ಬೆಂಗಳೂರು | ಗಂಡನನ್ನು ತಾನೇ ಕೊಲೆ ಮಾಡಿ ಹುಡುಕಿಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದ ಎರಡನೇ ಪತ್ನಿ

Date:

ಗಂಡನನ್ನು ಕೊಲೆ ಮಾಡಿ, ಹೊಂಡದಲ್ಲಿ ಹಾಕಿ ಬಳಿಕ ಪೊಲೀಸರಿಗೆ ಗಂಡ ಕಾಣುತ್ತಿಲ್ಲವೆಂದು ದೂರು ನೀಡಿದ್ದ ಮೃತನ ಎರಡನೇ ಪತ್ನಿ ಸದ್ಯ ಪೊಲೀಸರ ಅತಿಥಿಯಾಗಿದ್ದಾರೆ.

ಶಕೀಲ್ ಅಕ್ತಾರ್ ಕೊಲೆಯಾದ ವ್ಯಕ್ತಿ. ಈತ ಮೂಲತಃ ಬಿಹಾರದವರು. ಮೃತನ ಎರಡನೇ ಪತ್ನಿ ನಜೀರ್ ಖಾತುನ್ ಮತ್ತು ನಾದಿನಿ ಕಾಶ್ಮೀರಿ ಬಂಧಿತರು.

ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿ ಶಕೀಲ್‌ ಅಕ್ಟೋಬರ್ 9ರಂದು ಮನೆಯ ಮಂಚದ ಮೇಲೆ ಮಲಗಿದ್ದರು. ಈ ವೇಳೆ, ಆತನ ಎದೆಯ ಮೇಲೆ ಎರಡನೇ ಪತ್ನಿ ನಜೀರ್ ಖಾತುನ್ ಕುಳಿತು, ಕತ್ತು ಹಿಸುಕಿದ್ದಾಳೆ. ಈ ವೇಳೆ, ಆತನ ಕೈ ಮತ್ತು ಕಾಲುಗಳನ್ನು ನಾದಿನಿ ಕಾಶ್ಮೀರಿ ಬಿಗಿಯಾಗಿ ಹಿಡಿದಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಣ ಉಳಿಸಿಕ್ಕೊಳ್ಳಲು ಶಕೀಲ್ ಎಷ್ಟೇ ಪ್ರಯತ್ನಪಟ್ಟರು, ಬಿಡದ ಇಬ್ಬರು ಆರೋಪಿಗಳೂ ಆತ ಕೆಳಗೆ ಬಿದ್ದರೂ ಬಿಡದೇ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ‘ನಂಬರ್ ಪ್ಲೇಟ್’ ಮರೆಮಾಚಿದ್ದ ಸವಾರನ ವಿರುದ್ಧ ಎಫ್‌ಐಆರ್‌ ದಾಖಲು

ಶಕೀಲ್ ಅವರನ್ನು ಹತ್ಯೆ ಮಾಡಿದ ಬಳಿಕ ಇಬ್ಬರೂ ಆರೋಪಿಗಳು ಭಾರೀ ಮಳೆ ಬಂದ ಸಮಯದಲ್ಲಿ ಬೆಡ್ ಶೀಟ್​ನಲ್ಲೇ ಶವವನ್ನು ಸುತ್ತಿ ಯಾರಿಗೂ ಗೊತ್ತಾಗದ ಹಾಗೇ ಉಪಾಯ ಮಾಡಿ ಮಧ್ಯರಾತ್ರಿಯಲ್ಲಿ ಹೆಣವನ್ನು ಸಾಗಿಸಿದ್ದಾರೆ. ಕೊಲೆಯಾದ ಮನೆಯಿಂದ ಸ್ವಲ್ಪ ದೂರದಲ್ಲೇ ಇದ್ದ ಹೊಂಡಕ್ಕೆ ಮೃತದೇಹವನ್ನು ಎಸೆದಿದ್ದಾರೆ.

ಈ ಕೃತ್ಯ ಮಾಡಿದ ಎರಡು ದಿನದ ಬಳಿಕ ಆತನ ಎರಡನೇ ಪತ್ನಿ ಆರೋಪಿ ನಜೀರ್ ಖಾತುನ್ ಪತಿ ಕಾಣೆಯಾಗಿದ್ದಾನೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಈ ವೇಳೆ, ಗಂಡನನ್ನು ಹುಡುಕಿ ಕೊಡುವಂತೆ ಪೊಲೀಸರ ಮುಂದೆ ಗೋಳಾಡಿದ್ದಾಳೆ.

ದೂರು ಬಂದ ಮೇರೆಗೆ ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದರು. ಅ.15 ರಂದು ಹೊಂಡದಲ್ಲಿ ಕೆಟ್ಟ ವಾಸನೆ ಬರುತ್ತಿದ್ದೆ ಎಂದು ಮಾಹಿತಿ ಬಂದಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಪೊಲೀಸರಿಗೆ ಮೃತದೇಹ ಪತ್ತೆಯಾಗಿದೆ.

ಹೊಂಡದಿಂದ ಶವ ಹೊರತೆಗೆದು ತನಿಖೆ ಕೈಗೊಂಡಿದ್ದ ಪೊಲೀಸರು ಸದ್ಯ ಆರೋಪಿಗಳಾದ ನಜೀರ್ ಖಾತುನ್ ಮತ್ತು ಕಾಶ್ಮೀರಿಯನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...