ಬೆಂಗಳೂರು | ಹೊಸ ಪಡಿತರ ಚೀಟಿ ವಿತರಿಸಿದಷ್ಟೇ, ಹಳೆ ಚೀಟಿ ರದ್ದಾಗಬೇಕು

Date:

ಹೊಸ ಪಡಿತರ ಚೀಟಿಗಳನ್ನು ವಿತರಿಸಿದಷ್ಟೇ ಪ್ರಮಾಣದಲ್ಲಿ ಹಳೆಯ ಪಡಿತರ ಚೀಟಿಗಳನ್ನು ರದ್ದು ಪಡಿಸಬೇಕು. ಒಟ್ಟಾರೆ ಈಗಿರುವ ಪಡಿತರ ಚೀಟಿಗಳ ಸಂಖ್ಯೆ ಹೆಚ್ಚಿಸುವಂತಿಲ್ಲ, ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆದೇಶವು ಅಧಿಕಾರಿಗಳನ್ನು ಇಕ್ಕಟ್ಟು ತಂದಿದೆ.

ರಾಜ್ಯದಲ್ಲಿ 10.88 ಲಕ್ಷ ಅಂತ್ಯೋದಯ ಮತ್ತು 1.16 ಕೋಟಿ ಬಿಪಿಎಲ್‌ ಕಾರ್ಡ್‌ದಾರರಿದ್ದಾರೆ. ಹೊಸ ಕಾರ್ಡ್‌ಗಾಗಿ 2.95 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಸಚಿವ ಕೆ.ಎಚ್. ಮುನಿಯಪ್ಪ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಹಿಂದೆಯೇ ಇಲಾಖೆಯ ಈ ಆದೇಶ ಬಂದಿದೆ.

ಒಟ್ಟು 2.95 ಲಕ್ಷ ಅರ್ಜಿಗಳ ಪೈಕಿ, 2.78 ಲಕ್ಷ ಅರ್ಜಿಗಳ ಪರಿಶೀಲನೆಯಾಗಿದೆ. 2.28 ಅರ್ಜಿಗಳು ಅರ್ಹತೆ ಪಡೆದಿವೆ. ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ, 27,486 ಅರ್ಜಿಗಳು ಸಲ್ಲಿಕೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸತತ ಆರು ತಿಂಗಳಿನಿಂದ ಪಡಿತರ ಪಡೆಯದ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಆದ್ಯತೆ ಅನುಸಾರ ಸೂಚಿಸಲಾಗಿದೆ. ಪಡಿತರ ಚೀಟಿಗಳನ್ನು ಪಡೆಯಲು ಅರ್ಹರಲ್ಲದವರೂ ಸಹ, ಚೀಟಿ ಪಡೆದ ಬಗ್ಗೆ ದೂರುಗಳಿವೆ. ಅಂತವರ ಕಾರ್ಡ್‌ಗಳನ್ನು ಪರಿಶೀಲಿಸಿ ರದ್ದುಪಡಿಸಲು ಆದೇಶಿಸಲಾಗಿದೆ.

ಪಡಿತರ ಚೀಟಿಗಳ ಆಧಾರದ ಮೇಲೆಯೇ ಗೃಹಲಕ್ಷ್ಮೀ, ಆಯುಷ್ಮಾನ್, ಆರೋಗ್ಯ ಚಿಕಿತ್ಸೆಯ ಐದು ಲಕ್ಷ ವೆಚ್ಚ, ವಿವಿಧ ಇಲಾಖೆ, ನಿಗಮಗಳ ಫಲಾನುಭವಿಗಳ ಆಯ್ಕೆ, ಸಲ ಸೌಲಭ್ಯ ನೀಡಲಾಗುತ್ತದೆ. ಪಡಿತರ ಚೀಟಿಗಳ ಸಂಖ್ಯೆ ಹೆಚ್ಚಳವಾದರೆ ಸರ್ಕಾರಕ್ಕೂ ಹೊರೆಯಾಗುವ ಕಾರಣ ಪಡಿತರ ಕಾರ್ಡ್ ಗಳ ಸಂಖ್ಯೆ ಹೆಚ್ಚಳವಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.

ಆರು ತಿಂಗಳಿನಿಂದ ಪಡಿತರ ಪಡೆಯದ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...