ಬೆಂಗಳೂರು | ಪರಿಶಿಷ್ಟ ಜಾತಿ ಸಮೀಕ್ಷೆಯ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯ ಲೋಪ: ನಾಲ್ವರ ಅಮಾನತು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯ ವೇಳೆ ಸಮೀಕ್ಷೆ ನಡೆಸದೇ ಇದ್ದರೂ, ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ನಾಲ್ವರು ಸಿಬ್ಬಂದಿಯನ್ನು ಕೂಡಲೇ ಅಮಾನತುಗೊಳಿಸಿರುವುದಾಗಿ ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಕ್ಷಿಣ ವಲಯದ ಹೊಂಬೇಗೌಡನಗರ ಉಪ ವಿಭಾಗದಲ್ಲಿ ಪ್ರಭಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಪರಿವೀಕ್ಷಕರಾದ ಶುಭಾಷಿಣಿ ಅವರನ್ನು ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಭಾಗವಾದ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಅದೇ ರೀತಿ, ಪಶ್ಚಿಮ ವಲಯದ ಗೋವಿಂದರಾಜನಗರ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಮೌಲ್ಯಮಾಪಕರಾದ ಹನುಮಂತರಾಜು ಹಾಗೂ ಪಶ್ಚಿಮ ವಲಯದ ಮತ್ತಿಕೆರೆ ಉಪ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲ್ಯಮಾಪಕರಾದ ರಾಮಾಂಜನೇಯಲು ಅವರನ್ನು ಕೂಡ ಅಮಾನತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮನೆಮನೆಗೆ ಪರಿಶಿಷ್ಟ ಜಾತಿ ಸಮೀಕ್ಷೆಯ ಸ್ಟಿಕ್ಕರ್: ನಾಗರಿಕರಿಗೆ ಸ್ಪಷ್ಟೀಕರಣ ನೀಡಿದ ಬಿಬಿಎಂಪಿ

ಆರ್. ಆರ್ ನಗರ ವಲಯದ ಕೆಂಗೇರಿ ಉಪ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲ್ಯಮಾಪಕರಾದ ಪ್ರವೀಣ್ ಕುಮಾರ್ ಸಿ.ಎನ್ ರವರನ್ನು ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಭಾಗವಾದ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯ ಲೋಪದ ಮೇರೆಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯ ವೇಳೆ ಸಮೀಕ್ಷೆ ನಡೆಸದೇ ಇದ್ದರೂ, ಸಮೀಕ್ಷೆ ಪೂರ್ಣಗೊಳಿಸಿರುವುದಾಗಿ ಮನೆ ಮನೆಗೆ ಸ್ಟಿಕ್ಕರ್‌ ಅಂಟಿಸುವ ಕೆಲಸವನ್ನು ಬಿಬಿಎಂಪಿ ಅಧಿಕಾರಿಗಳು ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದ ಬೆನ್ನಲ್ಲೇ ಈ ಕ್ರಮವನ್ನು ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಕೈಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...