ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಅ.3ರಂದು ರಾಯಚೂರು ಬಂದ್: ಅಂಬಣ್ಣ ಅರೋಲಿಕರ್

Date:

ಒಳಮೀಸಲಾತಿ ಜಾರಿ ಮಾಡುವುದರಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಖಂಡಿಸಿ ಅಕ್ಟೋಬರ್ 3ರಂದು ರಾಯಚೂರು ಜಿಲ್ಲಾ ಬಂದ್‌ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದು ಪರಿಶಿಷ್ಟ ಜಾತಿ ಒಳಮೀಸಲಾತಿ ಐಕ್ಯ ಹೋರಾಟ ಸಮಿತಿ ಮುಖಂಡ ಅಂಬಣ್ಣ ಅರೋಲಿಕರ್‌ ತಿಳಿಸಿದರು.

ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಮೀನಮೇಷ ಧೋರಣೆಯನ್ನು ಅನುಸರಿಸುತ್ತಿರುವುದು ಖಂಡನೀಯ. ಒಳಮೀಸಲಾತಿ ಜಾರಿಗಾಗಿ ಸುಮಾರು 40 ವರ್ಷಗಳಿಂದ ನಿರಂತರವಾಗಿ ಕಾನೂನು ಹಾಗೂ ಬೀದಿ ಹೋರಾಟ ಮಾಡಿದ್ದೇವೆ. ಒಳಮೀಸಲಾತಿ ವಿಚಾರವಾಗಿ ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ತೀರ್ಪು ನೀಡಿದರೂ, ರಾಜ್ಯದ ಕಾಂಗ್ರೆಸ್‌ ಸರ್ಕಾರವು ಎರಡು ತಿಂಗಳಿನಿಂದ ಯಾವುದೇ ರೀತಿಯ ಕ್ರಮ ವಹಿಸದೇ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದರು.

ರಾಯಚೂರು

ಈಗಾಗಲೇ ಮಸ್ಕಿಯಲ್ಲಿ ಬೃಹತ್‌ ಹೋರಾಟವನ್ನು ನಡೆಸಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟಗಳನ್ನು ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುವುದು. ಬರುವ ಅಕ್ಟೋಬರ್ 2ರೊಳಗೆ ಬೇಡಿಕೆ ಈಡೇರಿಸಲು ಮುಂದಾಗಬೇಕು. ಇಲ್ಲವಾದಲ್ಲಿ ಅ.3ರಂದು ರಾಯಚೂರು ಜಿಲ್ಲೆಯ ಎಲ್ಲ ಏಳು ತಾಲ್ಲೂಕುಗಳನ್ನು ಬಂದ್‌ ಮಾಡಿ ಪ್ರತಿಭಟಿಸಲಾಗುವುದು. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದಾದ್ಯಂತ ಹೋರಾಟ ವಿಸ್ತರಿಸಲಾಗುವುದು ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಶಿವಮೊಗ್ಗ | ಕುಲಾಂತರಿ ಬೆಳೆಗಳಿಗೆ ಸಂಬಂಧಿಸಿ ರಾಷ್ಟ್ರೀಯ ನೀತಿ ರೂಪಿಸಲು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ಸಮಿತಿ ಮುಖಂಡರಾದ ಬಾಲಸ್ವಾಮಿ ಕೊಡ್ಲಿ, ಎಂ.ವಿರೂಪಾಕ್ಷಿ, ಪಿ.ಯಲ್ಲಪ್ಪ, ಕೆ.ಪಿ.ಅನಿಲ ಕುಮಾರ, ಶಂಕ್ರಪ್ಪ ಹೊಸಮನಿ, ಜೆ.ಬಿ.ರಾಜು, ವಿಕ್ರಮ, ವೀರೇಶ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...