ಬೆಂಗಳೂರು | ವಿಧಾನಸೌಧದ ಆವರಣದಲ್ಲಿ ಇಂದಿನಿಂದ ʼಪುಸ್ತಕ ಮೇಳʼ

Date:

ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಇದೇ ಮೊದಲ ಬಾರಿಗೆ ವಿಧಾನಸಭೆ ಸಚಿವಾಲಯವು ಪುಸ್ತಕ ಮೇಳ ಆಯೋಜಿಸಿದೆ.

ಮೇಳವು ಇಂದಿನಿಂದ (ಫೆ.27) ಶುರುವಾಗಲಿದ್ದು, ಐದು ದಿನಗಳ ವರೆಗೆ ಅಂದರೆ ಮಾ.3ರವರೆಗೆ ಇರಲಿದೆ. ಇಂದು ಸಂಜೆ 4 ಗಂಟೆಗೆ ಮೇಳಕ್ಕೆ ಚಾಲನೆ ದೊರೆಯಲಿದ್ದು, ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ನಡೆಯಲಿದೆ. ಪುಸ್ತಕ ಪ್ರದರ್ಶನ, ಸಂವಾದ, ಕವಿಗೋಷ್ಠಿ, ಪುಸ್ತಕ ಬಿಡುಗಡೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಳೈಸಲಿವೆ.

ವಿವಿಧ ಪ್ರಕಾಶನ ಸಂಸ್ಥೆಗಳ ಮಳಿಗೆಗಳ ಜತೆಗೆ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ವಿವಿಧ ಅಕಾಡೆಮಿಗಳ ಮಳಿಗೆಗಳೂ ಇರಲಿವೆ. ಕನ್ನಡ ಹಾಗೂ ಇತರೆ ಹಲವು ಭಾಷೆಗಳ ಪುಸ್ತಕಗಳು ರಿಯಾಯಿತಿ ದರದಲ್ಲಿ ಮಾರಾಟವಾಗಲಿವೆ. ಸಾಹಿತ್ಯ, ಕಲೆ, ಸಂಗೀತ, ರಾಜಕೀಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳ ಮುಖಂಡರು ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರದಂದು ʼಸರ್ವ ಸಮಭಾವದ ಚಿಂತನೆಗಳುʼ, ʼಮಕ್ಕಳ ಸಾಹಿತ್ಯʼ, ʼಅಂಗಾಂಗ ದಾನದ ಅರಿವುʼ, ʼಸಾಹಿತ್ಯ ಮತ್ತು ಚಲನಚಿತ್ರʼ ಹಾಗೂ ʼಓದಿನ ಸುಖʼ ವಿಷಯಗಳ ಮೇಲೆ ಸಂವಾದಗಳು ನಡೆಯಲಿವೆ. ಅದಾದ ಬಳಿಕ ಕವಿಗೋಷ್ಠಿ ಇರಲಿದೆ. ಸಂಜೆ 5 ಗಂಟೆಯಿಂದ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ, ಸಾಧುಕೋಕಿಲ ಹಾಗೂ ತಂಡದಿಂದ ಸಂಗೀತ ಸಂಜೆ ನಡೆಯಲಿದೆ.

ಇದನ್ನೂ ಓದಿ: ಫೆ.26ರಂದು ರಾಜಧಾನಿಯಲ್ಲಿ ಸಂಭ್ರಮದಿಂದ ನಡೆಯಲಿದೆ ಬೆಂಗಳೂರು ಬ್ಯಾರಿಗಳ ‘ಬ್ಯಾರಿ ಕೂಟ’

ಮಾ.2ರವರೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿರಲಿದೆ. ಮಾ.3ರಂದು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಪುಸ್ತಕಮೇಳ ವೀಕ್ಷಿಸಲಿದ್ದಾರೆ. ವಿಧಾನಮಂಡಲದ ಉಭಯ ಸದನಗಳ ಸದಸ್ಯರು ಮೇಳದಲ್ಲಿ ಭಾಗವಹಿಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...