ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

Date:

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ 16.5 ಲಕ್ಷ ಲೀಟರ್ ಮೊಸರು ಮತ್ತು 51 ಲಕ್ಷ ಲೀಟರ್ ಹಾಲನ್ನು ಮಾರಾಟ ಮಾಡುವ ಮೂಲಕ ವಿನೂತನ ದಾಖಲೆ ಸೃಷ್ಟಿಸಿದೆ. ಹಾಲಿನ ಉತ್ಪನ್ನಗಳಷ್ಟೇ ಅಲ್ಲದೆ, ಕೆಎಂಎಫ್​ನ ಐಸ್‌ಕ್ರೀಮ್‌ಗಳೂ ಕೂಡ ಕಳೆದ ವರ್ಷಕ್ಕಿಂತ ಶೇ.40ರಷ್ಟು ಹೆಚ್ಚು ಮಾರಾಟವಾಗಿವೆ. ಈ ಬಾರಿ ಈವರೆಗಿನ ಅತ್ಯಧಿಕ ಐಸ್​ಕ್ರೀಮ್ ಮಾರಾಟವಾಗಿರುವುದಾಗಿ ವರದಿಯಾಗಿದೆ.

“ಏಪ್ರಿಲ್ ಸಮಯದಲ್ಲಿ, ವಿಶೇಷವಾಗಿ ಏಪ್ರಿಲ್ 9 ಮತ್ತು 15ರ ನಡುವೆ ಯುಗಾದಿ, ರಾಮನವಮಿ ಮತ್ತು ಈದ್-ಉಲ್-ಫಿತರ್‌ನಂತಹ ಹಬ್ಬಗಳು ಒಂದರ ನಂತರ ಒಂದರಂತೆ ಬಂದಿದ್ದರಿಂದ ಕೂಡಾ ಮಾರಾಟ ಹೆಚ್ಚಳಕ್ಕೆ ಕಾರಣವಾಗಿದೆ. ಹಾಲು ಮತ್ತು ಮೊಸರು ಪ್ಯಾಕೆಟ್‌ಗಳು ಬೇಗನೆ ಬಿಕರಿಯಾಗುವುದನ್ನು ಈ ವರ್ಷ ಕಾಣಬಹುದು. ಸಾಮಾನ್ಯವಾಗಿ, ಸಂಸ್ಥೆಯು ದಿನಕ್ಕೆ ಎರಡು ಬಾರಿ ಉತ್ಪನ್ನಗಳನ್ನು ಪೂರೈಸುತ್ತದೆ. ಆದರೆ ಕೆಲವು ಪ್ರದೇಶಗಳಲ್ಲಿ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಮೂರು ಬಾರಿ ಉತ್ಪನ್ನಗಳನ್ನು ಪೂರೈಸಲಾಗಿದೆ. ಹೆಚ್ಚುತ್ತಿರುವ ತಾಪಮಾನ ಕೂಡ ಮಾರಾಟದಲ್ಲಿ ಏರಿಕೆಗೆ ಕಾರಣ” ಎಂದು ಕೆಎಂಎಫ್​​ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ.

ಐಸ್‌ಕ್ರೀಂ ಮಾರಾಟದಲ್ಲಿ ಶೇ 40ರಷ್ಟು ಏರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದೆ ದಿನಕ್ಕೆ ನಂದಿನಿ ಹಾಲು ಮಾರಾಟ 44 ಲಕ್ಷ ಲೀಟರ್ ದಾಟಿರಲಿಲ್ಲ. ಆದರೆ ಈ ವರ್ಷ ಒಂದೇ ದಿನದಲ್ಲಿ 48 ಲಕ್ಷ ಲೀಟರ್‌ ಮಾರಾಟವಾಗಿದೆ. ಮೊಸರು ಮತ್ತು ಮಜ್ಜಿಗೆ ಕೂಡ ಗಮನಾರ್ಹ ಮಾರಾಟ ದಾಖಲಿಸಿವೆ. ಈ ತಿಂಗಳು, ನಾವು ಮೊಸರು ಮಾರಾಟದಲ್ಲಿ ಎರಡು ಮೈಲಿಗಲ್ಲುಗಳನ್ನು ದಾಟಿದ್ದೇವೆ. ಮೊದಲ ವಾರದಲ್ಲಿ, ನಾವು 11.5 ಲಕ್ಷ ಲೀಟರ್ ಮಾರಾಟ ದಾಖಲಿಸಿದ್ದೇವೆ ಮತ್ತು ಐದು ದಿನಗಳಲ್ಲಿ 16.5 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ. ಇದರಿಂದ ನಂದಿನಿ ಆದ್ಯತೆಯ ಬ್ರ್ಯಾಂಡ್ ಆಗಿರುವುದು ತಿಳಿದುಬರುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅನುಭವಿ ಆಲಗೂರರ ಜಯದಿಂದ ಜಿಲ್ಲೆ ಅಭಿವೃದ್ಧಿ: ಶಾಸಕ ಯಶವಂತರಾಯಗೌಡ

“ಕೆಎಎಂಎಫ್ ಐಸ್ ಕ್ರೀಮ್ ಮಾರಾಟವು ಶೇ.40ರಷ್ಟು ಹೆಚ್ಚಾಗಿದ್ದು, ನಿರಂತರವಾಗಿ ಸುಧಾರಿಸುತ್ತಿದೆ. ಐಸ್ ಕ್ರೀಂಗಳು ಒಂದು ವರ್ಷಕ್ಕೂ ಹೆಚ್ಚು ಶೆಲ್ಫ್-ಲೈಫ್ ಹೊಂದಿರುತ್ತವೆ. ಹೀಗಾಗಿ ನಾವು ಬೇಗನೆ ಉತ್ಪಾದನೆಯನ್ನು ಪ್ರಾರಂಭಿಸಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...