ಬೆಂಗಳೂರು | ಕಾಫಿ ಶಾಪ್‌ ವಾಶ್‌ರೂಮ್‌ನಲ್ಲಿ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಆರೋಪಿ ಬಂಧನ

Date:

ಮಹಿಳಾ ವಾಶ್‌ರೂಮ್‌ನಲ್ಲಿ ಮೊಬೈಲ್ ಇರಿಸಿ, ಗೌಪ್ಯವಾಗಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್ (23) ಬಂಧಿತ ಆರೋಪಿ.

ಬೆಂಗಳೂರಿನ ಬಿಇಎಲ್ ರಸ್ತೆಯಲ್ಲಿರುವ ಥರ್ಡ್ ವೇವ್ ಕಾಫಿ ಶಾಫ್‌ನಲ್ಲಿ ಆರೋಪಿ ಮನೋಜ್ ಕೆಲಸ ಮಾಡುತ್ತಿದ್ದ. ಆತ ಕಾಫಿ ಶಾಫ್‌ನ ವಾಶ್‌ರೂಮ್‌ನಲ್ಲಿ ಮೊಬೈಲ್ ಇಟ್ಟು, ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.

ವಾಶ್‌ರೂಮ್‌ನ ಶೌಚಾಲಯದ ಡಸ್ಟ್ ಬಿನ್‌ನಲ್ಲಿ ಕಿಂಡಿ ಸೃಷ್ಟಿಸಿದ್ದ ಆರೋಪಿ, ಮೊಬೈಲ್ ಫೋನ್‌ನ ಕ್ಯಾಮರಾವನ್ನ ಶೌಚಾಲಯದ ಸೀಟ್‌ನತ್ತ ರೆಕಾರ್ಡಿಂಗ್ ಆನ್ ಮಾಡಿ ಇರಿಸಿದ್ದ. ಶಬ್ಧವಾದರೆ ಗೊತ್ತಾಗಬಹುದು ಎಂಬ ಕಾರಣಕ್ಕೆ ಫೋನ್​ನ್ನು ಫ್ಲೈಟ್ ​ಮೋಡ್​ನಲ್ಲಿರಿಸಿದ್ದ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯೊಬ್ಬರು ವಾಶ್ ರೂಮ್‌ಗೆ ಹೋದಾಗ ಶೌಚಾಲಯದಲ್ಲಿ ಮೊಬೈಲ್ ಇರಿಸಿರುವುದು ಹಾಗೂ ಸುಮಾರು 2 ಗಂಟೆಗಳಷ್ಟು ವಿಡಿಯೋ ರೆಕಾರ್ಡಿಂಗ್ ಆಗಿರುವುದು ಪತ್ತೆಯಾಗಿತ್ತು. ತಕ್ಷಣವೇ ಆ ಮಹಿಳೆ ಕೆಫೆ ಸಿಬ್ಬಂದಿ ಹಾಗೂ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿದ್ದು, ಕೆಫೆಯ ಸಿಬ್ಬಂದಿಯೇ ಮೊಬೈಲ್ ಇರಿಸಿರುವುದು ಪತ್ತೆಯಾಗಿದೆ. ತಕ್ಷಣವೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಘಟನೆಯ ಕುರಿತು ಕ್ಷಮೆಯಾಚಿಸಿರುವ ಥರ್ಡ್ ವೇವ್ ಕಾಫಿ ಕೆಫೆಯ ಆಡಳಿತ ಮಂಡಳಿ, ಗ್ರಾಹಕರ ಸುರಕ್ಷತೆ ಮತ್ತು ಕ್ಷೇಮ ನಮ್ಮ ಆದ್ಯತೆಯಾಗಿದೆ. ಆರೋಪಿತ ಸಿಬ್ಬಂದಿಯನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಲಾಗಿದೆ. ಆರೋಪಿ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಎಕ್ಸ್ ಪೋಸ್ಟ್​ನಲ್ಲಿ ಸ್ಪಷ್ಟಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...