ಬೆಂಗಳೂರು | ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‌ಮೇಲ್: ಮಹಿಳೆ ವಿರುದ್ಧ ಎಸ್‌ಡಿಪಿಐ ಮುಖಂಡನಿಂದ ದೂರು

Date:

ಮಹಿಳೆಯೊಬ್ಬರು ಹನಿಟ್ರ್ಯಾಪ್ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ಎಸ್‌ಡಿಪಿಐ ಮುಖಂಡರೊಬ್ಬರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹನಿಟ್ರ್ಯಾಪ್ ಮೂಲಕ ಮಹಿಳೆ 10 ಲಕ್ಷ ರೂ ನೀಡುವಂತೆ ಬೆದರಿಕೆ ಹಾಕುತ್ತಿದ್ದು, ಹಣ ನೀಡದಿದ್ದರೆ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾಳೆಂದು ನೆಲಮಂಗಲದ ಲೋಹಿತ್ ನಗರದ ನಿವಾಸಿ ಬಿಆರ್ ಭಾಸ್ಕರ್ ಪ್ರಸಾದ್ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ.

2 ವರ್ಷಗಳ ಹಿಂದೆ ಹೋರಾಟ, ಪ್ರತಿಭಟನೆಗಳಲ್ಲಿ ಮಹಿಳೆ ಪರಿಚಯವಾಗಿದ್ದರು. ಆಗಸ್ಟ್ 28 ರಂದು ವಾಟ್ಸಾಪ್ ಮೂಲಕ ಸಂದೇಶ ರವಾನಿಸಿದ ಮಹಿಳೆ, ಲೈಂಗಿಕ ಸಂಪರ್ಕಕ್ಕೆ ಆಹ್ವಾನಿಸಿದ್ದಳು. ನಂತರ ಸಂದೇಶ ಹಾಗೂ ವಿಡಿಯೋ ಇಟ್ಟುಕೊಂಡು ಮಾನಹರಣ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ಶಿವಾಜಿನಗರದ ಚಿನ್ನಸ್ವಾಮಿ ಮುದಲಿಯಾರ್ ರಸ್ತೆಯಲ್ಲಿರುವ ಸುದ್ದಿವಾಹಿನಿಯೊಂದರ ಬಳಿ ನಿಂತಿದ್ದಾಗ ಅಪಪ್ರಚಾರ ಮಾಡಿ, ಅವಾಚ್ಯವಾಗಿ ನಿಂದಿಸಿದ್ದಾಳೆ. ಅಲ್ಲದೇ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ಭಾಸ್ಕರ್ ಪ್ರಸಾದ್ ಅವರು ಆರೋಪ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದಿನಿಂದ ಧಾರಾಕಾರ ಮಳೆ

ಸುಲಿಗೆ, ಕ್ರಿಮಿನಲ್ ಬೆದರಿಕೆ ಮತ್ತು ಇತರ ಆರೋಪ ಹಿನ್ನೆಲೆಯಲ್ಲಿ ಶಿವಾಜಿನಗರ ಪೊಲೀಸರು ಇದೀಗ ಮಹಿಳೆ ವಿರುದ್ಧ ಐಟಿ ಕಾಯ್ದೆ ಮತ್ತು ಬಿಎನ್‌ಎಸ್‌(ಭಾರತೀಯ ನ್ಯಾಯ ಸಂಹಿತೆ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ಕೈಗೆತ್ತಿಕೊಂಡಿದ್ದಾರೆ. ಮಹಿಳೆಯ ವಿವರಗಳನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...