ಬೆಂಗಳೂರು | ಫೆಂಗಲ್ ಚಂಡಮಾರುತ; ಹಲವೆಡೆ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ

Date:

ಬಂಗಾಳಕೊಲ್ಲಿಯಿಂದ ಫೆಂಗಲ್ ಚಂಡಮಾರುತ ಉಂಟಾಗಿದ್ದು, ಕರ್ನಾಟಕದ ರಾಜಧಾನಿ ಬೆಂಗಳೂರಿನ ಹವಾಮಾನದ ಮೆಲೆಯೂ ಪ್ರಭಾವ ಬೀರಿದೆ. ಡಿಸೆಂಬರ್ 1ರ ಬೆಳ್ಳಂಬೆಳಿಗ್ಗೆ ತಾಪಮಾನ ಕುಸಿದಿದ್ದು, 20 ಡಿಗ್ರಿ ಸೆಲ್ಸಿಯಸ್‌ಗೂ ಕೆಳಕ್ಕೆ ಕುಸಿಯುವ ಸಾಧ್ಯತೆ ಕಂಡುಬಂದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

“ಕೆಲವೆಡೆ ಮುಂಜಾನೆ ಮಂಜು ಮತ್ತು ಚಳಿ ಅನುಭವಕ್ಕೆ ಬಂದರೆ, ಬೆಂಗಳೂರು ನಗರದಲ್ಲಿ ಮಳೆಯ ತುಂತುರು ಹನಿ ಸುರಿಯುತ್ತಿತ್ತು. ಈಗಾಗಲೇ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮುಂದಿನ ಎರಡು ದಿನಗಳ ಅವಧಿಯಲ್ಲಿ ಕನಿಷ್ಠ ತಾಪಮಾನ 20-21 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪೆಂಗಲ್ ಚಂಡಮಾರುತ ಪರಿಣಾಮ ಬೆಂಗಳೂರು ನಗರದಲ್ಲಿ ಶನಿವಾರ ರಾತ್ರಿಯಿಂದಲೇ ಮಳೆ ಸುರಿದಿದ್ದು, ಇಂದಿರಾನಗರ, ಹಲಸೂರು, ಎಂಜಿ ರಸ್ತೆ, ರಿಚಂಡ್ ರಸ್ತೆ, ಶಾಂತಿನಗರ, ಲಾಲ್‌ಬಾಗ್, ಕೆ ಆರ್ ಮಾರುಕಟ್ಟೆ, ಮೆಜೆಸ್ಟಿಕ್, ಕಾರ್ಪೊರೇಷನ್ ಸುತ್ತಮುತ್ತಲ ಬಡಾವಣೆಗಳಲ್ಲಿ ಮಳೆ ಸುರಿದಿದೆ. ಭಾನುವಾರ ಮುಂಜಾನೆಯಲ್ಲೂ ಮಳೆ ಮುಂದುವರೆದಿದ್ದು, ತಾಪಮಾನ ಕುಸಿದಿದೆ. ಚಳಿ ಹೆಚ್ಚಳವಾಗಿದೆ. ಡಿಸೆಂಬರ್ 2ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬಿಬಿಎಂಪಿ ಅಧಿಕಾರಿಗಳ ರಜೆ ರದ್ದುಗೊಳಿಸಿರುವ ಆಡಳಿತ, ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಬಿಬಿಎಂಪಿ ಅಧಿಕಾರಿಗಳು ಭಾನುವಾರ ನಗರದ ಕೇಂದ್ರ ಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಿರ್ದೇಶಿಸಿದ್ದಾರೆ.

“ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಮತ್ತು ಕೊಡಗು ಜಿಲ್ಲೆಯ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ” ಎಂದು ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಎಫ್‌ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಪ್ರತ್ಯಕ್ಷವಾದ ದೆಹಲಿ ಪೊಲೀಸರು: ನದೀಮ್ ಖಾನ್ ಅಕ್ರಮ ಬಂಧನಕ್ಕೆ ಯತ್ನ

“ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೋಮವಾರ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಮಂಡ್ಯ, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಮಂಗಳವಾರವೂ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ” ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಫೆಂಗಲ್ ಚಂಡಮಾರುತದಿಂದ ಉಂಟಾದ ಬಲವಾದ ಗಾಳಿ ಮತ್ತು ಭಾರೀ ಮಳೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣವು 16 ಗಂಟೆಗಳ ಕಾಲ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಹೀಗಾಗಿ, ಐದು ಅಂತಾರಾಷ್ಟ್ರೀಯ ವಿಮಾನಗಳು ಸೇರಿ 16 ವಿಮಾನಗಳನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ(ಕೆಐಎ) ಕಳುಹಿಸಲಾಗಿದೆ. ರೈಲು ಸಂಚಾರದಲ್ಲೂ ವ್ಯತ್ಯಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...