ಬೆಂಗಳೂರು | ಭಾರೀ ಮಳೆಗೆ ನಲುಗಿದ ನಗರ; ಸಮಸ್ಯೆ ಪರಿಹರಿಸಲು ಬಿಬಿಎಂಪಿ ವಿಫಲ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಅ.9) ಸಾಯಂಕಾಲದಿಂದ ಶುರುವಾದ ಮಳೆ ರಾತ್ರಿಯಿಡಿ ಸುರಿದಿದೆ. ಪರಿಣಾಮ ನಗರದ ರಸ್ತೆಗಳೆಲ್ಲ ನೀರಿನಿಂದ ಸಂಪೂರ್ಣ ಜಲಾವೃತವಾಗಿದ್ದು, ದಾರಿಹೋಕರು, ವಾಹನ ಸವಾರರು ಪರದಾಡುವಂತಾಗಿದೆ.

ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಸದಾಶಿವನಗರ, ಶಾಂತಿನಗರ, ರಿಚ್​ಮಂಡ್ ಟೌನ್, ಬಿಟಿಎಮ್‌ ಲೇಔಟ್, ವಿಜಯನಗರ, ರಾಜರಾಜೇಶ್ವರಿ ನಗರ, ಕೆಂಗೇರಿ, ನಾಯಂಡಹಳ್ಳಿ, ಹೊಸಕೆರೆಹಳ್ಳಿ, ಗೋವಿಂದರಾಜ ನಗರ, ಮಲ್ಲೇಶ್ವರಂ, ಬೆಳ್ಳಂದೂರು ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.

ಎಲೆಕ್ಟ್ರಾನಿಕ್ ಸಿಟಿಯಿಂದ ಚಂದಾಪುರದವರೆಗೆ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಸಂಪೂರ್ಣ ಟ್ರಾಫಿಕ್​ ಜಾಮ್​ ಆಗಿದ್ದು, ಸುಮಾರು 4-5 ಕಿಲೋ ಮೀಟರ್​ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳೆಯ ಅವಾಂತರ

ಹೊಸೂರು ರಸ್ತೆಯ ರೂಪೇನಾ ಅಗ್ರಹಾರ, ಹರಳೂರು ಜಂಕ್ಷನ್, ನಾಯಂಡಹಳ್ಳಿ, ಶೇಷಾದ್ರಿಪುರಂ, ರೈಲ್ವೆ ಅಂಡರ್​ಪಾಸ್, ವಿಜಯನಗರದ ಧನಂಜಯ ಪ್ಯಾಲೇಸ್, ಬನ್ನೇರುಘಟ್ಟ ರಸ್ತೆ, ನಾಗಾರ್ಜುನ ಜಂಕ್ಷನ್, ಅನಿಲ್ ಕುಂಬ್ಳೆ ವೃತ್ತ, ಕಲ್ಯಾಣನಗರ ಬ್ರಿಡ್ಜ್, ಹೆಸರಘಟ್ಟದಲ್ಲಿ ಭಾರೀ ಮಳೆಯಿಂದ ರಸ್ತೆಗಳು ಜಲಾವೃತವಾಗಿವೆ.

ರಸ್ತೆಗಳಲ್ಲಿ ಹೊಳೆಯಂತೆ ಮಳೆ ಹಾಗೂ ಚರಂಡಿ ನೀರು ಹರಿಯುತ್ತಿದೆ. ಮಳೆಯಿಂದ ರಸ್ತೆಗಳಷ್ಟೇ ಅಲ್ಲದೇ, ಅಂಡರ್‌ಪಾಸ್‌ಗಳು ಜಲಾವೃತವಾಗಿವೆ. ಇದರಿಂದ ವಾಹನ ಸವಾರರು, ರಸ್ತೆ ಬದಿ ವ್ಯಾಪಾರಿಗಳು ಹೈರಾಣಾಗಿದ್ದಾರೆ. ಅಲ್ಲದೇ, ನಗರದ ಬಹುತೇಕ ಕಡೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು.

ಮಳೆಯಿಂದ ಬೆಳ್ಳಂದೂರಿನ ಕರಿಯಮ್ಮನ ಅಗ್ರಹಾರದ ಬಳಿ ರಸ್ತೆಗೆ ರಾಜಕಾಲುವೆ ನೀರು ನುಗ್ಗಿದ್ದು, 50 ಮೀಟರ್​ ಉದ್ದದ ರಸ್ತೆ ಸಂಪೂರ್ಣ ಜಲಾವೃತಗೊಂಡಿತ್ತು. ಇದರಿಂದ ನಿಮಿಷ ನಿಮಿಷಕ್ಕೂ ನೀರಿನ ಮಟ್ಟ ಏರಿಕೆಯಾಗಿತ್ತು. 15ಕ್ಕೂ ಹೆಚ್ಚು ವಾಹನ, 50ಕ್ಕೂ ಹೆಚ್ಚು ಜನ ನೀರಿನಲ್ಲಿ ಸಿಲುಕಿಕೊಂಡಿದ್ದರು.

ರಸ್ತೆಯಲ್ಲಿ ನೀರಿನ ಮಟ್ಟ ಏರಿಕೆಯಿಂದ ವಾಹನಗಳು ಹೊರಬರಲಾಗದೆ ಪರದಾಡುತ್ತಿದ್ದವು. ಜನರಲ್ಲಿ ಆತಂಕ ಹೆಚ್ಚಾಗಿತ್ತು. ಸುಮಾರು 15ಕ್ಕೂ ಹೆಚ್ಚು ವಾಹನಗಳು ಮತ್ತು ಗರ್ಭಿಣಿ ಸೇರಿ 50ಕ್ಕೂ ಹೆಚ್ಚು ಜನ ಸಿಲುಕಿಕೊಂಡಿದ್ದರು. ಸತತ ನಾಲ್ಕು ಗಂಟೆಗಳ ಕಾಲ ನರಕ ಅನುಭವಿಸಿದರು. ಸದ್ಯ ರಾತ್ರಿ 11 ಗಂಟೆಗೆ ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಜನರನ್ನು ರಕ್ಷಿಸಿದ್ದಾರೆ. ನೀರಲ್ಲಿ ಸಿಲುಕಿದ್ದವರನ್ನು ಟ್ರ್ಯಾಕ್ಟರ್ ಮೂಲಕ ಸ್ಥಳಾಂತರಿಸಿದ್ದಾರೆ.

ಸುರಿದ ಧಾರಾಕಾರ ಮಳೆಗೆ 8ನೇ ಮೈಲಿ ತುಮಕೂರು ರಸ್ತೆ ಕೆರೆಯಂತಾಗಿದೆ. ರಾಜಕಾಲುವೆ ಬ್ಲಾಕ್​ನಿಂದಾಗಿ ಕಿಲೋಮೀಟರ್ ವರೆಗೆ ರಸ್ತೆ ತುಂಬೆಲ್ಲ ನೀರು ತುಂಬಿದ್ದು, ಪೀಣ್ಯ ಸಂಚಾರ ಪೊಲೀಸರು ಕಸ ಕಡ್ಡಿ ತೆರವುಗೊಳಿಸಿ ನೀರು ಹರಿಯಲು ಸುಗಮಗೊಳಿಸಿದರು.

ಇನ್ನೊಂದೆಡೆ ಪೀಣ್ಯದ 8ನೇ ಮೈಲಿ ಸಿಗ್ನಲ್​ ಬಳಿ ಮಳೆ ನೀರಲ್ಲೇ ವ್ಯಕ್ತಿಯೊಬ್ಬರು ಮಲಗಿದ್ದು ಕಂಡುಬಂದಿತು. ಕುಡಿದ ಮತ್ತಿನಲ್ಲಿ ಮಲಗಿದ್ದ ಎನ್ನಲಾಗಿದ್ದು, ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಆತನನ್ನು ಎಬ್ಬಿಸಿ ಕಳುಹಿಸಿದ್ದಾರೆ.

ಇಂಟೆಲ್ ಹೊರಗೆ ಬೆಳ್ಳಂದೂರಿನ ಆರ್‌ಎಮ್‌ಜೆಡ್ ಇಕೋಸ್ಪೇಸ್ ಕಡೆಗೆ ಮಳೆ ನೀರು ನದಿಯ ರೀತಿ ಹರಿಯುತ್ತಿತ್ತು.

ಲೀ ಮೆರಿಡಿಯನ್ ಅಂಡರ್ ಪಾಸ್ ಸಂಪೂರ್ಣ ಜಲಾವೃತವಾಗಿದೆ. ಹಾಗಾಗಿ, ಬ್ಯಾರಿಕೇಡ್ ಹಾಕಿ ಅಂಡರ್ ಪಾಸ್ ರಸ್ತೆಯನ್ನು ಬಂದ್ ಮಾಡಲಾಗಿದೆ. ಇತ್ತೀಚಿಗಷ್ಟೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಈ ಅಂಡರ್ ಪಾಸ್ ರೆಡಿ ಮಾಡಲಾಗಿತ್ತು. ಆದರೂ ಸಹ ನೀರು ತುಂಬಿಕೊಂಡಿದ್ದು, ಇದರೊಂದಿಗೆ ಒಂದೇ ಮಳೆಗೆ ಬಿಬಿಎಂಪಿ ಕಳಪೆ ಕಾಮಗಾರಿ ಬೆಳಕಿಗೆ ಬಂದಿದೆ.

ಮಳೆ

ಭಾರೀ ಮಳೆಯಿಂದಾಗಿ ಯಮಲೂರುನಿಂದ ಕರಿಯಮ್ಮನ ಅಗ್ರಹಾರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಜಲಾವೃತವಾಗಿದೆ. ನೀರಿನಲ್ಲಿ ಕಾರು ಹಾಗೂ ಬೈಕ್​ಗಳು ಸಿಲುಕಿಕೊಂಡಿದ್ದವು, ಹಾಗಾಗಿ, ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ರಸ್ತೆ ಬಂದ್ ಮಾಡಿದ್ದಾರೆ. ನೀರು ತುಂಬಿಕೊಂಡಿದ್ದರಿಂದ ಚಾಲಕರು, ಕಾರುಗಳನ್ನು ಸ್ಥಳದಲ್ಲೇ ಬಿಟ್ಟು ಮನೆ ಸೇರಿ ಪ್ರಾಣಪಾಯದಿಂದ ಪಾರಾಗಿದ್ದರು. ಹೀಗಾಗಿ, ಸೋಮವಾರ ರಾತ್ರಿಯಿಂದ ಎರಡು ಕಾರು ನೀರಿನಲ್ಲೇ ಇವೆ. ಇದರಿಂದ ಸಾರ್ವಜನಿಕರು ರಸ್ತೆ ದಾಟಲು ಹರಸಾಹಸ ಪಡುತ್ತಿದ್ದಾರೆ.

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಕೆಂಗೇರಿ 8.3 ಸೆಂ.ಮೀ, ಅಂಜನಾಪುರ 7.6 ಸೆಂ.ಮೀ, ಆರ್.ಆರ್.ನಗರ 6.8 ಸೆಂ.ಮೀ, ಹೆಚ್.ಎ.ಎಲ್ ವಿಮಾನ ನಿಲ್ದಾಣ 6.4 ಸೆಂ.ಮೀ, ನಾಯಂಡಹಳ್ಳಿ 6.3 ಸೆಂ.ಮೀ, ಕೊಟ್ಟಿಗೆಪಾಳ್ಯ 6.2 ಸೆಂ.ಮೀ, ಬಿಳೇಕಹಳ್ಳಿ 5.9 ಸೆಂ.ಮೀ, ಪೀಣ್ಯ 5.8 ಸೆಂ.ಮೀ, ನಾಗಪುರ 5.5 ಸೆಂ.ಮೀ, ಅರಕೆರೆ 5.4 ಸೆಂ.ಮೀ, ಮಾರತಹಳ್ಳಿ 5.3 ಸೆಂ.ಮೀ,  ಬಾಗಲಕುಂಟೆ 5.3 ಸೆಂ.ಮೀ, ಕೋರಮಂಗಲ 4.9 ಸೆಂ.ಮೀ, ದಯಾನಂದ ನಗರ 4.9 ಸೆಂ.ಮೀ, ವಿದ್ಯಾಪೀಠ 4.8 ಸೆಂ.ಮೀ, ಬಿಟಿಎಂ ಲೇಔಟ್ 4.4 ಸೆಂ.ಮೀ, ಸಿಂಗಸಂದ್ರ 4.3 ಸೆಂ.ಮೀ, ಹೊರಮಾವು 4.2 ಸೆಂ.ಮೀ ಮಳೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೂರು ದಿನ ಭಾರೀ ಮಳೆ; ಕೆಲವೆಡೆ ಯೆಲ್ಲೋ ಅಲರ್ಟ್‌ ಘೋಷಣೆ

ಮುಂದಿನ ನಾಲ್ಕು ದಿನ ಮಳೆ ಸಾಧ್ಯತೆ

ನಗರದಲ್ಲಿ ಕಳೆದೆರಡು ದಿನಗಳಿಂದ ಗುಡುಗು ಸಹಿತ ಮಳೆ ಸುರಿದಿದೆ. ಇನ್ನೂ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ನಗರದ ಬಹುತೇಕ ರಸ್ತೆಗಳು ಎರಡು ಗಂಟೆಯ ಮಳೆಗೆ ಸಂಪೂರ್ಣ ಜಲಾವೃತವಾಗುತ್ತಿವೆ. ಪ್ರತಿ ಬಾರಿ ಮಳೆ ಬಂದಾಗ ಇದೇ ಸಮಸ್ಯೆ ಉಂಟಾಗುತ್ತದೆ. ಮಳೆನೀರು ಹರಿದು ಹೋಗಲು ಜಾಗವಿಲ್ಲದೆ ಈ ಅವಾಂತರ ಸೃಷ್ಟಿಯಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...