ಬೆಂಗಳೂರು | ಆಧುನಿಕ ತಂತ್ರಜ್ಞಾನ ಡಾ ವಿನ್ಸಿ ಕ್ಸಿ ರೋಬೋಟ್; 1000ಕ್ಕೂ ಅಧಿಕ ಮೂತ್ರಕೋಶ ಶಸ್ತ್ರಚಿಕಿತ್ಸೆ ಯಶಸ್ವಿ

Date:

ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದಲ್ಲಿಯೇ ಮುಂಚೂಣಿಯಲ್ಲಿರುವ “ಡಾ ವಿನ್ಸಿ ಕ್ಸಿ(Da Vinci Xi)” ರೋಬೋಟ್‌ ಮೂಲಕ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯು ಮೂತ್ರಕೋಶಕ್ಕೆ ಸಂಬಂಧಿಸಿದ 1000 ಸರ್ಜರಿಯನ್ನು ಯಶಸ್ವಿಯಾಗಿ ಪೂರೈಸಿದೆ. ಇದೇ ತಂತ್ರಜ್ಞಾನವನ್ನು ಕನ್ನಿಂಗ್‌ಹ್ಯಾಮ್‌ ರಸ್ತೆಯ ಫೋರ್ಟಿಸ್‌ ಆಸ್ಪತ್ರೆಯಲ್ಲೂ ಪ್ರಾರಂಭಿಸಲಾಗುತ್ತಿದೆ ಎಂದು ಫೋರ್ಟಿಸ್‌ ಆಸ್ಪತ್ರೆಯ ಮೂತ್ರಶಾಸ್ತ್ರ, ಯುರೋ-ಆಂಕೊಲಾಜಿ ವಿಭಾಗದ ನಿರ್ದೇಶಕ ಡಾ. ಮೋಹನ್ ಕೇಶವಮೂರ್ತಿ ತಿಳಿಸಿದ್ದಾರೆ.

“2018ರಲ್ಲಿ ಮೊದಲ ಬಾರಿಗೆ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ʼಡಾ ವಿನ್ಸಿ ಕ್ಸಿʼ ರೋಬೋಟಿಕ್‌ ಶಸ್ತ್ರಚಿಕಿತ್ಸಾ ವ್ಯವಸ್ಥೆಯನ್ನು ಪ್ರಾರಂಭಿಸಲಾಯಿತು. ಅದಾದ 79 ತಿಂಗಳುಗಳಲ್ಲಿ ಬರೋಬ್ಬರಿ 1 ಸಾವಿರಕ್ಕೂ ಹೆಚ್ಚು ರೋಬೋಟಿಕ್ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಈ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟಿಕ್‌ ಮೂಲಕ ಯುರೋ-ಆಂಕೊಲಾಜಿ, ಯುರೋ-ಗೈನಕಾಲಜಿ, ಮೂತ್ರಶಾಸ್ತ್ರ ಮತ್ತು ಕಿಡ್ನಿ ಟ್ರಾನ್ಸ್‌ಪ್ಲಾಂಟೇಶನ್‌ನಂತಹ ಸಂಕೀರ್ಣ ಕಾರ್ಯವಿಧಾನಗಳ ಶಸ್ತ್ರಚಿಕಿತ್ಸೆಯನ್ನು ಅತಿ ಸುಲಭ ಹಾಗೂ ನಿಖರವಾಗಿ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಡಾ ವಿನ್ಸಿ ಕ್ಸಿ ರೋಬೋಟ್ ಮೂಲಕ ನಡೆಸಲಾದ ಶಸ್ತ್ರಚಿಕಿತ್ಸೆಗಳಲ್ಲಿ 92 ರೋಬೋಟಿಕ್ ಕಿಡ್ನಿ ಟ್ರಾನ್ಸ್‌ಪ್ಲಾಂಟ್‌, 398 ನರ-ಸ್ಪೇರಿಂಗ್ ರೋಬೋಟಿಕ್ ರಾಡಿಕಲ್ ಪ್ರಾಸ್ಟೇಟೆಕ್ಟಮಿ, 282 ರೋಬೋಟಿಕ್ ಕಾಂಪ್ಲೆಕ್ಸ್ ಪಾರ್ಶಿಯಲ್ ನೆಫ್ರೆಕ್ಟಮಿಗಳು ಮತ್ತು 54 ಪೀಡಿಯಾಟ್ರಿಕ್ ರೋಬೋಟಿಕ್ ಕಾರ್ಯವಿಧಾನಗಳು ಸೇರಿವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗುಬ್ಬಿ ಪಟ್ಟಣ ಪಂಚಾಯಿತಿ ನಿರೀಕ್ಷೆಯಂತೆ ಕಾಂಗ್ರೆಸ್ ತೆಕ್ಕೆಗೆ : ಅಧ್ಯಕ್ಷರಾಗಿ ಮಂಗಳಮ್ಮ, ಉಪಾಧ್ಯಕ್ಷರಾಗಿ ಮಮತಾ ಅವಿರೋಧ ಆಯ್ಕೆ

“ಡಾ ವಿನ್ಸಿ ಎಕ್ಸ್ ಒಂದು ಅತ್ಯಾಧುನಿಕ ರೋಬೋಟಿಕ್ ಶಸ್ತ್ರಚಿಕಿತ್ಸಾ ವಿಧಾನವಾಗಿದ್ದು, ರೋಬೋಟ್‌ ಮೂಲಕ ನಿಖರವಾಗಿ ಯಾವುದೇ ರೀತಿಯ ಶಸ್ತ್ರಚಿಕಿತ್ಸೆಯನ್ನಾದರೂ ಮಾಡಬಹುದು. ಅಷ್ಟೇ ಅಲ್ಲದೆ, ಈ ಸುಧಾರಿತ ತಂತ್ರಜ್ಞಾನವು ಸುತ್ತಮುತ್ತಲಿನ ಅಂಗಾಂಶಗಳಿಗೆ ಯಾವುದೇ ಹಾನಿ ಮಾಡದೇ ಸುಲಭವಾಗಿ ಕಡಿಮೆ ಅವಧಿಯಲ್ಲೇ ಶಸ್ತ್ರಚಿಕಿತ್ಸೆ ಮಾಡಬಹುದಾಗಿದೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...