ಬೆಂಗಳೂರು | ₹5.50 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ ಸಿಸಿಬಿ ಪೊಲೀಸರು; 10 ಡ್ರಗ್ ಪೆಡ್ಲರ್​ಗಳ ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟಗಾರರು ಮತ್ತು ವ್ಯಸನಿಗಳ ವಿರುದ್ಧ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ಬೃಹತ್ ಡ್ರಗ್ಸ್‌ ಜಾಲ ಪತ್ತೆ ಹಚ್ಚಿದ್ದಾರೆ. 8 ಮಂದಿ ವಿದೇಶಿಗರು ಸೇರಿ 10 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಬರೋಬ್ಬರಿ ₹5 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಳೆದ 15 ದಿನಗಳಲ್ಲಿ ಕಾಡುಗೋಡಿ, ಕೆ.ಆರ್‌.ಪುರಂ, ಸೋಲದೇವನಹಳ್ಳಿ, ಎಚ್‌ಎಸ್‌ಆರ್‌ ​​ಲೇಔಟ್‌, ವೈಟ್ಫೀಲ್ಡ್‌, ಬಾಣಸವಾಡಿ, ಪರಪ್ಪನ ಅಗ್ರಹಾರ ಸೇರಿದಂತೆ ನಾನಾ​​ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.

ದಾಳಿ ವೇಳೆ ಸುಮಾರು ₹5 ಕೋಟಿ ಮೌಲ್ಯದ 3 ಕೆ.ಜಿ. 806 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್‌, 50 ಗ್ರಾಂ ಕೊಕೇನ್‌, 25 ಎಕ್ಸ್ಟಸಿ ಪಿಲ್ಸ್, 5 ಕ್ವಿಂಟಲ್ಗಾಂಜಾ, 1 ಕಾರು, ಮೂರು ದ್ವಿಚಕ್ರ ವಾಹನ ಹಾಗೂ 9 ಮೊಬೈಲ್ಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಂಧಿತರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ” ಎಂದು ಮಾದಕ ವಸ್ತು ನಿಗ್ರಹ ದಳದ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹುಲಿ ಉಗುರು | ಕಳಸದ ಡಿಆರ್‌ಎಫ್‍ಓ ದರ್ಶನ್ ಅಮಾನತು

ವ್ಯವಹಾರಿಕ ವೀಸಾ ಪಡೆದು ನೈಜೀರಿಯಾ, ಇಥಿಯೋಪಿಯಾ ಸೇರಿ ನಾನಾ ದೇಶಗಳ 8 ಮಂದಿ ಡ್ರಗ್ಸ್ಪೆಡ್ಲರ್ಗಳು ಬೆಂಗಳೂರಿಗೆ ಬಂದಿದ್ದರು. ಆರೋಪಿಗಳು ಕಡಿಮೆ ಸಮಯದಲ್ಲಿ ಸುಲಭವಾಗಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಗೋವಾ, ಕೇರಳ, ದೆಹಲಿ ಸೇರಿ ದೇಶದ ನಾನಾ ಕಡೆಯಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿ ಅವುಗಳನ್ನು ದುಬಾರಿ ದರಕ್ಕೆ ಕಾಲೇಜು ವಿದ್ಯಾರ್ಥಿಗಳು, ಐಟಿಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...