ಬೆಂಗಳೂರು | ಬಿಎಂಟಿಸಿ ಬಸ್ ಆಟೋಗೆ ಡಿಕ್ಕಿಯಾದ ಪರಿಣಾಮ ಸರಣಿ ಅಪಘಾತ; ಚಾಲಕ, ಆಯುರ್ವೇದ ವೈದ್ಯ ಸ್ಥಳದಲ್ಲೇ ಸಾವು

Date:

ಬಿಎಂಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದು, ಮುಂದೆ ಹೋಗುತ್ತಿದ್ದ ಬಸ್​​​ನ ಹಿಂಭಾಗಕ್ಕೆ ತಾಕಿದ್ದರಿಂದ ಆಟೋ ಅಪ್ಪಚ್ಚಿಯಾಗಿ ಚಾಲಕ ಹಾಗೂ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಭವಿಸಿದೆ.

ಕೆ ಪಿ ಅಗ್ರಹಾರದ ಅನಿಲ್ ಕುಮಾರ್(50) ಹಾಗೂ ಹನುಮಂತನಗರದ ವಿಷ್ಣು ಭಾಪಟ್(80) ಸಾವನ್ನಪ್ಪಿದವರು. ಬೆಳಿಗ್ಗೆ 11.30ರ ಸುಮಾರಿಗೆ ಹೊಸಕೆರೆಹಳ್ಳಿ ಕ್ರಾಸ್ 80 ಅಡಿರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬಿಎಂಟಿಸಿ ಬಸ್ ಜಪ್ತಿ ಮಾಡಿ,​​ ಚಾಲಕನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಬನಶಂಕರಿ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

“ಮೃತ ಆಟೋ ಚಾಲಕ ಅನಿಲ್ ಕುಮಾರ್, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕೆ ಪಿ ಅಗ್ರಹಾರದಲ್ಲಿ ನೆಲೆಸಿದ್ದರು. ಮತ್ತೋರ್ವ ದುರ್ದೈವಿ ವಿಷ್ಣು ಭಾಪಟ್ ಅವರು ಆಯುರ್ವೇದ ವೈದ್ಯರಾಗಿ ಹನುಮಂತನಗರದಲ್ಲಿ ವಾಸಿಸುತ್ತಿದ್ದರು. ಕೆಲಸದ ಸಲುವಾಗಿ ಬೆಳಿಗ್ಗೆ ವಿಷ್ಣು ಭಾಪಟ್ ಅವರು ಆಟೋ ಹತ್ತಿದ್ದರು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೊಸಕೆರೆಹಳ್ಳಿ ಕ್ರಾಸ್​​ನ 80 ಅಡಿ ರಸ್ತೆ ಕಡೆಯಿಂದ ಸೀತಾ ಸರ್ಕಲ್ ಕಡೆಗೆ ಬರುತ್ತಿದ್ದ ಆಟೋಗೆ ಬಿಎಂಟಿಸಿ ಬಸ್ ಹಿಂಬದಿಯಿಂದ ಗುದ್ದಿದೆ. ಅಪಘಾತದ ರಭಸಕ್ಕೆ‌ ಆಟೋದ ಮುಂದೆ ಹೋಗುತ್ತಿದ್ದ ಮತ್ತೊಂದು ಬಿಎಂಟಿಸಿ ಬಸ್ ಹಿಂಭಾಗಕ್ಕೆ ಗುದ್ದಿದ ಆಟೋ ನಜ್ಜುಗುಜ್ಜಾಗಿದೆ. ಎರಡು ಬಸ್‌ಗಳ ನಡುವೆ ಸಿಲುಕಿ ಅಪ್ಪಚ್ಚಿಯಾದ ಆಟೋದಲ್ಲಿದ್ದ ಚಾಲಕ ಹಾಗೂ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಇಬ್ಬರ ಮೃತದೇಹಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...