ಬೆಂಗಳೂರು | ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Date:

ಬೆಂಗಳೂರಿನಲ್ಲಿ ಯುವಕನೊಬ್ಬನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿ ರೌಡಿಶೀಟರ್ ಪವನ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ. ಸಂತ್ರಸ್ತ ಯುವಕ ವಿಶ್ವಾಸ್‌ ಎಂಬಾತ ರೌಡಿಶೀಟರ್‌ ವಿರುದ್ಧ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ. ಇದನ್ನು ತಿಳಿದ ಪವನ್, ಯುವಕನನ್ನು ಬೆತ್ತಲೆಗೊಳಿಸಿದ್ದ ಹಲ್ಲೆ ಮಾಡಿದ್ದ ಎಂದು ಆರೋಪಿಸಲಾಗಿದೆ.

ಆರೋಪಿ ಪವನ್‌ನನ್ನು ಬೆಂಗಳೂರಿನ ಗೋವಿಂದರಾಜನಗರ ಪೊಲೀಸರು ತುಮಕೂರಿನಲ್ಲಿ ಬಂಧಿಸಿದ್ದಾರೆ. ಆತನ ಕಾಲಿಗೆ ಗುಂಡೇಟು ಬಿದ್ದಿರುವುದರಿಂದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಯುವಕ ವಿಶ್ವಾಸ್‌ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದ ಪವನ್ ತನ್ನ ಮೊಬೈಲ್ಅನ್ನು ಸ್ವಿಚ್‌ಆಫ್ ಮಾಡಿಕೊಂಡಿದ್ದ. ಆತನ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಈ ನಡುವೆ, ಹಣಕ್ಕಾಗಿ ರಾತ್ರಿ ವೇಳೆ ವಾಹನಗಳಲ್ಲಿ ಬರುವವರನ್ನು ಅಡ್ಡಗಟ್ಟಿ ರಾಬರಿ ಮಾಡಲು ತಂತ್ರ ಎಣೆದಿದ್ದ, ಪವತ್, ಮಂಗಳವಾರ ಮುಂಜಾನೆ ತನ್ನ ಮೊಬೈಲ್ ಆನ್‌ ಮಾಡಿದ್ದಾನೆ. ಕೂಡಲೇ ನೆಟ್‌ವರ್ಕ್‌ ಆಧಾರದ ಮೇಲೆ ಆತ ಇರುವ ಸ್ಥಳವನ್ನು ಪತ್ತೆ ಹಚ್ಚಿದ ಪೊಲೀಸರು ಆತನಿಂದ ಸ್ಥಳದ ಮೇಲೆ ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ,​ ಕಾನ್ಸ್​ಟೇಬಲ್​ ವೆಂಕಟೇಶ್ ಎಂಬವರ ಮೇಲೆ ಆರೋಪಿ ಪವನ್ ಹಲ್ಲೆ ಮಾಡಿ, ಪರಾರಿಯಾಗಲು ಯತ್ನಿಸಿದ್ದಾನೆ. ಇನ್ಸ್‌ಪೆಕ್ಟರ್‌ ಸುಬ್ರಮಣ್ಯ ಅವರ ಮೇಲೂ ಹಲ್ಲೆಗೆ ಮುಂದಾಗಿದ್ದಾನೆ. ಆಗ ಆರೋಪಿಯ ಕಾಲಿಗೆ ಇನ್ಸ್‌ಪೆಕ್ಟರ್‌ ಗುಂಡು ಹಾರಿಸಿದ್ದು, ಆತನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...