ಬೆಂಗಳೂರು | ರಾಜ್ಯಾದ್ಯಂತ 600 ಇಂದಿರಾ ಕ್ಯಾಂಟೀನ್ ತಲೆ ಎತ್ತಲಿವೆ: ಸಿಎಂ ಸಿದ್ದರಾಮಯ್ಯ

Date:

ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿದ್ದು, ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ (ಮಾ.11) ಇಂದಿರಾ ಕ್ಯಾಂಟೀನ್ಅನ್ನು ಅವರು ಉದ್ಘಾಟಿಸಿದರು.

ವಿಮಾನ ನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಿತ್ತು. ಇಲ್ಲಿಗೆ ಇಂದಿರಾ ಕ್ಯಾಂಟೀನ್ ಅಗತ್ಯವಿತ್ತು. ಅದಕ್ಕಾಗಿ ಇಂದು ಒಂದು ಕ್ಯಾಂಟೀನನ್ನು ಉದ್ಘಾಟಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಒಟ್ಟು 2 ಇಂದಿರಾ ಕ್ಯಾಂಟೀನ್ ಸ್ಥಾಪನೆಯಾಗಲಿವೆ ಎಂದು ಭರವಸೆ ನೀಡಿದರು.

ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರೂ. ಮಧ್ಯಾಹ್ನ ಮತ್ತು ರಾತ್ರಿ ಊಟ 10 ರೂ.ಗಳಿಗೆ ದೊರಕಲಿದೆ. ಆಹಾರದ ಮೆನು ಸಹ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್ ಹಾಲ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಪ್ರತಿ ವಾರ್ಡ್‍ನಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು ಮುಚ್ಚಿಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನಃ ಪ್ರಾರಂಭಿಸಿದ್ದೇವೆ ಎಂದರು.

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದೆಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಭೆಗಳನ್ನು ನಡೆಸಿದ್ದು, ಸೂಕ್ತ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಹಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸೇರಿದಂತೆ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...