ಬೆಂಗಳೂರು | ಧಾರ್ಮಿಕ ಮೆರವಣಿಗೆ ವೇಳೆ ಕಾರು ಚಾಲನೆ; ಚಾಲಕ ಮತ್ತು ಆನಂದ್ ಸ್ವೀಟ್ಸ್ ಸಂಸ್ಥಾಪಕನ ಮೇಲೆ ಹಲ್ಲೆ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಶಾಂತಿನಗರ ರಸ್ತೆಯಲ್ಲಿ ಧಾರ್ಮಿಕ ಮೆರವಣಿಗೆ ನಡೆಯುವ ವೇಳೆ, ರಸ್ತೆಯ ಬದಿ ನಿಧಾನಗತಿಯಲ್ಲಿ ಕಾರು ಚಲಾಯಿಸುತ್ತಿದ್ದ ಚಾಲಕ ಮತ್ತು ಆನಂದ ಸ್ವೀಟ್ಸ್‌ ಸಂಸ್ಥಾಪಕನ ಮೇಲೆ ಹಲ್ಲೆ ಮಾಡಲಾಗಿದೆ.

ಆನಂದ್ ಸ್ವೀಟ್ಸ್ ಸಂಸ್ಥಾಪಕ ಆನಂದ್ ದಯಾಳ್ ದಾದು (72) ಮತ್ತು ಚಾಲಕ ಶ್ಯಾಮ್ ಸುಂದರ್ ಪಿಳ್ಳೈ (36) ಹಲ್ಲೆಗೊಳಗಾದವರು.

ಬೆಂಗಳೂರಿನ ಶಾಂತಿನಗರದ ಲಕ್ಷ್ಮಿ ರಸ್ತೆಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಧಾರ್ಮಿಕ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಮೂವರು ದುಷ್ಕರ್ಮಿಗಳು ಆನಂದ್ ಸ್ವೀಟ್ಸ್ ಸಂಸ್ಥಾಪಕ ಮತ್ತು ಅವರ ಕಾರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಕ್ಷ್ಮೀ ರಸ್ತೆಯ 7ನೇ ಕ್ರಾಸ್‌ನಲ್ಲಿ ಬುಧವಾರ ಬೆಳಿಗ್ಗೆ ಆನಂದ್ ದಯಾಳ್ ದಾದು ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ರಸ್ತೆಯಲ್ಲಿ ಧಾರ್ಮಿಕ ಮೆರವಣಿಗೆ ಸಾಗುತ್ತಿತ್ತು. ಧಾರ್ಮಿಕ ಮೆರವಣಿಗೆ ನಡೆಯುತ್ತಿದ್ದರೂ ಚಾಲಕ ಶ್ಯಾಮ್ ಸುಂದರ್ ಪಿಳ್ಳೈ ಅವರು, ಕಾರು ನಿಲ್ಲಿಸದೆ, ರಸ್ತೆ ಬದಿಯಿಂದಲೇ ನಿಧಾನಗತಿಯಲ್ಲಿ ಕಾರು ಚಲಾಯಿಸುತ್ತಿದ್ದರು.

ಧಾರ್ಮಿಕ ಮೆರವಣಿಗೆ ನಡೆಯುತ್ತಿದೆ ಎಂದರೂ ಕಾರಿನಲ್ಲಿ ತೆರಳುತ್ತಿರುವುದರಿಂದ ಕೋಪಗೊಂಡ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಆರೋಪಿಗಳು ಯಾವುದೇ ಪ್ರಚೋದನೆ ಇಲ್ಲದೆ ಏಕಾಏಕಿ ಚಾಲಕನಿಗೆ ಥಳಿಸಿದ್ದಾರೆ. ಈ ವೇಳೆ, ಹಲ್ಲೆ ಮಾಡುತ್ತಿದ್ದನ್ನು ತಡೆಯಲು ಹೋದ ಆನಂದ್ ದಯಾಳ್ ದಾದು ಅವರ ಮೇಲೂ ಹಲ್ಲೆ ನಡೆಸಿದ್ದಾರೆ.

“ಆನಂದ್ ಮತ್ತು ಪಿಳ್ಳೈ ಅರಮನೆ ಮೈದಾನದಿಂದ ಹಿಂತಿರುಗುತ್ತಿದ್ದರು. ಈ ವೇಳೆ, ಶಾಂತಿನಗರದ ಲಕ್ಷ್ಮಿ ರಸ್ತೆಯ 7ನೇ ಕ್ರಾಸ್‌ನಲ್ಲಿ  ದಾದೂ ಅವರಿಗೆ ಆರೋಪಿಗಳು ಮೊಂಡಾದ ಆಯುಧದಿಂದ ಹಲ್ಲೆ ನಡೆಸಿದ್ದು, ರಕ್ತಸ್ರಾವವಾಗುವಂತೆ ಮಾಡಿದ್ದಾರೆ. ದಾದು ಅವರು ತೀವ್ರವಾಗಿ ಗಾಯಗೊಂಡಿದ್ದಾರೆ.  ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿ ಚಿಕಿತ್ಸೆಗಾಗಿ ಇಬ್ಬರನ್ನು ಆಸ್ಪತ್ರೆಗೆ ರವಾನಿಸಿದ್ದೇವೆ” ಎಂದು ಆನಂದ್ ಅವರ ಪುತ್ರ ಅಂಕೀತ್ ದಾದು ಬುಧವಾರ ಪೊಲೀಸ್ ದೂರು ದಾಖಲಿಸಿದ್ದಾರೆ.

ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದರು. ಈ ವೇಳೆ, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಮೂವರು ಆರೋಪಿಗಳನ್ನು ಪತ್ತೆ ಮಾಡಿದರು. ಈ ಪೈಕಿ ಇಬ್ಬರನ್ನು ಬಂಧಿಸಿದ್ದಾರೆ.

ಪ್ಲಂಬರ್ ಹರೀಶ್ ಕುಮಾರ್ (23), ದಿನಸಿ ಡೆಲಿವರಿ ಬಾಯ್ ಸಂದೀಪ್ (19) ಬಂಧಿತರು. ಈ ಇಬ್ಬರೂ ಶಾಂತಿನಗರ ನಿವಾಸಿಗಳು ಎಂದು ಗುರುತಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕದಲ್ಲಿ ಪ್ರತಿ ವರ್ಷ ಶೇ.1ರಷ್ಟು ಕ್ಯಾನ್ಸರ್ ಪ್ರಕರಣಗಳು ಹೆಚ್ಚಳ

“ಘಟನೆಯ ಸಮಯದಲ್ಲಿ ಆರೋಪಿಗಳು ಪಾನಮತ್ತರಾಗಿದ್ದರೇ ಎಂಬುದು ಖಚಿತವಾಗಿಲ್ಲ. ಆಲ್ಕೋಹಾಲ್ ಇರುವಿಕೆಯನ್ನು ಖಚಿತಪಡಿಸಲು ಅವರ ರಕ್ತ ಮತ್ತು ಮೂತ್ರದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ದಾದು ಅವರ ಮೇಲೆ ಯಾವುದೇ ಆಯುಧದಿಂದ ಹಲ್ಲೆ ನಡೆಸಿಲ್ಲ. ಆದರೆ, ಆರೋಪಿಗಳು ತಮ್ಮ ಮುಷ್ಟಿಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಇನ್ನೂ ಒಬ್ಬ ಆರೋಪಿಯನ್ನು ಬಂಧಿಸಬೇಕಿದೆ. ಕಿರಿದಾದ ರಸ್ತೆಯಲ್ಲಿ ಮೆರವಣಿಗೆ ಸಾಗಿದಾಗ ಸ್ವಲ್ಪ ಹೊತ್ತು ಕಾಯುವ ಬದಲು ಕಾರು ಚಲಿಸುತ್ತಲೇ ಇದ್ದ ಕಾರಣ ಆರೋಪಿಗಳು ಕೋಪಗೊಂಡು ಹಲ್ಲೆ ನಡೆಸಿದ್ದಾರೆ. ಆರೋಪಿಗಳು ಕಾರನ್ನು ನಿಲ್ಲಿಸಲು ಚಾಲಕನಿಗೆ ಹೇಳಿದ್ದಾರೆ. ಆದರೆ, ಕಾರು ಚಾಲಕ ಚಾಲನೆ ಮಾಡುತ್ತಲೇ ಇದ್ದ, ಕಾರಣ ಇದು ಆರೋಪಿಯನ್ನು ಕೆರಳಿಸಿ, ಹಲ್ಲೆ ನಡೆದಿರಬಹುದು”ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಆರೋಪಿಗಳ ವಿರುದ್ಧ ಐಪಿಸಿಯ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ತನಿಖೆ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...