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು





