ಬೆಂಗಳೂರು | ಪಿಎಚ್‌ಡಿ ಫೆಲೋಶಿಪ್‌ ಅನ್ನು ಮೂಲ ಸ್ವರೂಪದಲ್ಲಿಯೇ ಜಾರಿಗೊಳಿಸಿ: ಎಸ್‌ಐಒ ಆಗ್ರಹ

Date:

ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿಗಳ ಫೆಲೋಶಿಪ್‌ ಅನ್ನು ಮರು ಪರಿಶೀಲಿಸಿ ಮೂಲ ಸ್ವರೂಪದಲ್ಲಿಯೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸ್ಟೂಡೆಂಟ್‌ ಇಸ್ಲಾಮಿಕ್‌ ಆರ್ಗನೈಜೇಶನ್‌ (ಎಸ್‌ಐಒ) ಸರ್ಕಾರಕ್ಕೆ ಮನವಿ ಮಾಡಿದೆ.

ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನೆ ಮತ್ತು ಪ್ರತಿಭೆಯ ಮೂಲಕ ಸಾಮಾಜಿಕ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಆದರೆ ಇತ್ತೀಚಿನ ಸರ್ಕಾರದ ಬದಲಾದ ನೀತಿಗಳಿಂದ ಡಾಕ್ಟರೇಟ್ ಅಧ್ಯಯನವನ್ನು ಕೈಗೊಂಡಿರುವ ಅನೇಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.

ರಾಜ್ಯ ಸರ್ಕಾರ ಈ ಹಿಂದೆ ಅಲ್ಪಸಂಖ್ಯಾತ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಮಾಸಿಕ ₹25,000 ಫೆಲೋಶಿಪ್ ನೀಡುತ್ತಿತ್ತು. ಅದನ್ನು ಈಗ ₹8,333ಕ್ಕೆ ಇಳಿಸಲಾಗಿದೆ. ಈ ಮಹತ್ವದ ಕಡಿತದಿಂದ ಸಂಶೋಧಕರು ತಮ್ಮ ಮೂಲಭೂತ ಅಗತ್ಯಗಳನ್ನು ಪೂರೈಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಇದು ಅವರ ಶೈಕ್ಷಣಿಕ ಅನ್ವೇಷಣೆಗಳಿಗೆ ಅಪಾಯವನ್ನುಂಟು ಮಾಡಿದೆ. ಡಾಕ್ಟರೇಟ್ ಅಧ್ಯಯನಗಳಿಗೆ ಪೂರ್ಣ ಸಮಯದ ಬದ್ಧತೆಯ ಅಗತ್ಯವಿರುತ್ತದೆ. ಇದನ್ನು ಹಣಕಾಸಿನ ಬೆಂಬಲವಿಲ್ಲದೆ ಮುಂದುವರೆಸುವುದು ಕಷ್ಟಕರ. ಅನೇಕ ಅರ್ಹ ವಿದ್ಯಾರ್ಥಿಗಳು ತಮ್ಮ ಸಂಶೋಧನೆಯನ್ನು ತ್ಯಜಿಸಲು ಮುಂದಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಹಾಗಾಗಿ ಕೂಡಲೇ ಫೆಲೋಶಿಪ್‌ ಮರು ಪರಿಶೀಲಿಸಬೇಕು ಎಂದು ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ವಿಧಾನಸೌಧದ ಆವರಣದಲ್ಲಿ ಇಂದಿನಿಂದ ʼಪುಸ್ತಕ ಮೇಳʼ

ಉನ್ನತ ಶಿಕ್ಷಣದಲ್ಲಿ ಮುಸ್ಲಿಮರ ಒಟ್ಟು ದಾಖಲಾತಿ ಅನುಪಾತ ಗಮನಾರ್ಹವಾಗಿ ಕಡಿಮೆಯಾಗಿದೆ. 2020-21ರಂತೆ, ಮುಸ್ಲಿಮರ ದಾಖಲಾತಿ ಅನುಪಾತ 8.91% ರಷ್ಟಿದೆ. ಇದು ರಾಷ್ಟ್ರೀಯ ಸರಾಸರಿ 27.1% ಗಿಂತ ಗಮನಾರ್ಹವಾಗಿ ಕಡಿಮೆಯಾಗಿದೆ. ಹಣಕಾಸಿನ ತೊಡಕು ಪ್ರಾಥಮಿಕ ತಡೆಗೋಡೆಯಾಗಿದ್ದು ಇದು ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದಲ್ಲಿ ಮುಂದುವರೆಯುವುದನ್ನು ತಡೆಯುತ್ತಿದೆ. ಫೆಲೋಶಿಪ್‌ನಲ್ಲಿನ ಕಡಿತವು ಈ ಸಮಸ್ಯೆಯನ್ನು ಇನ್ನಷ್ಟು ಹದಗೇಡಿಸುತ್ತಿದೆ. ಇದು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಗುರಿಗಳನ್ನು ಸಾಧಿಸಲು ಮತ್ತಷ್ಟು ತಡೆಯಾಗುತ್ತಿದೆ ಎಂದು ಶೋಚನೀಯ. ಆದ್ದರಿಂದ ಸರ್ಕಾರ ತಡಮಾಡದೆ ₹25,000ಕ್ಕೆ ತುರ್ತಾಗಿ ಫೆಲೋಶಿಪ್ ಮರುಜಾರಿಗೊಳಿಸುವಂತೆ ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...