ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಶ್ಚಂದ್ರ ಘಾಟ್ ಬಳಿ ಶುಕ್ರವಾರ ವರದಿಯಾಗಿದೆ.
ಕುಸುಮಿತಾ(21) ಎಂಬುವರನ್ನು ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಕುಸುಮಿತಾ, ಶುಕ್ರವಾರ ಬೆಳಗ್ಗೆ 8.30ರ ಸುಮಾರಿಗೆ ತಮ್ಮ ನಿವಾಸದಿಂದ ಕಾಲೇಜಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು.
A second-year engineering student died on the spot after a #BMTCBus knocked down her two-wheeler near #HarischandraGhat in #Bengaluru‘s #Malleswaram when she was on her way to college today morning.
The deceased was identified as Kusumitha (20), a student at #JainCollege. The… pic.twitter.com/X03u58GIKl
— Hate Detector 🔍 (@HateDetectors) February 2, 2024
ಇದೇ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಹಿಂಬದಿಯಿಂದ ಢಿಕ್ಕಿ ಹೊಡೆದು ಕುಸುಮಿತಾ ಅವರು ಕೆಳಗೆ ಬಿದ್ದಿದ್ದಾರೆ. ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು ಎಂದು ವರದಿಯಾಗಿದೆ. ಘಟನೆಯ ದೃಶ್ಯಾವಳಿಯು ಬಿಎಂಟಿಸಿ ಬಸ್ನೊಳಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘಟನೆ ಸಂಬಂಧ ನಗರದ ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎಂಟಿಸಿ ಚಾಲಕನನ್ನು ಬಂಧಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ನೀಡಿರುವ ಪೂರ್ವ ಟ್ರಾಫಿಕ್ ಪೊಲೀಸ್ ಉಪ ಕಮಿಷನರ್ ಸಾರಾ ಫಾತಿಮಾ, “8.30 ರ ಸುಮಾರಿಗೆ ಕುಸುಮಿತಾ ಕಾಲೇಜಿಗೆ ತೆರಳುತ್ತಿದ್ದಾಗ ಬಸ್ ಸ್ಕೂಟರ್ಗೆ ಢಿಕ್ಕಿ ಹೊಡೆದು ಸ್ವಲ್ಪ ದೂರದವರೆಗೆ ಎಳೆದೊಯ್ದಿದೆ. ಬಸ್ ವಿದ್ಯಾರ್ಥಿನಿಯ ಮೇಲೆ ಹರಿದಿರಲಿಲ್ಲ. ತೀವ್ರ ಗಾಯಗೊಂಡಿದ್ದರಿಂದ ಮೃತಪಟ್ಟಿದ್ದಾರೆ. ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದೇವೆ” ಎಂದು ತಿಳಿಸಿದ್ದಾರೆ.





