ಬೆಂಗಳೂರು | ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯ: ವಿಚಾರಣೆಗೆ ಹಾಜರಾಗಲು ನೋಟಿಸ್​!

Date:

ಸತತ 42 ಗಂಟೆಗಳ ಪರಿಶೀಲನೆಯ ನಂತರ ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯವಾಗಿದೆ. ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಮೆಟ್ರೋ ಕಾರ್ಪ್ ಕಂಪನಿ ಪಾಲುದಾರರಾಗಿರುವ ಅಂಬಿಕಾಪತಿ ಪುತ್ರ ಪ್ರದೀಪ್ ಮತ್ತು ಪ್ರಮೋದ್​​ಗೆ ಐಟಿಯಿಂದ ನೋಟಿಸ್​ ನೀಡಲಾಗಿದೆ.

ನಗರದ ಮಾನ್ಯತಾ ಟೆಕ್​ಪಾರ್ಕ್‌ನಲ್ಲಿರುವ ಗುತ್ತಿಗೆದಾರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರ ನಿವಾಸದಲ್ಲಿ ಕಳೆದ 42 ಗಂಟೆಗಳಿಂದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹಲವು ಮಹತ್ವದ ದಾಖಲೆಗಳೊಂದಿಗೆ ಪಂಚನಾಮೆ ಕಾರ್ಯ ಪೂರ್ಣಗೊಳಿಸಿದ್ದಾರೆ.

ಗುರುವಾರ ಕಂತೆ ಕಂತೆ ಹಣ ಪತ್ತೆಯಾದ ಬೆನ್ನಲ್ಲೇ, ಐಟಿ ಅಧಿಕಾರಿಗಳು ಅಂಬಿಕಾಪತಿ ಅವರ ನಿವಾಸದಲ್ಲಿ ತಂಗಿದ್ದು, ಶನಿವಾರವೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇನ್ನು ಮಾನ್ಯತಾ ಟೆಕ್​ ಪಾರ್ಕ್​ನ ಮನೆಯಲ್ಲಿ ಐಟಿ ಅಧಿಕಾರಿಗಳ ಶೋಧ ಕಾರ್ಯ ಮುಂದುವರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ರಾತ್ರಿ ಲಾಕರ್​ನಲ್ಲಿ ಎರಡು ಸೂಟ್ ಕೇಸ್ ಪತ್ತೆಯಾಗಿವೆ. ಇದರಲ್ಲಿ ಅಶ್ವಥಮ್ಮ, ಅಂಬಿಕಾಪತಿ ಅವರ ಆಸ್ತಿಗೆ ಸಂಬಂಧಿಸಿದ ಕೆಲ ದಾಖಲೆಗಳು ದೊರೆತಿವೆ.

ಸದ್ಯ ಅಧಿಕಾರಿಗಳು ಚಿನ್ನಾಭರಣ, ನಗದು ಹಣ, ದಾಖಲೆ ಪತ್ರಗಳು ಎಲ್ಲವನ್ನೂ ಕ್ರೋಡೀಕರಿಸಿ ಲೆಕ್ಕ ಹಾಕಿ ಜಪ್ತಿ ಮಾಡಿದ್ದಾರೆ.

“ಕಳೆದ 15 ವರ್ಷಗಳಿಂದ ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡುತ್ತಿದ್ದೇವೆ. ಐಟಿ ದಾಳಿ ವೇಳೆ, ದೊರೆತ ₹42 ಕೋಟಿ ಹಣದ ಬಗ್ಗೆ ಐಟಿ ಇಲಾಖೆಗೆ ವಿವರಣೆ ನೀಡುತ್ತೇವೆ. ಹಾಗೆಯೇ, ನಮ್ಮ ಕೆಲವು ಆಸ್ತಿಯನ್ನು ಮಾರಾಟ ಮಾಡಿದ ಹಣವನ್ನು ಮನೆಯಲ್ಲಿ ಇಡಲಾಗಿತ್ತು. ಎಲ್ಲ ದಾಖಲೆಗಳನ್ನು ನೀಡಿ, ಹಣವನ್ನು ಬಿಡಿಸಿಕೊಳ್ಳುತ್ತೇವೆ. ಈ ದುಡ್ಡಿಗೂ ನಮ್ಮ ತಂದೆ ಅಂಬಿಕಾಪತಿ ಅವರಿಗೂ ಯಾವುದೇ ಸಂಬಂಧವಿಲ್ಲ. ಸುಮ್ಮನೆ ಅವರನ್ನು ಈ ವಿಚಾರದಲ್ಲಿ ಎಳೆದು ತರಬೇಡಿ. ಐಟಿ ಅಧಿಕಾರಿಗಳು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ವಿಚಾರಣೆಗೆ ಹಾಜರಾಗುತ್ತೇನೆ” ಎಂದು ಅಂಬಿಕಾಪತಿ ಪುತ್ರ ಪ್ರದೀಪ್‌ ತಿಳಿಸಿದ್ದಾರೆ.

₹42 ಕೋಟಿಗೂ ಅಧಿಕ ಹಣಕ್ಕೆ ಅಂಬಿಕಾಪತಿ ಕುಟುಂಬ ಲೆಕ್ಕ ಕೊಡಬೇಕಿದೆ. ಹಣದ ಮೂಲ ಕೆದಕುವುದಕ್ಕೆ ಮುಂದಾಗಿರುವ ಐಟಿ ಅಧಿಕಾರಿಗಳು ಮಂಗಳವಾರದಿಂದ ತನಿಖೆ ಆರಂಭಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಚದಡಿ ₹42 ಕೋಟಿ ನಗದು ಪತ್ತೆ; ಅಂಬಿಕಾಪತಿ ದಂಪತಿ ಬಂಧನ ಸಾಧ್ಯತೆ

ಐಟಿ ಅಧಿಕಾರಿಗಳು ಗುರುವಾರ ಚಿನ್ನದ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾಗ ಭಾರೀ ಪ್ರಮಾಣದ ನಗದು ಸಂಗ್ರಹವಾಗಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದೆ. ಆ ಮಾಹಿತಿ ಆಧರಿಸಿ ಅಂಬಿಕಾಪತಿ ನಿವಾಸದ ಮೇಲೆ ದಾಳಿ ಮಾಡಿದಾಗ ಮಂಚದ ಕೆಳಗೆ ಕಂತೆ ಕಂತೆ ನಗದು ಪತ್ತೆಯಾಗಿತ್ತು.

ಪಂಚರಾಜ್ಯ ಚುನಾವಣೆ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಈ ಭಾರೀ ಮೊತ್ತದ ಹಣವನ್ನು ಎಲೆಕ್ಷನ್ ಫಂಡಿಂಗ್ ನೀಡಲು ಸಿದ್ದತೆ ನಡೆದಿತ್ತು ಎಂದು ತಿಳಿದು ಬಂದಿದೆ. ಆದರೆ ಐಟಿ ಅಧಿಕಾರಿಗಳು ಖಚಿತ ಮಾಹಿತಿಯನ್ನು ಆಧರಿಸಿ ದಾಳಿ ಮಾಡಿ ಮಂಚದಡಿ ಸಂಗ್ರಹಿಸಿಟ್ಟ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.

ಅಂಬಿಕಾಪತಿ ಮನೆ ಮೇಲೆ ಐಟಿ ದಾಳಿ

ಗುತ್ತಿಗೆದಾರ ಅಂಬಿಕಾಪತಿ ಮನೆ, ಆರ್​​ಟಿ ನಗರದ ವೈಟ್​ ಗೌಸ್​ನಲ್ಲಿರುವ ಅಂಬಿಕಾಪತಿ ಮಗಳ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಒಂದು ಮನೆ ಮತ್ತು ಆರ್​ಟಿ ನಗರದ ಸುಲ್ತಾನ್ ಪಾಳ್ಯದಲ್ಲಿ ಎರಡು ಕಡೆ ದಾಳಿ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...