ಬೆಂಗಳೂರು | ಯುವತಿ ಮಹಾಲಕ್ಷ್ಮೀ ಕೊಲೆ ಪ್ರಕರಣ: ಆರೋಪಿಯ ಮಾಹಿತಿ ಲಭ್ಯ ಎಂದ ಕಮಿಷನರ್

Date:

ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಹತ್ಯೆಗೈದು, ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ಪ್ರಕರಣದ ಆರೋಪಿಯ ಕುರಿತು ಮಾಹಿತಿ ಲಭ್ಯವಾಗಿದೆ. ಆತನ ಬಂಧನದ ಬಳಿಕ ಕೃತ್ಯಕ್ಕೆ ಕಾರಣ ತಿಳಿಯಬೇಕಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಬೆಂಗಳೂರಿನ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆರೋಪಿ ಅನ್ಯ ರಾಜ್ಯದವನು. ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದ. ನಾಪತ್ತೆಯಾಗಿರುವ ಆತನ ಪತ್ತೆ ಕಾರ್ಯ ಮುಂದುವರೆದಿದೆ. ಬಂಧನದ ಬಳಿಕ ಸ್ಪಷ್ಟವಾದ ಮತ್ತಷ್ಟು ಸತ್ಯಗಳು ಹೊರಬರಬರುತ್ತವೆ” ಎಂದು ಹೇಳಿದರು.

“ಯುವತಿಯನ್ನು ಕೊಂದ ಆರೋಪಿ, ಮೃತದೇಹವನ್ನು ತುಂಡು ತುಂಡುಗಳಾಗಿ ಕತ್ತರಿಸಿ ಸೂಟ್‌ಕೇಸ್‌ನಲ್ಲಿ ತುಂಬಲು ಯತ್ನಿಸಿದ್ದಾನೆ. ಆದರೆ, ಸೂಟ್‌ಕೇಸ್​ನಲ್ಲಿ ತುಂಬಲಾಗದೇ ಫ್ರಿಡ್ಜ್​ನಲ್ಲಿಟ್ಟು ಎಸ್ಕೇಪ್ ಆಗಿದ್ದಾನೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಹಾಲಕ್ಷ್ಮಿ ಹತ್ಯೆ | ದೇಹ ಕತ್ತರಿಸಿದ ಸ್ಥಳದ ಗುರುತು ಪತ್ತೆಯಾಗದಂತೆ ಮನೆ ಸ್ವಚ್ಛ ಮಾಡಿರುವ ಕೊಲೆ ಆರೋಪಿ

ನೇಪಾಳದ 29 ವರ್ಷದ ಮಹಾಲಕ್ಷ್ಮೀಯನ್ನು ಹತ್ಯೆಗೈದು, ಮೃತದೇಹದ ವಾಸನೆ ಬಾರದಂತೆ ರಾಸಾಯನಿಕ ಸಿಂಪಡಿಸಿ ಆರೋಪಿ ಪರಾರಿಯಾಗಿರುವುದು ತನಿಖೆಯಿಂದ ಬಯಲಾಗಿದೆ. ಈಗಾಗಲೇ ಆತನ ಪತ್ತೆಗೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ನೇತೃತ್ವದಲ್ಲಿ 6 ವಿಶೇಷ ತಂಡಗಳನ್ನು ರಚಿಸಲಾಗಿದೆ. ಘಟನೆ ನಡೆದ ಮನೆಯ ಸುತ್ತಮುತ್ತಲ ಪ್ರದೇಶಗಳ ನೂರಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...