ಬೆಂಗಳೂರು | ಆಟೋ ಹತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

Date:

ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಇಡೀ ದೇಶವೇ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಶನಿವಾರ ದೇಶಾದ್ಯಂತ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳ ವಿರುದ್ಧ ಪ್ರತಿಭಟನೆಗಳು ನಡೆದಿದೆ. ಇಂತಹ ಸಂದರ್ಭದಲ್ಲಿಯೇ ಬೆಂಗಳೂರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಕೋರಮಂಗಲದ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿ, ಅಪಘಾತಕ್ಕೀಡಾಗಿದ್ದರು. ಬಳಿಕ, ತನ್ನ ಬೈಕ್‌ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ಆಟೋ ಹತ್ತಿದ್ದರು. ಈ ವೇಳೆ, ಆಟೋ ಚಾಲಕ ಆಕೆಯನ್ನು ಆಕೆಯ ಮನೆಗೆ ತಲುಪಿಸದೆ, ಎಚ್‌ಎಸ್‌ಆರ್‌ ಲೇಔಟ್‌ಗೆ ಕರೆದೊಯ್ದಿದ್ದಾನೆ. ಅಲ್ಲಿ, ತನ್ನ ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಅಸ್ವಸ್ಥಗೊಂಡಿದ್ದ ಯುವತಿಯನ್ನು ಹೆಬ್ಬಗೋಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಠಾಣೆಗೆ ಭೇಟಿ ನೀಡಿದ್ದ ಎಚ್‌ಎಸ್‌ಆರ್ ಲೇಔಟ್‌ ಪೊಲೀಸರಿಗೆ ಯುವತಿ ದೂರು ನೀಡಿದ್ದಾಳೆ. ಆಕೆಯ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವತಿ ವಿವರಿಸಿರುವ ಸ್ಥಳಗಳಿಗೆ ತೆರಳಿ, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಘಟನೆಯ ಬಳಿಕ, ಉತ್ತರಾಖಂಡ, ಉತ್ತರ ಪ್ರದೇಶದಲ್ಲಿಯೂ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ. ಅತ್ಯಾಚಾರ ಕೃತ್ಯಗಳ ವಿರುದ್ಧ ಧರಣಿ, ಹೋರಾಟಗಳು ನಡೆಯುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...