ಬೆಂಗಳೂರು | ಪೊಲೀಸ್ ಕಚೇರಿಯ ಹಿಂಭಾಗದ ಬಸ್‌ ತಂಗುದಾಣವನ್ನು ಕದ್ದೊಯ್ದ ಖದೀಮರು

Date:

ರಸ್ತೆಯಲ್ಲಿ ನಿರ್ಮಿಸಲಾಗಿದ್ದ ಪ್ರಯಾಣಿಕರ ತಂಗುದಾಣವನ್ನು ಕಿಡಿಗೇಡಿಗಳು ಕದ್ದುಕೊಂಡು ಹೋಗಿರುವ ಘಟನೆ ಬೆಂಗಳೂರಿನ ಕನ್ನಿಂಗ್‌ಹ್ಯಾಮ್‌ ರಸ್ತೆಯಲ್ಲಿ ನಡೆದಿದೆ.

ಪೊಲೀಸ್ ಕಮಿಷನರ್ ಕಚೇರಿಯ ಹಿಂಭಾಗ ಹಾಗೂ ವಿಧಾನಸೌಧದಿಂದ ಒಂದು ಕಿ.ಮೀಗಿಂತ ಕಡಿಮೆ ದೂರದಲ್ಲಿರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಇತ್ತೀಚೆಗೆ ನಿರ್ಮಿಸಲಾಗಿದ್ದ ಪ್ರಯಾಣಿಕರ ತಂಗುದಾಣವನ್ನು ಕಳ್ಳರಿ ಕದ್ದುಕೊಂಡು ಹೋಗಿದ್ದಾರೆ. ಇದು ಹಲವರ ಅಚ್ಚರಿಗೆ ಕಾರಣವಾಗಿದೆ.

ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಖಾಸಗಿ ಕಂಪನಿಯೊಂದು ಸ್ಟೀಲ್​ನಿಂದ ₹10 ಲಕ್ಷ ವೆಚ್ಚದಲ್ಲಿ ಬಿಎಂಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡಿತ್ತು. ನಿರ್ಮಾಣ ಮಾಡಿದ ಒಂದು ತಿಂಗಳಲ್ಲಿ ನಿಲ್ದಾಣ ನಾಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಂಪನಿಯ ಸಹಾಯಕ ಉಪಾಧ್ಯಕ್ಷ ಎನ್ ರವಿ ರೆಡ್ಡಿ ಅವರು ಬಸ್​ ನಿಲ್ದಾಣವನ್ನು ನೋಡಲು ಸ್ಥಳಕ್ಕೆ ಬಂದಾಗ ಸ್ಥಳದಲ್ಲಿ ಬಸ್​ ನಿಲ್ದಾಣ ಇಲ್ಲದಿರುವುದು ಬೆಳಕಿಗೆ ಬಂದಿದೆ.

ತಂಗುದಾಣವನ್ನು ತೆರವು ಮಾಡಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ತಿಳಿಸಿದ್ದಾರೆ.

ಸೆಪ್ಟೆಂಬರ್ 30ರಂದು ಈ ಘಟನೆ ಸಂಬಂಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ಎಲ್ಲ ಪೊಲೀಸ್‌ ಠಾಣೆಗಳ ಡಿಜಿಟಲೀಕರಣ: ಪೊಲೀಸ್ ಆಯುಕ್ತ ದಯಾನಂದ

ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕದ್ದುಕೊಂಡು ಹೋಗಿರುವ ಆರೋಪಿಗಳ ಬಂಧನಕ್ಕೆ ಹುಡುಕಾಟ ನಡೆಸಿದ್ದಾರೆ. ಸದ್ಯ ಬಸ್​ ನಿಲ್ದಾಣದ ಅಕ್ಕ-ಪಕ್ಕದ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...