ಬೆಂಗಳೂರು | ನಾಲ್ಕು ತಿಂಗಳು ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂ ಕ್ಷನ್ ಫ್ಲೈಓವರ್ ಬಂದ್!

Date:

ನಮ್ಮ ಮೆಟ್ರೋ ಕಾಮಗಾರಿ ಹಿನ್ನೆಲೆ ಸೆಂಟ್ರಲ್ ಜಂಕ್ಷನ್ ಫ್ಲೈಓವರ್ ಅನ್ನು ಬಂದ್ ಮಾಡಲಾಗುತ್ತಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಫ್ಲೈಓವರ್ (ಮಡಿವಾಳ ಬದಿ) ಇಂದಿನಿಂದ ನಾಲ್ಕು ತಿಂಗಳವರೆಗೆ ಭಾಗಶಃ ಬಂದ್ ಆಗಿರಲಿದೆ.

ಸಿಲ್ಕ್‌ ಬೋರ್ಡ್‌ ಫ್ಲೈಓವರ್‌ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ ಮೆಟ್ರೋ ಕಾಮಗಾರಿಗಳು ಆರಂಭವಾಗಿವೆ. ಈ ಕಾಮಗಾರಿಯನ್ನು ಆದಷ್ಟು ಬೇಗನೇ ಮುಗಿಸಬೇಕಿರುವ ಒತ್ತಡ ಬಿಎಂಆರ್‌ಸಿಎಲ್‌ ಮೇಲಿದೆ. ಈ ಹಿನ್ನೆಲೆಯಲ್ಲಿ ಸಿಲ್ಕ್‌ ಬೋರ್ಡ್‌ ಫ್ಲೈಓವರ್‌ ಅನ್ನು ಕೆಲ ತಿಂಗಳ ಕಾಲ ಮುಚ್ಚಲೇಬೇಕಿರುವ ಅನಿವಾರ್ಯತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ನಾಲ್ಕು ತಿಂಗಳವರೆಗೆ ಬಂದ್ ಮಾಡಿ ಕಾಮಗಾರಿ ಮುಗಿಸಲು ಬಿಎಂಆರ್​ಸಿಎಲ್ ಯೋಜಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್‌, ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ ಜಂಕ್ಷನ್ ಮೇಲ್ಸೇತುವೆ ಅಪ್‌ & ಡೌನ್‌ ರ್‍ಯಾಂಪ್ ಕ್ಯಾರೇಜ್‌ ವೇ(ಮಡಿವಾಳ ಬದಿ) ಲೂಪ್‌ಗಳು ಮತ್ತು ರ್‍ಯಾಂಪ್ ಫ್ಲೈಓವರ್‌ ಸ್ಟ್ರೇಜಿಂಗ್‌ ಕಾಮಗಾರಿ ಕೈಗೊಳ್ಳಲು ತಾತ್ಕಾಲಿಕವಾಗಿ ದಿನಾಂಕ 21-10- 2023ರಿಂದ ನಾಲ್ಕು ತಿಂಗಳವರೆಗೂ ಎರಡು ಕ್ಯಾರೇಜ್‌ ಮಾರ್ಗಗಳಲ್ಲಿ 2.50 ಮೀಟರ್‌ ಭಾಗಶಃ ಬ್ಯಾರಿಕೇಡ್‌ ಹಾಕಲಾಗುವುದು. ಸಾರ್ವಜನಿಕರು ಸಹಕರಿಸಬೇಕು. ಇದರಿಂದಾಗುವ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸುತ್ತೇವೆ’ ಎಂದು ತಿಳಿಸಿದೆ.

ಬೆಂಗಳೂರು | ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದು; ನಿತ್ಯ 7 ಲಕ್ಷ ಪ್ರಯಾಣಿಕರ ಓಡಾಟ

ಈಗಾಗಲೇ ಟ್ರಾಫಿಕ್ ಜಾಮ್‌ನಿಂದಾಗಿ ಸುದ್ದಿಯಾಗುತ್ತಿರುವ ಈ ಫ್ಲೈ ಓವರ್, ಮೆಟ್ರೋ ಕಾಮಗಾರಿಯಿಂದಾಗಿ ನಾಲ್ಕು ತಿಂಗಳು ಈ ಪ್ರದೇಶದ ನಾಗರಿಕರು ಇನ್ನಷ್ಟು ಟ್ರಾಫಿಕ್ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ.

ನಮ್ಮ ಮೆಟ್ರೋದ ನೀಲಿ ಮಾರ್ಗವು ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...