ಬೆಂಗಳೂರು | ₹2 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ ಸಿಸಿಬಿ ಪೊಲೀಸರು

Date:

ರಾಜ್ಯ ರಾಜಧಾನಿ ಬೆಂಗಳೂರಿನ ದೊಡ್ಡ ನಾಗಮಂಗಲದ ವೀರಭದ್ರಸ್ವಾಮಿ ಲೇಔಟ್‌ನ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬರೋಬ್ಬರಿ ₹2 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದಾರೆ.

ನೈಜೀರಿಯಾ ಪ್ರಜೆ ವಿಕ್ಟರ್ ಒಬಿನ್ನಾ ಚುಕ್ವುಡಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ 2 ಕೆ.ಜಿ 43 ಗ್ರಾಂ ಎಂಡಿಎಂಎ ಡ್ರಗ್ಸ್, ಎರಡು ಮೊಬೈಲ್, ತೂಕದ ಯಂತ್ರ ಜಪ್ತಿ ಮಾಡಿದ್ದಾರೆ.

ಆರೋಪಿ ವಿಕ್ಟರ್ ಹಲವು ವರ್ಷಗಳ ಹಿಂದೆಯೇ ದೆಹಲಿಯಿಂದ ಬೆಂಗಳೂರಿಗೆ ಬಂದು ನೆಲೆಸಿದ್ದನು. ನಗರದ ವೀರಭದ್ರಸ್ವಾಮಿ ಬಡಾವಣೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದನು. ನೈಜೀರಿಯಾದ ಪೆಡ್ಲರ್ ಮೆಸ್ಸೊ ಎಂಬಾತ ದೆಹಲಿಯಲ್ಲಿ ನೆಲೆಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿಯಲ್ಲಿರುವ ಮೆಸ್ಸೋ ಜತೆಗೆ ಆರೋಪಿ ವಿಕ್ಟರ್ ಒಡನಾಟ ಇಟ್ಟುಕೊಂಡಿದ್ದನು. ಆತನ ಕಡೆಯಿಂದ ಡ್ರಗ್ಸ್‌ ತರಿಸುತ್ತಿದ್ದನು. ಆಮದು ಮಾಡಿಕೊಂಡ ಡ್ರಗ್ಸ್‌ ಅನ್ನು ತಾನು ನೆಲೆಸಿರುವ ಬಾಡಿಗೆ ಮನೆಯಲ್ಲಿ ಸಂಗ್ರಹಿಸಿಟ್ಟುಕೊಳ್ಳುತ್ತಿದ್ದನು. ಬಳಿಕ ತಾನೇ ಮನೆಯಲ್ಲಿ ಡ್ರಗ್ಸ್‌ಗಳನ್ನು ಪೊಟ್ಟಣಗಳಲ್ಲಿ ತುಂಬಿ ಪ್ಯಾಕ್‌ ಮಾಡಿ, ಮಾರಾಟ ಮಾಡುತ್ತಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಾಲ್ಕು ತಿಂಗಳು ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂ ಕ್ಷನ್ ಫ್ಲೈಓವರ್ ಬಂದ್!

ಈತನು ನಗರದಲ್ಲಿ ನಡೆಯುವ ಹಲವು ಪಾರ್ಟಿಗಳಿಗೆ ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದನು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿ ವಿಕ್ಟರ್​ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಮೆಸ್ಸೊ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಮೂಲಗಳು ಹೇಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...