ಬೆಂಗಳೂರು | ಉದ್ಯಮಿ ಅಪಹರಿಸಿ ₹50 ಲಕ್ಷಕ್ಕೆ ಬೇಡಿಕೆ; ನಾಲ್ವರ ಬಂಧನ

Date:

ಉದ್ಯಮದಲ್ಲಿ ಪಾಲುದಾರಳಾಗಿದ್ದ ಮಹಿಳೆಯೊಬ್ಬರು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ, ಉದ್ಯಮಿಯೊಬ್ಬರನ್ನು ಅಪಹರಿಸಿ ₹50 ಲಕ್ಷಕ್ಕೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಉದ್ಯಮಿಯನ್ನು ಪೊಲೀಸರು ರಕ್ಷಿಸಿದ್ದಾರೆ.

ಅಭಿಲಾಷ್ ದಾಮೋದರನ್ ಅಪಹರಣಕ್ಕೊಳಗಾದವರು. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಅಭಿಲಾಷ್ ಅವರು ಕೋಮಲ್ ಎಂಬುವವರೊಂದಿಗೆ ಉದ್ಯಮ ನಡೆಸುತ್ತಿದ್ದರು. ಇಬ್ಬರ ನಡುವೆ ನಡೆದ ಒಂದೂವರೆ ಕೋಟಿ ವ್ಯವಹಾರದಲ್ಲಿ ಕೆಲವು ಸಮಸ್ಯೆ ಉಂಟಾಗಿತ್ತು. ಇದರಿಂದ ಕೋಪಗೊಂಡಿದ್ದ ಕೋಮಲ್ ತನ್ನ ಎಂಟು ಜನ ತಂಡದೊಂದಿಗೆ ಅ.20 ರಂದು ರಾತ್ರಿ ಅಭಿಲಾಷ್ ಸಂಪಿಗೆಹಳ್ಳಿಯ ಮನೆಯ ಬಳಿ ಇದ್ದಾಗ ಅವರನ್ನು ಅಪಹರಿಸಿ ರಾಮಮೂರ್ತಿ ನಗರದ ಗೋಡಾನ್‌ನಲ್ಲಿ ಬಚ್ಚಿಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ, ಅಭಿಲಾಷ್ ಅವರ ಕುತ್ತಿಗೆಗೆ ಚಾಕು ಇಟ್ಟು, ಗನ್‌ ತೋರಿಸಿ ಹಣ ನೀಡುವಂತೆ ಬೆದರಿಸಲಾಗುತ್ತಿತ್ತು. ಈ ವೇಳೆ, ₹50 ಲಕ್ಷ ಹಣವನ್ನು ನೀಡುವಂತೆ ಧಮ್ಕಿ ಹಾಕಿದ್ದರು. ಜತೆಗೆ ಅಭಿಲಾಷ್ ಅವರ ತಲೆಗೆ ಬಿಯರ್‌ ಬಾಟಲಿಯಿಂದ ಹೊಡೆದು ಹಲ್ಲೆ ಮಾಡಿದ್ದರು. ಅಲ್ಲದೇ, ಅಭಿಲಾಷ್ ಅವರ ಪತ್ನಿ ಮತ್ತು ತಂದೆಗೆ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿದ್ದರು.

ಎಂಟು ಜನ ಆರೋಪಿಗಳು ಊಟಕ್ಕೆ ತೆರಳಿದಾಗ, ಅವರ ಫೋನ್ ಬಳಸಿ ಅಭಿಲಾಷ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ತಕ್ಷಣ ಮೊಬೈಲ್ ನಂಬರ್ ಟ್ರ್ಯಾಕ್ ಮಾಡಿ, ಅಕ್ಟೋಬರ್ 21ರಂದು ಬೆಳಗ್ಗೆ ಅಭಿಲಾಷ್​ನನ್ನು ರಕ್ಷಿಸಿದರು.

ಈ ಸುದ್ದಿ ಓದಿದ್ದೀರಾ? ಹುಲಿ ಉಗುರು | ವರ್ತೂರು ಸಂತೋಷ್​ ಬಳಿಕ ದರ್ಶನ್​, ವಿನಯ್​ ಗುರೂಜಿ ವಿರುದ್ಧ ದೂರು ದಾಖಲು

ಇದೇ ವೇಳೆ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಇನ್ನು ಕೋಮಲ ಮತ್ತಿತರ ಕೆಲ ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ, ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...