ಬೆಂಗಳೂರು | ಮೂರು ವರ್ಷದ ಮಗುವಿಗೆ ದೌರ್ಜನ್ಯ ಪ್ರಕರಣ: ತಾಯಿ, ಆಕೆಯ ಪ್ರಿಯಕರನ ಬಂಧನ

Date:

ಹೆತ್ತ ತಾಯಿಯೇ ಮೂರು ವರ್ಷದ ಮಗುವನ್ನು ಮನೆಯಲ್ಲಿ ಕೂಡಿ ಹಾಕಿ, ಮನಬಂದಂತೆ ಥಳಿಸಿ ಚಿತ್ರಹಿಂಸೆ ನೀಡಿರುವ ಅಮಾನುಷ ಘಟನೆ ಬೆಂಗಳೂರಿನ ವಿಜಯನಗರದ ವೀರಭದ್ರನಗರದಲ್ಲಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ತಾಯಿ ಶಾರಿನ್‌ ಮತ್ತು ಆಕೆಯ ಪ್ರಿಯಕರನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.

ಶಾರಿನ್‌ ಎಂಬ ಮಹಿಳೆ ತನ್ನ ಮೂರು ವರ್ಷದ ಮಗುವಿಗೆ ಕೊಡಬಾರದ ಹಿಂಸೆ ಕೊಟ್ಟಿದ್ದು, ಮಗುವಿನ ಮೈ ತುಂಬಾ ಗಾಯಗಳಾಗಿದ್ದವು. ಕುಕ್ಕರ್‌ನಿಂದ ಬಡಿದಿರುವುದಾಗಿ ಹೇಳಿಕೊಂಡಿದ್ದ ಮಗುವಿನ ಹಣೆ, ತಲೆಗೂ ಗಾಯಗಳಾಗಿದ್ದವು. ಮಗುವಿನ ಕೈ ಬೆರಳುಗಳಲ್ಲಿ ರಕ್ತ ಹೆಪ್ಪುಗಟ್ಟಿ ಊದಿಕೊಂಡಿದ್ದವು.

ಮೂರು ವರ್ಷದ ಮಗು ತನ್ನ ತೊದಲು ನುಡಿಯಲ್ಲೇ, “ಅಮ್ಮ ತನಗೆ ಹೊಡೆದು ಕೂಡಿ ಹಾಕಿದ್ದಾಳೆ, ಹಸಿವಾಗಿದೆ ಎಂದರೂ ಊಟ ಕೊಡುತ್ತಿಲ್ಲ. ನನಗೆ ನೀನು ಬೇಡ ಆಚೆ ಹೋಗೆಂದು ಹೊಡೆಯುತ್ತಿದ್ದಾಳೆ. ಮನೆಗೆ ಬಂದ ಅಂಕಲ್‌ ಕೂಡ ಕುಕ್ಕರ್‌ನಿಂದ ತಲೆಗೆ ಹೊಡೆದಿದ್ದಾರೆ” ಎಂದು ಹೇಳಿಕೊಂಡಿರುವ ದೃಶ್ಯ ಸಾಮಾಜಿಕ ಜಾಲಾತಾಣದಲ್ಲಿ ವೈರಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯರ ಪ್ರಕಾರ, “ಶಾರಿನ್ ಎಂಬ ಮಹಿಳೆ ಕೆಲವು ದಿನಗಳ ಹಿಂದೆಯಷ್ಟೇ ವೀರಭದ್ರನಗರಕ್ಕೆ ಬಂದಿದ್ದು, ಈಗ ಏಕಾಏಕಿಯಾಗಿ ಮನೆ ಖಾಲಿ ಮಾಡುವುದಾಗಿ ಹೇಳಿ ಮನೆ ಖಾಲಿ ಮಾಡಲು ಮುಂದಾಗಿದ್ದಾಳೆ. ಈ ವೇಳೆ ಆಕೆಯನ್ನು ಹಿಡಿದಿದ್ದೇವೆ. ಹಲವು ದಿನಗಳಿಂದ ಮಹಿಳೆ ಹಗಲಲ್ಲಿ ತಾನು ಕೆಲಸಕ್ಕೆ ಹೋಗುವಾಗ ಮಗುವನ್ನು ಮನೆಯಲ್ಲಿ ಕೂಡಿಟ್ಟು, ಹೊರಗಡೆ ಬೀಗ ಹಾಕಿ ಹೋಗುತ್ತಿದ್ದಳು. ಮಗು ಹಸಿವು ಎಂದು ಕೂಗಿಕೊಂಡರೂ ಮಗುವಿಗೆ ಏನೂ ಕೊಡದೆ ಹಿಂಸಿಸುತ್ತಿದ್ದರು” ಎಂದು ಮಾಹಿತಿ ನೀಡಿದ್ದಾರೆ.

ಮಗುವಿನ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಮಕ್ಕಳ ಕಲ್ಯಾಣ ಸಮಿತಿಯಿಂದ ಮಗುವನ್ನು ರಕ್ಷಣೆ ಮಾಡಿದ್ದು, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿದುಬಂದಿದೆ.

ಮಹಿಳೆಯು, “ತನಗೆ ವಿಚ್ಛೇದನಕ್ಕಾಗಿ ಅರ್ಜಿ ಹಾಕಿದ್ದೇನೆ. ನಾನಿರುವ ಸ್ಥಿತಿಯಲ್ಲಿ ನನಗೆ ಮಗು ನೋಡಿಕೊಳ್ಳಲು ಆಗುತ್ತಿಲ್ಲ. ಮಗು ಬುದ್ಧಿ ಕಲಿಯಲಿ, ಸ್ವಂತ ಕಾಲಿನ ಮೇಲೆ ನಿಲ್ಲಲಿ ಎಂದು ಮನೆಗೆ ಬೀಗ ಹಾಕಿ ಹೋಗಿದ್ದೇನೆ. ಆ ವೇಳೆ ಮಗು ಬಿದ್ದು ಗಾಯವಾಗಿದೆ ಅಷ್ಟೇ. ಆದರೆ, ಸುಳ್ಳು ಹೇಳುತ್ತಿದೆ” ಎಂದು ಮಾಧ್ಯಮಗಳ ಮುಂದೆಯೇ ಆರೋಪಿ ತಾಯಿ ಹೇಳಿಕೆ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಕಡಬ | ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ; ಕಿಡಗೇಡಿ ಬಂಧನ

ತಲೆಮರೆಸಿಕೊಂಡಿದ್ದ ಆಕೆಯ ಪ್ರಿಯಕರ ಮತ್ತು ಆಕೆ ಇಬ್ಬರನ್ನೂ ಗಿರಿನಗರ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಅವರನ್ನು ಸಂಪರ್ಕಿಸಿದೆ. ಆದರೆ ಅವರು ಕರೆಗೆ ಲಭ್ಯವಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...