ಬೆಂಗಳೂರು | ರಸ್ತೆಗುಂಡಿ ಮುಚ್ಚಲು ಪ್ರತಿ ವಾರ್ಡ್‌ಗೆ ₹15 ಲಕ್ಷ ಬಿಡುಗಡೆ ಮಾಡಿದ ಬಿಬಿಎಂಪಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಎಲ್ಲೇಂದರಲ್ಲಿ ಗುಂಡಿಗಳು ಕಾಣಿಸುತ್ತಿವೆ. ನಗರದಲ್ಲಿ ಬರೋಬ್ಬರಿ 11,366 ರಸ್ತೆ ಗುಂಡಿಗಳಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂಕಿ ಅಂಶಗಳು ತಿಳಿಸಿವೆ. ಇಷ್ಟು ತಿಂಗಳು ಮಳೆ ಇದ್ದ ಕಾರಣ ರಸ್ತೆ ಗುಂಡಿಗಳನ್ನು ಮುಚ್ಚಲು ಆಗಿಲ್ಲ ಎಂದು ಪಾಲಿಕೆ ತಿಳಿಸಿದೆ. ಇದೀಗ ಮಾನ್ಸೂನ್‌ ಮುಗಿದಿದ್ದು, ಪಾಲಿಕೆ ರಸ್ತೆ ಗುಂಡಿಗಳನ್ನು ಮುಚ್ಚಲು ಸಜ್ಜಾಗಿದೆ. ಗುಂಡಿಗಳನ್ನು ಮುಚ್ಚಲು 225 ವಾರ್ಡ್ಗಳಿಗೆ ತಲಾ ₹15 ಲಕ್ಷ ಬಿಡುಗಡೆ ಮಾಡಿದೆ.

ಬೆಂಗಳೂರಿನಲ್ಲಿ ಮಳೆಯ ಕಾರಣದಿಂದಾಗಿ ರಸ್ತೆ ಗುಂಡಿಗಳು ನಿರ್ಮಾಣ ಆಗುತ್ತವೆ. ಮಳೆ ಬಿಟ್ಟೂ ಬಿಡದೆ ಸುರಿಯುವ ಕಾರಣದಿಂದಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿಲ್ಲ. ಇದೇ ಕಾರಣಕ್ಕೆ ಬೆಂಗಳೂರು ನಗರ ಗುಂಡಿ ಮುಕ್ತ ಆಗುತ್ತಿಲ್ಲ ಎಂಬುವುದು ಬಿಬಿಎಂಪಿ ವಾದ. ನಗರದಲ್ಲಿ ಸದ್ಯ 11,366 ರಸ್ತೆ ಗುಂಡಿಗಳು ಇವೆ ಎಂದು ಬಿಬಿಎಂಪಿ ಅಂಕಿ ಅಂಶಗಳು ತಿಳಿಸಿವೆ. ಗುಂಡಿಗಳನ್ನು ಮುಚ್ಚಲು ಪ್ರತಿ ವಾರ್ಡ್ಗೆ ₹15 ಲಕ್ಷ ಹಣವನ್ನು ಬಿಡುಗಡೆ ಮಾಡಲಾಗಿದೆ. ಹಲವು ವಾರ್ಡ್ಗಳ ಟೆಂಡರ್ಕರೆಯಲಾಗಿದ್ದು, ಕೆಲವು ಪ್ರದೇಶದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ.

225 ವಾರ್ಡ್ಗಳಿಗೆ ತಲಾ ₹15 ಲಕ್ಷದಂತೆ ₹33 ಕೋಟಿಯನ್ನು ಹಂಚಲಾಗಿದೆ. ಕಳೆದ ವರ್ಷ ವಾರ್ಡ್ವೊಂದಕ್ಕೆ ₹20 ಲಕ್ಷ ನೀಡಲಾಗಿತ್ತು. ಕಳೆದ ಬಾರಿಯ ಅನುದಾನ ಬಳಕೆ ತೃಪ್ತಿಕರವಾಗಿಲ್ಲದ ಕಾರಣ ಬಾರಿ ಹಣ ಕಡಿತ ಮಾಡಲಾಗಿದೆ ಎನ್ನಲಾಗಿದೆ. ಅನುದಾನವನ್ನು ಸರಿಯಾಗಿ ಬಳಕೆ ಮಾಡಿಕೊಂಡರೆ, ₹15 ಲಕ್ಷದಲ್ಲಿ ವಾರ್ಡ್‌ಗಳಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚಿಸಬಹುದು. 1 ಚದರ ಮೀಟರ್‌ ಗುಂಡಿ ಮುಚ್ಚಲು ₹1,200 ವೆಚ್ಚವಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, “ನವೆಂಬರ್ನಿಂದ ಗುಂಡಿಗಳನ್ನು ಮುಚ್ಚಲು ವಲಯ ಮತ್ತು ವಾರ್ಡ್ ಎಂಜಿನಿಯರ್ಗಳಿಗೆ ತಿಳಿಸಲಾಗಿದೆ. ನವೆಂಬರ್‌ನಿಂದ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭವಾಗಲಿದೆ. ವಾರ್ಡ್ ಸಮಿತಿ ಕಾಮಗಾರಿಗಳ ಮೇಲ್ವಿಚಾರಣೆ ನಡೆಸಲಿದೆ. ಪ್ರತಿ ವಾರ್ಡ್ಗೆ ₹15 ಲಕ್ಷ ನೀಡಲಾಗಿದ್ದು ಅವುಗಳಲ್ಲಿ ಕೆಲವು ಕಾಮಗಾರಿ ಈಗಾಗಲೇ ಆರಂಭಗೊಂಡಿದೆ. ಟೆಂಡರ್ ಒಪ್ಪಂದವು 12 ತಿಂಗಳ ಅವಧಿಗೆ ಇರುತ್ತದೆಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ; ಗಡುವು ವಿಸ್ತರಣೆ ಸಾಧ್ಯತೆ

ಬಿಬಿಎಂಪಿ ಅಂಕಿ ಅಂಶಗಳ ಪ್ರಕಾರ ನಗರದಲ್ಲಿ ಸದ್ಯ 11,366 ರಸ್ತೆ ಗುಂಡಿಗಳಿವೆ. ಪೈಕಿ ದಾಸರಹಳ್ಳಿ ವಲಯದಲ್ಲೇ ಅತಿ ಹೆಚ್ಚು ಗುಂಡಿಗಳಿವೆ. ಆರ್ಆರ್ ನಗರ ವ್ಯಾಪ್ತಿಯಲ್ಲಿ 845, ಬೊಮ್ಮನ ಹಳ್ಳಿ ವಲಯದಲ್ಲಿ 319, ಮಹದೇವಪುರ 595, ಬೆಂಗಳೂರು ದಕ್ಷಿಣ 401, ಬೆಂಗಳೂರು ಪಶ್ಚಿಮ 422 ಹಾಗೂ ಯಲಹಂಕ ವಲಯದಲ್ಲಿ 423 ರಸ್ತೆ ಗುಂಡಿಗಳಿವೆ ಎಂದು ತಿಳಿದುಬಂದಿದೆ.

ಇನ್ನು ವಿಧಾನಸಭಾ ಕ್ಷೇತ್ರವಾರು ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಅನುದಾನ ಮೀಸಲಿಟ್ಟಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ₹3.6 ಕೋಟಿ ಹಣ ಮೀಸಲಿಡಲಾಗಿದೆ. ಶಿವಾಜಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ₹1.5 ಕೋಟಿ, ಚಿಕ್ಕಪೇಟೆ, ಜಯನಗರ ಹಾಗೂ ಬಸವನಗುಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ತಲಾ ₹90 ಲಕ್ಷ, ಮಲ್ಲೇಶ್ವರಂ ₹75 ಲಕ್ಷ, ಗೋವಿಂದರಾಜನಗರ ₹60 ಲಕ್ಷ, ಆರ್ಆರ್ ನಗರ, ಹೆಬ್ಬಾಳ, ಪುಲಕೇಶಿ ನಗರ ಹಾಗೂ ಶಾಂತಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ತಲಾ ₹15 ಲಕ್ಷ ಅನುದಾನ ಮೀಸಲಿಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...