ಬೆಂಗಳೂರು | ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ

Date:

ಅತ್ತಿಬೆಲೆ ಪಟಾಕಿ ಗೋದಾಮಿಗೆ ಬೆಂಕಿ ಅವಘಡ ಸಂಭವಿಸಿ, 16 ಮಂದಿ ಸಾವನ್ನಪ್ಪಿದ್ದ ದುರ್ಘಟನೆ ಮಾಸುವ ಮುನ್ನವೇ, ಇದೀಗ ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಂಗಳೂರಿನ ಪೈಪ್ ಲೈನ್ ರಸ್ತೆಯ ಚೋಳರಪಾಳ್ಯದಲ್ಲಿ ನಡೆದಿದೆ.

ಬೆಂಗಳೂರಿನ ಚೋಳರಪಾಳ್ಯದಲ್ಲಿ ಮನೆಗಳಿರುವ ಪ್ರದೇಶದಲ್ಲಿ ಕಳೆದ ಐದು ವರ್ಷಗಳಿಂದ ಈ ಅಗರಬತ್ತಿ ಕಾರ್ಖಾನೆ ನಡೆಸಲಾಗುತ್ತಿದೆ. ಮನೆಯಲ್ಲಿಯೇ ಈ ಕಾರ್ಖಾನೆ ನಡೆಸಲಾಗುತ್ತಿದ್ದು, ಕೆಳ ಅಂತಸ್ತಿನ ಕೋಣೆಯಲ್ಲಿ ಅಗರಬತ್ತಿ ತಯಾರಿಕೆಗೆ ಬೇಕಾಗಿರುವ ರಾಸಾಯನಿಕ ವಸ್ತುಗಳನ್ನು ಸಂಗ್ರಹಣೆ ಮಾಡಿ ಇಡಲಾಗಿತ್ತು.

ಆಕಸ್ಮಿಕವಾಗಿ ಕಾರ್ಖಾನೆಗೆ ಬೆಂಕಿ ಹತ್ತಿದೆ. ಇದರಿಂದ ರಾಸಾಯನಿಕ ಸಂಗ್ರಹಿಸಿಟ್ಟಿದ್ದ ಬಾಕ್ಸ್‌ಗಳು ಏಕಾಏಕಿ ಬ್ಲಾಸ್ಟ್‌ ಆಗಿವೆ. ಅಲ್ಲದೇ, ರಾಸಾಯನಿಕ ರಸ್ತೆಗೆ ಹರಿದಿದೆ. ಇದರಿಂದ ಬೆಂಕಿ ಆವರಿಸಿದೆ. ಮನೆಗಳ ಮುಂದೆ ನಿಲ್ಲಿಸಿದ್ದ 8 ಬೈಕ್‌ಗಳಿಗೆ ಬೆಂಕಿ ವ್ಯಾಪಿಸಿದೆ. ಎಂಟು ಬೈಕ್‌ಗಳು ಸುಟ್ಟು ಭಸ್ಮವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದುರಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ 3ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಮತ್ತು ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ?  ಬೆಂಗಳೂರು | ದುಂಬಿ-ಕೀಟಗಳ ಸಂರಕ್ಷಣೆಗಾಗಿ ‘ಕೀಟ ಕೆಫೆ’

ವಿಜಯನಗರ ಠಾಣೆಯ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಗರಬತ್ತಿ ಕಾರ್ಖಾನೆಗೆ ಬೆಂಕಿ ಹೇಗೆ ಹೊತ್ತಿಕೊಂಡಿತು ಎಂದು ತನಿಖೆ ಬಳಿಕ ತಿಳಿಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...