ಬೆಂಗಳೂರು | ಗುರುವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಚಿನ್ನದ ವ್ಯಾಪಾರಿಗಳ ಮನೆಗಳ ಮೇಲೆ ಐಟಿ ದಾಳಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಮತ್ತೆ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದು, ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ಅಕ್ಟೋಬರ್ 6 ರಂದು ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಬೆಂಗಳೂರಿಗೆ ಬಂದಿತ್ತು. ಈ ವೇಳೆ, ಹಲವೆಡೆ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆಗಳ ಮೇಲೆ ದಾಳಿ ನಡೆಸಿತ್ತು. ಈ ದಾಳಿಯ ಸಮಯದಲ್ಲಿ ಪತ್ತೆಯಾದ ಹಲವಾರು ದಾಖಲಾತಿಗಳ ಆಧಾರದ ಮೇಲೆ ಇದೀಗ ಮತ್ತೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆರಿಗೆ ವಂಚನೆ ಆರೋಪದಡಿ ಅಕ್ಟೋಬರ್ 10ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿ ವೇಳೆ ಬಿರಿಯಾನಿ ಸೆಂಟರ್​ಗಳ 30 ಯುಪಿಐ ನಾನಾ ಖಾತೆಗಳು ಪತ್ತೆಯಾಗಿದ್ದವು. ಅಲ್ಲದೆ ಮಾಲೀಕರ ಮನೆಯಿಂದ ₹1.47 ಕೋಟಿ ನಗದು ಸಿಕ್ಕಿತ್ತು.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತರಾಗಿ ​​ಮನೀಶ್ ಮೌದ್ಗಿಲ್ ನೇಮಕ

ಈ ಹಿಂದೆ ದಾಳಿ ಮಾಡಿದ್ದ ವೇಳೆ ಚಿನ್ನದ ವ್ಯಾಪಾರಿಗಳ ಜತೆ ಕಾಫಿ ಬೋರ್ಡ್ ನಿರ್ದೇಶಕ ವ್ಯವಹಾರ ನಡೆಸಿರುವ ದಾಖಲೆಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಗುರುವಾರ ಐಟಿ ಅಧಿಕಾರಿಗಳು ಕಾಫಿ ಬೋರ್ಡ್ ನಿರ್ದೇಶಕ ಚಂದ್ರಶೇಖರ್ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...