ಬೆಂಗಳೂರು | ಹೆಣ್ಣು ಭ್ರೂಣ ಲಿಂಗ ಪತ್ತೆ; ನಾಲ್ವರ ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ, ಗರ್ಭಪಾತ ಮಾಡಿಸುತ್ತಿದ್ದ ಜಾಲವೊಂದನ್ನು ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಭೇದಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮೈಸೂರಿನ ಬನ್ನೂರು ರಸ್ತೆ ವಸಂತನಗರದ ಶಿವಲಿಂಗೇಗೌಡ, ಮಂಡ್ಯ ಜಿಲ್ಲೆ ಕೂಳೇನಹಳ್ಳಿಯ ನಯನಕುಮಾರ್, ಪಾಂಡವಪುರ ತಾಲೂಕಿನ ಸುಂಕದನ್ನೂರು ಗ್ರಾಮದ ನವೀನಕುಮಾರ್, ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದ ಟಿ.ಎಂ.ವೀರೇಶ್ ಬಂಧಿತರು.

ಇತ್ತೀಚೆಗೆ ಹೆಣ್ಣು ಭ್ರೂಣ ಪತ್ತೆ ದಂಧೆ ಬಗ್ಗೆ ಬಾತ್ಮೀದಾರರಿಂದ ಮಾಹಿತಿ ಪಡೆದ ಇನ್ಸ್‌ಪೆಕ್ಟರ್ ಎಂ.ಪ್ರಶಾಂತ್ ಅವರು ಕೂಡಲೇ ಬೈಯಪ್ಪನಹಳ್ಳಿ ಠಾಣೆ ಪಿಎಸ್ಐ ಮಂಜುನಾಥ್, ಎಎಸ್ಐಗಳಾದ ಗೋವಿಂದರಾಜು, ನಾಗಯ್ಯ ಒಳಗೊಂಡ ತಂಡ ರಚಿಸಿಕೊಂಡು ದಂಧೆಕೋರರ ಬೆನ್ನುಹತ್ತಿದಾಗ ಆರೋಪಿಗಳು ಖಾಕಿ ಬಲೆಗೆ ಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ತನಿಖೆ ವೇಳೆ, ಹೆಣ್ಣು ಭ್ರೂಣ ಲಿಂಗ ಪತ್ತೆಗೆ ವೈದ್ಯರೇ ಸಹಕಾರ ನೀಡುತ್ತಿರುವುದು ಬೆಳಕಿಗೆ ಬಂದಿದೆ. ಹಲವು ವರ್ಷಗಳಿಂದ ಆರೋಪಿಗಳು ಹೆಣ್ಣು ಭ್ರೂಣ ಲಿಂಗ ಪತ್ತೆ ದಂಧೆಯಲ್ಲಿ ತೊಡಗಿದ್ದು, ಭ್ರೂಣ ಲಿಂಗ ಪತ್ತೆಗೆ ₹15 ಸಾವಿರದಿಂದ ₹20 ಸಾವಿರ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಹುಲಿ ಉಗುರು | ಎಫ್‌ಎಸ್‌ಎಲ್ ವರದಿ ಬಳಿಕ ಸಂತೋಷ್‌ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ

ಗರ್ಭಿಣಿಯರನ್ನು ಕರೆದುಕೊಂಡು ಹೋಗುತ್ತಿದ್ದ ಆರೋಪಿಗಳು, ಮಂಡ್ಯದ ಆಲೆಮನೆಯಲ್ಲಿಯೇ ಸ್ಕ್ಯಾನಿಂಗ್ ಮಾಡುತ್ತಿದ್ದರು. ಹಳೇ ಮದ್ರಾಸ್ ರಸ್ತೆ ಬಳಿ ಪೊಲೀಸರು ದಾಳಿ ನಡೆಸುತ್ತಲೇ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಇದೇ ವೇಳೆ ಕಾರನ್ನು ಹಿಂಬಾಲಿಸಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಹಾಗೆಯೇ, ಗರ್ಭಿಣಿಯರನ್ನು ಕೂಡ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...