ಬೆಂಗಳೂರು | ರೈತರಿಗೆ ವೈಜ್ಞಾನಿಕವಾಗಿ ಬೆಳೆನಷ್ಟ ಪರಿಹಾರ ಘೋಷಿಸಬೇಕು: ರಾಜ್ಯಾಧ್ಯಕ್ಷ ಭಾಗ್ಯರಾಜ್

Date:

ರೈತರಿಗೆ ಬರಪರಿಹಾರ ನೀಡುವಲ್ಲಿ ಸರ್ಕಾರ ವೈಜ್ಞಾನಿಕ ವಿಧಾನವನ್ನು ಅನುಸರಿಸಿಲ್ಲ. ಕಳೆದ ಮೂರು ದಿನಗಳ ಹಿಂದೆ ಬೀಸಿದ ಬಿರುಗಾಳಿಗೆ ಲಕ್ಷಾಂತರ ಹೆಕ್ಟೇರ್‌ ಪ್ರದೇಶದ ಬಾಳೆ, ಕಬ್ಬು, ತೆಂಗು, ಮೆಕ್ಕೆಜೋಳ ಬೆಳೆಗಳು ಹಾನಿಯಾಗಿದ್ದು, ವೈಜ್ಞಾನಿಕವಾಗಿ ಬೆಳೆನಷ್ಟ ಪರಿಹಾರವನ್ನು ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಒತ್ತಾಯಿಸಿದರು.

ಬೆಂಗಳೂರಿನ ರಾಜಭವನದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರಿಗೆ ರೈತರ ಸಮಸ್ಯೆಗಳ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

“ಭೀಕರ ಬಿರುಗಾಳಿಯಿಂದ ನೊಂದಿರುವ ರೈತರ ಸಾಲವನ್ನು ರಾಜ್ಯ ಸರ್ಕಾರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಪ್ರತಿ ಎಕರೆ ಬಾಳೆ ಬೆಳೆ ನಷ್ಟಕ್ಕೆ ಒಂದು ಲಕ್ಷಕ್ಕಿಂತ ಹೆಚ್ಚು ದರ ನೀಡಬೇಕು ಹಾಗೂ ಬರ ಪರಿಹಾರವನ್ನು ತಾರತಮ್ಯ ಇಲ್ಲದೆ ಎಲ್ಲ ರೈತರಿಗೂ ನೀಡುವಂತಾಗಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರವಾಗಿ ಹಗಲು ವೇಳೆ 10 ಗಂಟೆ ವಿದ್ಯುತ್ ಕೊಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಹೊಸ ಸಂಪರ್ಕ ಪಡೆಯಲು ಮೊದಲು ಇದ್ದಂತಹ ಅಕ್ರಮ ಸಕ್ರಮ ಯೋಜನೆಯನ್ನು ಮರು ಜಾರಿ ಮಾಡಬೇಕು. ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ ಕಳೆದ ಸಾಲಿನ ಪ್ರತಿ ಟನ್‌ಗೆ 150 ರೂಪಾಯಿಯ ಸರ್ಕಾರ ಆದೇಶದ ಪ್ರಕಾರ ರಾಜ್ಯದಲ್ಲಿ ₹950 ಕೋಟಿ ರೂಪಾಯಿ ರೈತರಿಗೆ ಬರಬೇಕು” ಎಂದರು.

“ಕಳೆದ ಸಾಲಿನ ಕಾರ್ಖಾನೆಗಳಿಂದ ಲಾಭಾಂಶವನ್ನು ಹಂಚಿಕೆ ಮಾಡಿಸಬೇಕು ಹಾಗೂ ಖಾಸಗಿ ಮತ್ತು ಸಾಲ ಪಡೆದ ರೈತರ ಟ್ರ್ಯಾಕ್ಟರ್‌ಗಳನ್ನು ಜಪ್ತಿ ಮಾಡಿದ ಬ್ಯಾಂಕುಗಳು ಬೇರೆ ರಾಜ್ಯಗಳಿಗೆ ಪ್ರಕರಣಗಳನ್ನು ದಾಖಲಿಸಿ ಮಾನಸಿಕವಾಗಿ ಕುಗ್ಗುವಂತೆ ಮಾಡುತ್ತಿವೆ. ಬರದಿಂದ ನೊಂದಿರುವ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 10 ರೂಪಾಯಿಯನ್ನು ಕೊಡಿಸಲು ಕ್ರಮ ವಹಿಸಬೇಕು. ಸರ್ಕಾರದ ಬ್ಯಾಂಕ್‌ಗಳು ಸಿಬಿಲ್ ಸ್ಕೋರನ್ನು ಪರಿಗಣಿಸಬಾರದು” ಎಂದು ಒತ್ತಾಯಿಸಿದರು.

“ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಸರ್ಕಾರಿ ಜಾಗಗಳನ್ನು ಅಕ್ರಮವಾಗಿ ವಸಪಡಿಸಿಕೊಂಡಿರುವ ಮತ್ತು ಬಿ ಖರಾಬುಗಳಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಿ ಕಟ್ಟಡಗಳನ್ನು ಕಟ್ಟಿ ಸಾರ್ವಜನಿಕ ಆಸ್ತಿಯನ್ನು ಜಿಲ್ಲಾಡಳಿತದ ಸಹಕಾರದೊಂದಿಗೆ ರಕ್ಷಣೆ ನೀಡುವ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಬೆಂಗಳೂರನಲ್ಲಿ ಗದಗ ಜಿಲ್ಲೆ ಮುಂಡರಗಿ ತಾಲೂಕು ಸಿಂಗಟಾಲೂರು ಮತ್ತು ಹುಲಿಗುಡ್ಡ ಹಾಗೂ ಜಾಲವಡಿಗಿ ಏತ ನೀರಾವರಿ ಯೋಜನೆಯನ್ನು ಹಾಗೂ 28 ಕೆರೆಗಳಿಗೆ ನೀರು ತುಂಬಿಸುವ ಕಾಮಾಗಾರಿಯನ್ನು, ಚುಣಾವಣಾ ನೀತಿ ಸಂಹಿತೆ ಮುಗಿದ ನಂತರ ಶಿಘ್ರದಲ್ಲಿ  ಕಾಮಾಗಾರಿಯಾಗುತ್ತದೆ. ಮುಂಡರಗಿ ತಾಲೂಕು ಪೈಪ್‌ಲೈನ್‌ ಮುಖಾಂತರ ನೀರಾವರಿ ಯೋಜನೆ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು” ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜಮೀನಿನ ಪಹಣಿ ಸರಿಪಡಿಸುವಂತೆ ರೈತ ಸಂಘ ಮನವಿ

ರಾಜ್ಯ ಕಬ್ಬು ಬೆಳೆಗಾರರ ಸಂಘ ಪ್ರಧಾನ ಕಾರ್ಯದರ್ಶಿ ವಿಠ್ಠಲ ಗಣಾಚಾರಿ, ರಾಜ್ಯ ಕಾರ್ಯಧ್ಯಕ್ಷ ತೇಜಸ್ವಿ ಪಟೇಲ್, ಚಾಮರಾಜನಗರ ಜಿಲ್ಲಾಧ್ಯಕ್ಷ ನಾಗರಾಜ್, ಹನುಮಯ್ಯ, ವಕೀಲ ಕಿಶಾನ್ ಹರ್ಷಕುಮಾರ, ಮಲಿಯೂರು ಮಹೇಂದ್ರ, ಅರಳಿಕಟ್ಟೆ ಕುಮಾರ್, ಮುದ್ದಹಳ್ಳಿ ಚಿಕ್ಕಸ್ವಾಮಿ, ಗಣೇಶ್ ಅಂಬಳೆ, ಮಹದೇವಸ್ವಾಮಿ, ಸೋಮೇಶ್ ಪಟೇಲ್, ನೆಲಮಂಗಲ ತಾಲೂಕು ಅಧ್ಯಕ್ಷ ರಾಜೇಶ್, ಅಪ್ಪಾಜಣ್ಣ ಸೇರಿದಂತೆ ಬಹುತೇಕ ರೈತ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...