ಬೆಂಗಳೂರು | ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತ: ಸಾಮಾಜಿಕ ಕಾರ್ಯಕರ್ತ ನಿಧನ

Date:

ಸಿಎಂ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ನಿರ್ಧಾರದ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ, ಸಾಮಾಜಿಕ ಕಾರ್ಯಕರ್ತ ನಿಧನರಾದ ದಾರುಣ ಘಟನೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದಿದೆ.

ಮೃತಪಟ್ಟ ಸಾಮಾಜಿಕ ಕಾರ್ಯಕರ್ತ ಹಾಗೂ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಬೆಂಗಳೂರಿನ ಸಿ ಕೆ ರವಿಚಂದ್ರನ್ (63) ಎಂದು ಗುರುತಿಸಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ದಲಿತ ಅಲ್ಪಸಂಖ್ಯಾತರ ಸಂಘದಿಂದ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ವೇಳೆ ಸಂಘಟನೆಯಿಂದ ಬಂದಿದ್ದವರನ್ನು ಹೆಸರೆತ್ತಿ, ಸಿ ಕೆ ರವಿಚಂದ್ರನ್ ಮಾಧ್ಯಮದವರಿಗೆ ಪರಿಚಯ ಪಡಿಸುತ್ತಿದ್ದರು. ಈ ವೇಳೆಯಲ್ಲಿಯೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ಸುದ್ದಿಗೋಷ್ಠಿಯಲ್ಲಿದ್ದ ಈ ದಿನ.ಕಾಮ್ ಕ್ಯಾಮೆರಾಮನ್ ದೇವರಾಜ್ ರಾಯಭಾಗಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೃದಯಾಘಾತಕ್ಕೊಳಗಾದ ಕೂಡಲೇ ಆಟೋದಲ್ಲಿ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಕೂಡಲೇ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸಿ ಕೆ ರವಿಚಂದ್ರನ್ ಅವರು ಕಾಂಗ್ರೆಸ್ ಪಕ್ಷ ಸೇರಿದಂತೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...