ಬೆಂಗಳೂರು | ಫೆಂಗಲ್ ಚಂಡಮಾರುತ; ರಾಜ್ಯದಲ್ಲಿ ಡಿ.5ರವರೆಗೆ ಭಾರೀ ಮಳೆ

Date:

ಬಂಗಾಳಕೊಲ್ಲಿಯಲ್ಲಿ ಶನಿವಾರ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತವು ತಮಿಳುನಾಡಿನ ಪುದುಚೇರಿ ಕರಾವಳಿಗೆ ಅಪ್ಪಳಿಸಿದೆ. ಇದರಿಂದಾಗಿ ತಮಿಳುನಾಡು, ಚೆನ್ನೈ ಮಾತ್ರವಲ್ಲದೇ, ಕರ್ನಾಟಕ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರಾವಳಿ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಸೈಕ್ಲೋನಿಕ್ ಚಂಡಮಾರುತ ನೆಲೆಗೊಂಡಿದೆ. ಇಲ್ಲಿ ಭಾನುವಾರ ಬೆಳಗ್ಗೆ 6 ಗಂಟೆಗಳ ಅವಧಿಯಲ್ಲಿ ಸ್ಥಿರವಾಗಿದ್ದರ ಬಗ್ಗೆ ಬೆಂಗಳೂರು ಐಎಂಡಿ ಕಚೇರಿ ಹವಾಮಾನ ತಜ್ಞ ಸಿ ಎಸ್ ಪಾಟೀಲ್ ಖಚಿತಪಡಿಸಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಸೋನೆ ಮಳೆಯಂತೆ ಸುರಿಯಿತ್ತಿದ್ದು, ರಾಜ್ಯದಲ್ಲಿ ಡಿಸೆಂಬರ್ 05ರವರೆಗೆ ಮೈ ಕೊರೆವ ಚಳಿ ಸಹಿತ ಧಾರಾಕಾರ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್, ಆರೆಂಜ್ ಅಲರ್ಟ್’ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಫೆಂಗಲ್ ಚಂಡಮಾರುತ ಉಂಟಾಗಿರುವುದರಿಂದ ಡಿಸೆಂಬರ್ 2, 3 ಮತ್ತು 4ರಂದು ಕರಾವಳಿಯ ಉಡುಪಿ ದಕ್ಷಿಣ ಕನ್ನಡ ಜಿಲ್ಲೆ, ರಾಮನಗರ, ಮಂಡ್ಯ ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್‌’‌ ಘೋಷಿಸಲಾಗಿದೆ” ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

“ಡಿಸೆಂಬರ್ 3ರಂದು ಮಾತ್ರ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ವಿಪರೀತ ಗಾಳಿ ಸಹಿತ ಭಾರೀ ಮಳೆ ಆರ್ಭಟ ಕಂಡುಬರಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಒಂದು ದಿನ ‘ಆರೆಂಜ್ ಅಲರ್ಟ್’ ನೀಡಲಾಗಿದೆ” ಎಂದು ಐಎಂಡಿ ಹವಾಮಾನ ವರದಿ ತಿಳಿಸಿದೆ.

“ಡಿಸೆಂಬರ್ 6ರಂದು ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ, ಇದೇ ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ ನಿರೀಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಫೆಂಗಲ್ ಚಂಡಮಾರುತ | ವಿಮಾನ ಲ್ಯಾಂಡಿಂಗ್‌ಗೆ ಹರಸಾಹಸ; ವಿಡಿಯೋ ವೈರಲ್

“ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ ನಾಲ್ಕೈದು ದಿನ ಈ ಚಂಡಮಾರುತದ ಅಬ್ಬರ ಕಂಡುಬರಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ, ಕೆಲವೊಮ್ಮೆ ಭಾರೀ ಮಳೆಯಾಗಲಿದೆ. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳಲಿದೆ. ಗರಿಷ್ಠ 23° ಸೆಲ್ಸಿಯಸ್ ಹಾಗೂ ಕನಿಷ್ಠ 19° ಸೆಲ್ಸಿಯಸ್ ಕಂಡುಬರಲಿದೆ” ಎಂದು ಭಾರತೀಯ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...