ಬೆಂಗಳೂರು | ಸಾಲು ಸಾಲು ಅಗ್ನಿ ದುರಂತ; ಪಬ್, ಹೋಟೆಲ್​​, ರೆಸ್ಟೋರೆಂಟ್ ಪರಿಶೀಲನೆಗೆ ಸೂಚನೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ನಾಲ್ಕು ಕಡೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡಗಳು ಪದೇಪದೆ ಸಂಭವಿಸುತ್ತಿರುವ ಹಿನ್ನೆಲೆ, ನಗರದಲ್ಲಿರುವ ಪಬ್, ಹೋಟೆಲ್​​, ರೆಸ್ಟೋರೆಂಟ್, ಬೃಹತ್ ಮಳಿಗೆಗಳನ್ನು ಪರಿಶೀಲನೆ ನಡೆಸುವಂತೆ ಅಗ್ನಿಶಾಮಕ ಇಲಾಖೆ ಡಿಜಿ ಕಮಲ್ ಪಂತ್ ಅವರು ಇಲಾಖೆ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ.

ನಗರದಲ್ಲಿ ನಡೆದ ಸಾಲು ಸಾಲು ಅಗ್ನಿ ದುರಂತಗಳಲ್ಲಿ ಅತ್ತಿಬೆಲೆ ಪಟಾಕಿ ಅಗ್ನಿ ಅವಘಡದಲ್ಲಿ 17 ಜನ ಸಾವನ್ನಪ್ಪಿದ್ದರೆ, ರಾಸಾಯನಿಕ ಸೋರಿಕೆಯಿಂದ ನಗರದ ಚೋಳರಪಾಳ್ಯದಲ್ಲಿರುವ ಅಗರಬತ್ತಿ ಗೋದಾಮಿಗೆ ಬೆಂಕಿ ಹೊತ್ತಿ, ಅಪಾರ ಪ್ರಮಾಣದ ಆಸ್ತಿ ಹಾನಿಯಾಗಿದೆ. ಜತೆಗೆ 5ಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾಗಿವೆ. ಇನ್ನು ಲಗ್ಗೆರೆಯಲ್ಲಿ ಗುಜರಿ ಅಂಗಡಿಗೆ ಬೆಂಕಿ ಹೊತ್ತಿ ಅಪಾರ ಹಾನಿ ಉಂಟುಮಾಡಿದೆ. ಇದೀಗ ಅ.18ರಂದು ಕೋರಮಂಗಲದಲ್ಲಿರುವ ಪಬ್‌ವೊಂದಕ್ಕೆ ಬೆಂಕಿ ಹೊತ್ತಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಪ್ರಾಣ ಉಳಿಸಿಕ್ಕೊಳ್ಳಲು ಓರ್ವ ನಾಲ್ಕನೇ ಮಹಡಿಯಿಂದ ಹಾರಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

“ನಗರದಲ್ಲಿ ಕೆಲವೆಡೆ ಮುಂಜಾಗೃತಾ ಕ್ರಮಗಳನ್ನು ಅನುಸರಿಸುತ್ತಿಲ್ಲ. ಕಂಪನಿ, ಅಂಗಡಿ, ಕಟ್ಟಡ ಸೇರಿದಂತೆ ಹಲವೆಡೆ ಬೆಂಕಿ ನಂದಿಸುವ ಸಲಕರಣೆಗಳನ್ನು ಹೊಂದದೆ ಇರುವುದು ಕಂಡುಬಂದಿದೆ. ಹಾಗಾಗಿ, ನಗರದ ಎಲ್ಲ ಬಹು ಮಹಡಿ ಕಟ್ಟಡಗಳು, ಅಪಾರ್ಟ್‌ಮೆಂಟ್‌, ಹೋಟೇಲ್, ರೆಸ್ಟೋರೆಂಟ್‌ಗಳ ಪರಿಶೀಲನೆ ನಡೆಸಬೇಕು” ಎಂದು ಕಮಲ್‌ ಪಂತ್ ಅವರು ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಂಡನನ್ನು ತಾನೇ ಕೊಲೆ ಮಾಡಿ ಹುಡುಕಿಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದ ಎರಡನೇ ಪತ್ನಿ

ಅ.20 ರಿಂದ ಅಗ್ನಿಶಾಮಕ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ನಗರದಲ್ಲಿರುವ ಕಟ್ಟಡಗಳ ಪರಿಶೀಲನೆ ನಡೆಸಲಿದ್ದಾರೆ. ಬೆಂಕಿ ನಂದಿಸುವ ಸಲಕರಣೆಗಳನ್ನು ಹೊಂದದ ಹಾಗೂ ನಿಯಮ ಪಾಲಿಸದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...