ಬೆಂಗಳೂರು | ತಾಲೂಕು ಕಚೇರಿಯ ಕಂದಾಯ ಶಾಖೆಯ ಮೇಲೆ ಲೋಕಾಯುಕ್ತ ದಾಳಿ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ತಾಲೂಕು ಕಚೇರಿಯ ಕಂದಾಯ ಶಾಖೆಯ ಮೇಲೆ ಶನಿವಾರ(ಜ.20) ಲೋಕಾಯುಕ್ತ ಎಸ್‌ಪಿ ಬಿ.ಕೆ. ಉಮೇಶ್ ನೇತೃತ್ವದ 15 ಅಧಿಕಾರಿಗಳ ತಂಡ ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದೆ.

ಶನಿವಾರ ಮಧ್ಯಾಹ್ನ 12ಗಂಟೆಯಿಂದ ಆರಂಭವಾದ ಪರಿಶೀಲನೆ ತಡರಾತ್ರಿಯವರೆಗೂ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ಜಿಲ್ಲಾಡಳಿತ ಕೇಂದ್ರದಲ್ಲಿ ಕಂದಾಯ ಇಲಾಖೆ ಕ್ಯಾಲೇಂಡರ್ ಬಿಡುಗಡೆ ಸಮಾರಂಭವಿದ್ದ ಕಾರಣ ತಾಲೂಕು ಕಚೇರಿಯ ಕಂದಾಯ ಇಲಾಖೆಯ ಅಧಿಕಾರಿಗಳು ಅಲ್ಲಿಗೆ ತೆರಳಿದ್ದರು.

ಲೋಕಾಯುಕ್ತ ದಾಳಿಯ ನಂತರ ಅಧಿಕಾರಿಗಳನ್ನು ಕರೆಸಿಕೊಂಡು ಕಡತ ತಪಾಸಣೆ ಮುಂದುವರಿಸಿದ್ದರು. ಡಿವೈಎಸ್‌ಪಿ ಸೂರ್ಯನಾರಾಯಣ್ ರಾವ್, ಇನ್ಸ್ಪೆಕ್ಟರ್‌ಗಳಾದ ಯಶವಂತ್ ಕುಮಾರ್, ಕೆ.ಎಸ್.ಆಂಜಿನಪ್ಪ ಸ್ಥಳದಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...