ಬೆಂಗಳೂರು | ರೈಡ್ ಕ್ಯಾನ್ಸಲ್ ಮಾಡಿದ್ದಕ್ಕೆ ಅಶ್ಲೀಲ ವಿಡಿಯೊ ಕಳುಹಿಸಿದ ಕ್ಯಾಬ್ ಚಾಲಕ!

Date:

ಬಾಡಿಗೆ ರದ್ದು ಮಾಡಿದ್ದಕ್ಕೆ ಕ್ಯಾಬ್‌ ಚಾಲಕನೊಬ್ಬ ಮಹಿಳೆಯ ವಾಟ್ಸ್‌ಆಪ್‌ಗೆ ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

32 ವರ್ಷದ ಮಹಿಳೆಯೊಬ್ಬರು ಷೋಷಕರ ಸಭೆ ಇದ್ದ ಹಿನ್ನೆಲೆ, ಮಗಳ ಶಾಲೆಗೆ ಹೋಗಿದ್ದಾರೆ. ಸಭೆ ಮುಗಿಸಿ ಮಗಳನ್ನು ಮನೆಗೆ ಕರೆದುಕೊಂಡು ಹೋಗುವಾಗ, ಮಗಳು ನಡೆದುಕೊಂಡು ಬರಲು ಹಠ ಮಾಡಿದ್ದಾಳೆಂದು ಕ್ಯಾಬ್‌ ಬುಕ್ ಮಾಡಿದ್ದಾರೆ. ತುಂಬಾ ಹೊತ್ತಾದರೂ ಕ್ಯಾಬ್ ಬರದ ಕಾರಣ ಮಗಳು ಹಠ ಮಾಡುತ್ತಿದ್ದರಿಂದ ರೈಡ್ ಕ್ಯಾನ್ಸಲ್ ಮಾಡಿ ಅಲ್ಲಿಯೇ ಇದ್ದ ಆಟೋ ಏರಿ ಮನೆಗೆ ತೆರಳಿದ್ದಾರೆ.

ಇತ್ತ ರೈಡ್‌ ಕ್ಯಾನ್ಸಲ್ ಮಾಡಿದ ತಕ್ಷಣ ಕೋಪಗೊಂಡ ಕ್ಯಾಬ್ ಚಾಲಕ ಕರೆ ಮಾಡಿ, ಈಗಾಗಲೇ 5 ಕಿ.ಮೀ ದೂರ ಬಂದಿರುವೆ. ಲೋಕೇಷನ್ ಸಮೀಪ ಇರುವಾಗ ರೈಡ್ ಕ್ಯಾನ್ಸಲ್ ಮಾಡಿದ್ದೀರಿ” ಎಂದು ರೇಗಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆ ಕ್ಷಮೆಯಾಚಿಸಿದರೂ ಕೂಡ ಬಿಡದೆ ಕ್ಯಾಬ್‌ ಚಾಲಕ ಕರೆ ಮಾಡಿ, ಮೆಸೇಜ್ ಮಾಡಿದ್ದಾನೆ. ಅಲ್ಲದೇ, ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ಕಳುಹಿಸಿ, ಪದೇಪದೆ ಕಿರಿಕಿರಿ ಉಂಟುಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕುಡಿದ ಮತ್ತಿನಲ್ಲಿ ಶಾಲಾ ಬಸ್‌ ಚಾಲನೆ ; ಸಾವು

ನೆರೆಮನೆಯವರು ಟ್ಯಾಕ್ಸಿ ಚಾಲಕನಿಗೆ ಬೈದಾಗ ವಾಟ್ಸ್‌ಆಪ್ ಸಂದೇಶಗಳನ್ನು ಡಿಲೀಟ್ ಮಾಡಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾಳೆ.

ಅಕ್ಟೋಬರ್ 9ರಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಕ್ಯಾಬ್ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...