ಬೆಂಗಳೂರು | ಕಾನೂನು ವಿವಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಮೂವರ ಬಂಧನ

Date:

ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಆಯ್ದ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆ ಮಾಡಿದ್ದ ಆರೋಪದಡಿ ಉಪ ಪ್ರಾಂಶುಪಾಲ ಸೇರಿ ಮೂವರು ಆರೋಪಿಗಳನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೋಲಾರ ಜಿಲ್ಲೆಯ ಬಸವ ಶ್ರೀ ಕಾನೂನು ಕಾಲೇಜಿನ ಉಪ ಪ್ರಾಂಶುಪಾಲ ನಾಗರಾಜ್, ಅವರ ಕಾರು ಚಾಲಕನೂ ಆಗಿದ್ದ ವಿದ್ಯಾರ್ಥಿ ಜಗದೀಶ್ ಹಾಗೂ ಬಂಗಾರಪೇಟೆ ಕಾನೂನು ಕಾಲೇಜ್‌ವೊಂದರ ವಿದ್ಯಾರ್ಥಿ ವರುಣ್ ಕುಮಾರ್ ಬಂಧಿತ ಆರೋಪಿಗಳು.

ರಾಜ್ಯ ಕಾನೂನು ವಿವಿಯಿಂದ ಜನವರಿ 23ರಂದು ನಿಗದಿಯಾಗಿದ್ದ ಕಾಂಟ್ರ್ಯಾಕ್ಟ್ ಲಾ-1 ಪರೀಕ್ಷೆಯ ಪ್ರಶ್ನೆಗಳು ಟೆಲಿಗ್ರಾಂ ಮತ್ತು ವಾಟ್ಸ್ಆ್ಯಪ್ ಗ್ರೂಪ್‌ಗಳಲ್ಲಿ ವೈರಲ್ ಆಗಿದ್ದವು. ಉಪ ಪ್ರಾಂಶುಪಾಲ ನಾಗರಾಜ್ ಅವರಿಗೆ ಕಾರು ಚಾಲಕ ಹಾಗೂ ಅದೇ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಜಗದೀಶ್, ನಾಗರಾಜ್ ಅವರ ಮೊಬೈಲ್ ಫೋನ್‌ನಲ್ಲಿದ್ದ ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳನ್ನು ತನ್ನ ಫೋನ್‌ಗೆ ವರ್ಗಾಯಿಸಿಕೊಂಡಿದ್ದರು. ಬಳಿಕ ಅವುಗಳನ್ನ ಪರೀಕ್ಷಾರ್ಥಿಗಳಿಗೆ ಸೋರಿಕೆ ಮಾಡಿ ಅಕ್ರಮವಾಗಿ ಹಣ ಗಳಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ಮತ್ತೋರ್ವ ಆರೋಪಿ ವರುಣ್ ಕುಮಾರ್, ಪರೀಕ್ಷೆಯ ಹಿಂದಿನ ದಿನ ಕಾಲೇಜ್‌ಗೆ ಬಂದ ಪ್ರಶ್ನೆ ಪತ್ರಿಕೆಗಳನ್ನು ಯಾರಿಗೂ ತಿಳಿಯದಂತೆ ತೆರೆದು, ಅದರಲ್ಲಿನ ಪ್ರಶ್ನೆಗಳನ್ನು ತನ್ನ ಮೊಬೈಲ್ ಫೋನ್‌ನಲ್ಲಿ ಕಾಪಿ ಮಾಡಿಕೊಂಡು ಹಣಕ್ಕಾಗಿ ಅವುಗಳನ್ನು ಆನ್‌ಲೈನ್‌ನಲ್ಲಿ ಸೋರಿಕೆ ಮಾಡಿದ್ದರು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳಾಗಿ ಪಿಯು ಕಾಲೇಜು ಪ್ರಾಂಶುಪಾಲರ ನೇಮಕ 

ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾನೂನು ವಿಶ್ವವಿದ್ಯಾಲಯಗಳ ಚೇರ್‌ಮನ್ ಹಾಗೂ ಜಾಗೃತ ದಳ-2 ಅಧಿಕಾರಿಯಾಗಿರುವ ವಿಶ್ವನಾಥ್ ಕೆ.ಎನ್ ಅವರು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸೈಬರ್ ಕ್ರೈಂ ಠಾಣೆ ಪೊಲೀಸರು ತಾಂತ್ರಿಕ ಸಹಾಯದಿಂದ ಮಾಹಿತಿಗಳನ್ನು ಸಂಗ್ರಹಿಸಿ ಟೆಲಿಗ್ರಾಂ ಗ್ರೂಪ್‌ಗಳ ಮೂಲಕ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳನ್ನ ಸೋರಿಕೆ ಮಾಡಿದ್ದ ಮೂವರು ಆರೋಪಿಗಳನ್ನ ಬಂಧಿಸಿರುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...