ಬೆಂಗಳೂರು | 24 ವರ್ಷದ ಶಿಕ್ಷಕಿಯನ್ನು ಪ್ರೀತಿಸಿದ 17 ವರ್ಷದ ಬಾಲಕ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

Date:

ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ಅಪ್ರಾಪ್ತ ಬಾಲಕ 24 ವರ್ಷದ ಶಿಕ್ಷಕಿಯನ್ನು ಪ್ರೀತಿ ಮಾಡಿದ ಕಾರಣಕ್ಕೆ ಹಲ್ಲೆಗೊಳಗಾಗಿ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸದ್ಯ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಆರೋಪದಡಿ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

17 ವರ್ಷದ ಬಾಲಕನ ಕುಟುಂಬ ಬೆಂಗಳೂರಿನ ನಾಗರಭಾವಿ ರಸ್ತೆಯ ಬೈರವೇಶ್ವರ ನಗರದಲ್ಲಿ ನೆಲೆಸಿದೆ. ಈತ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾನೆ. ಬಾಲಕ ನೆಲೆಸಿದ್ದ ಏರಿಯಾದ ಖಾಸಗಿ ಶಾಲೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕಿಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಾನೆ.

ಬಳಿಕ ಶಿಕ್ಷಕಿ ಮತ್ತು ಬಾಲಕ ಇಬ್ಬರು ಸ್ವಲ್ಪ ದಿನ ಸುತ್ತಾಡಿದ್ದಾರೆ. ಆಗಾಗ ಕರೆ ಮಾಡಿ ಮಾತಾಡಿದ್ದಾರೆ. ಈ ವಿಷಯ ಬಾಲಕನ ತಂದೆಗೆ ತಿಳಿದ ತಕ್ಷಣ ಆತ ಇಬ್ಬರಿಗೂ ಬೈದು ಬುದ್ಧಿವಾದ ಹೇಳಿದ್ದಾರೆ. ಈ ಘಟನೆ ಬಳಿಕ ಕೆಲವು ದಿನ ದೂರ ಇದ್ದ ಇಬ್ಬರು ಮತ್ತೆ ಕರೆ ಮಾಡಿ ಮಾತಾಡಲು ಆರಂಭಿಸಿದ್ದಾರೆ.

ಅಕ್ಟೋಬರ್ 1ರಂದು ಬಾಲಕನ ಹುಟ್ಟುಹುಬ್ಬ ಇದ್ದ ಹಿನ್ನೆಲೆ ಇಬ್ಬರೂ ಭೇಟಿಯಾಗಿದ್ದಾರೆ. ಬಸವೇಶ್ವರ ನಗರದ ಬೇಕರಿಯೊಂದರಲ್ಲಿ ಕೇಕ್ ಕತ್ತರಿಸಿ ಹುಟ್ಟಿದ ದಿನವನ್ನು ಆಚರಿಸಿದ್ದಾರೆ. ನಂತರ ಅಲ್ಲೇ ಸಮೀಪ ಇರುವ ಪಾರ್ಕ್‌ನಲ್ಲಿ ಕುಳಿತು ಮಾತನಾಡುತ್ತಿದ್ದಾರೆ.

ಬಾಲಕ ಮತ್ತು ಶಿಕ್ಷಕಿ ಇಬ್ಬರೂ ಪಾರ್ಕ್‌ನಲ್ಲಿ ಕುಳಿತು ಮಾತನಾಡುವ ವೇಳೆ, ಈ ವಿಷಯ ಶಿಕ್ಷಕಿಯನ್ನು ಮದುವೆಯಾಗುವ ಹುಡುಗನಿಗೆ ತಿಳಿದಿದೆ. ಆತ ಶಿಕ್ಷಕಿಯ ತಮ್ಮನಿಗೆ ಈ ಬಗ್ಗೆ ಕರೆ ಮಾಡಿ ತಿಳಿಸಿದ್ದಾನೆ.

‘ನಮ್ಮ ಅಕ್ಕನ ಸಹವಾಸಕ್ಕೆ ಬರಬೇಡ’ ಎಂದು ಶಿಕ್ಷಕಿಯ ತಮ್ಮ ಶಶಾಂಕ್ ಬಾಲಕನ ಮೇಲೆ ಹಲ್ಲೆ ಮಾಡಿದ್ದಾನೆ.

ಬಾಲಕ ತೀವ್ರ ಗಾಯಗೊಂಡ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಮತ್ತೆ ಎಚ್ಚರಿಕೆ ಕೊಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ? ಮೋದಿ ನಿರಂಕುಶ ಪ್ರಭುತ್ವದಲ್ಲಿ ಪ್ರಾಮಾಣಿಕತೆಗೆ ಭಾರಿ ಬೆಲೆ ತೆರಬೇಕಾಗಿದೆ: ಮುಖ್ಯಮಂತ್ರಿ ಚಂದ್ರು

ಮಗ ಗಾಯಗೊಂಡಿರುವುದನ್ನು ಕಂಡ ಬಾಲಕನ ತಂದೆ ಹಲ್ಲೆ ಬಗ್ಗೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...