ಬೆಂಗಳೂರು | ದೂರು ನೀಡಲು ಠಾಣೆಗೆ ಹೋದ ಅಪ್ರಾಪ್ತ ಸಂತ್ರಸ್ತೆ ಮೇಲೆ ಅತ್ಯಾಚಾರ; ಕಾನ್‌ಸ್ಟೆಬಲ್‌ ಸೇರಿ ಇಬ್ಬರ ಬಂಧನ

Date:

ಆತ್ಯಾಚಾರಕ್ಕೊಳಗಾದ ಅಪ್ರಾಪ್ತ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಪೊಲೀಸ್​​ ಕಾನ್‌ಸ್ಟೆಬಲ್‌ ಸೇರಿ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

“ಆತ್ಯಾಚಾರಕ್ಕೊಳಗಾದ 17 ವರ್ಷದ ಸಂತ್ರಸ್ತೆ ದೂರು ನೀಡಲು ಠಾಣೆಗೆ ಹೋದ ವೇಳೆ ಸಹಾಯ ಮಾಡುವ ಸೋಗಿನಲ್ಲಿ ಅತ್ಯಾಚಾರ ಎಸಗಿದ್ದಾರೆಂದು ಅಪ್ರಾಪ್ತೆಯ ತಾಯಿ ನೀಡಿದ ದೂರಿನ ಮೇರೆಗೆ, ಬೊಮ್ಮನಹಳ್ಳಿ ಠಾಣೆಯಲ್ಲಿ ಕಾನ್‌ಸ್ಟೆಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ್ ಹಾಗೂ ಸಂತ್ರಸ್ತೆಯ ಸ್ನೇಹಿತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

“17 ವರ್ಷದ ಸಂತ್ರಸ್ತೆ ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನೆಲೆಸಿದ್ದಳು. ಈ ವೇಳೆ ನೆರೆಮನೆ ನಿವಾಸಿ, ವಿವಾಹಿತ ವ್ಯಕ್ತಿಯ ಪರಿಚಯವಾಗಿದೆ. ಆರೋಪಿಯು ಪ್ರೀತಿಸಿ ಮದುವೆ ಮಾಡಿಕೊಳ್ಳುವುದಾಗಿ ಬಾಲಕಿಯನ್ನು ಪುಸಲಾಯಿಸಿ, ಬಾಲಕಿಯ ಮೇಲೆ ನಿರಂತರ ಆತ್ಯಾಚಾರವೆಸಗಿ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ನೊಂದ ಅಪ್ರಾಪ್ತೆ ತಾಯಿ ಬಳಿ ಹೇಳಿಕೊಂಡಿರುವುದಾಗಿ ಬೊಮ್ಮನಹಳ್ಳಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫೆ.26ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ದೂರು ನೀಡಲು ಹೋದ ಸಂತ್ರಸ್ತೆಯನ್ನು ಕಾನ್‌ಸ್ಟೆಬಲ್‌ ಅರುಣ್ ಪರಿಚಯಿಸಿಕೊಂಡು ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಕಳೆದ ಡಿಸೆಂಬರ್​​ನಲ್ಲಿ ಬಾಲಕಿಯನ್ನು ಬಿಟಿಎಂ ಲೇಔಟ್‌ನ ಓಯೋ ರೂಮಿಗೆ ಕರೆಯಿಸಿಕೊಂಡಿದ್ದು, ಮದ್ಯದಲ್ಲಿ ಮತ್ತುಬರುವ ಔಷಧಿ ಬೆರೆಸಿ ಕುಡಿಸಿ, ಆಕೆ ಮೇಲೆ ಆತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ತನ್ನ ಬಳಿ ಖಾಸಗಿ ವಿಡಿಯೋಗಳಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.

ಇಬ್ಬರ ವಿರುದ್ಧ ಪೊಕ್ಸೊ ಹಾಗೂ ಬಿಎನ್ಎಸ್ ಕಾಯ್ದೆಯ ವಿವಿಧ ಸೆಕ್ಷನ್​ಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಮೈಕೋ ಲೇಔಟ್ ಪೊಲೀಸರು ಕೃತ್ಯ ನಡೆದ ಸ್ಥಳ ಆಧರಿಸಿ ಬೊಮ್ಮನಹಳ್ಳಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಈ ಸಂಬಂಧ ತನಿಖೆ ನಡೆಸಿ, ಇಬ್ಬರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿರುವುದಾಗಿ ಬೊಮ್ಮನಹಳ್ಳಿ ಪೊಲೀಸರು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...