ಬೆಂಗಳೂರು | ಕುಡಿದ ಮತ್ತಿನಲ್ಲಿ ಶಾಲಾ ಬಸ್‌ ಚಾಲನೆ ; ಸಾವು

Date:

ಕುಡಿದ ಮತ್ತಿನಲ್ಲಿ ಶಾಲಾ ಬಸ್‌ ಚಾಲನೆ ಮಾಡಿ ಪಾದಚಾರಿಯೊಬ್ಬರಿಗೆ ಗುದ್ದಿದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಬೆಂಗಳೂರಿನ ದೊಡ್ಡಬಾಣಸವಾಡಿಯಲ್ಲಿ ನಡೆದಿದೆ.

ಅಂಜಿನಪ್ಪ ಮೃತ ವ್ಯಕ್ತಿ. ಚಾಲಕ ಸುಭಾಷ್ (30) ಶಾಲಾ ಬಸ್‌ ಚಲಾಯಿಸುತ್ತಿದ್ದ ವ್ಯಕ್ತಿ. ಅಕ್ಟೋಬರ್‌ 10ರಂದು ಶಾಲಾ ಬಸ್ ಚಾಲಕ ಕುಡಿದು 25 ಶಾಲಾ ವಿದ್ಯಾರ್ಥಿಗಳನ್ನು ಕೂರಿಸಿಕೊಂಡು ದೊಡ್ಡಬಾಣಸವಾಡಿ ಬಳಿ ತೆರಳುತ್ತಿದ್ದರು. ಈ ವೇಳೆ, ಬಾಣಸವಾಡಿ ಬಳಿ ಮೆಡಿಕಲ್‌ ಶಾಪ್‌ನಿಂದ ಮನೆಗೆ ತೆರಳುತ್ತಿದ್ದ ಅಂಜಿನಪ್ಪ ಅವರಿಗೆ ಗುದ್ದಿದ್ದಾನೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಂಜಿನಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ, ಅಕ್ಟೋಬರ್ 11 ರಂದು ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅಪಘಾತ ನಡೆಸುವುದಕ್ಕೂ ಮೊದಲು ಶಾಲಾ ಬಸ್‌ ಚಾಲಕ ಓರ್ವ ಮಹಿಳೆಗೆ ಬಸ್‌ ಗುದ್ದಿ ಬಂದಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಐಟಿ ದಾಳಿ ವೇಳೆ ಮಂಚದಡಿ ಕಂತೆ ಕಂತೆ ನೋಟು ಪತ್ತೆ

ಬಾಣಸವಾಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಚಾಲಕ ಸುಭಾಷ್​​ನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...