ಬೆಂಗಳೂರು | ಕನ್ನಡ ತಂತ್ರಾಂಶಗಳ ಲಿಪಿ ವಿನ್ಯಾಸದಲ್ಲಿ ವೈವಿಧ್ಯತೆ ಅಗತ್ಯ: ಪುರುಷೋತ್ತಮ ಬಿಳಿಮಲೆ

Date:

ಕನ್ನಡ ತಂತ್ರಾಂಶಗಳ ಲಿಪಿ ವಿನ್ಯಾಸದಲ್ಲಿ ವೈವಿಧ್ಯತೆ ತರುವುದು ಪ್ರಸ್ತುತಕ್ಕೆ ಅಗತ್ಯವಾಗಿದೆ. ಆಧುನಿಕ ಶೈಲಿಗೆ ಹೊಂದಿಕೊಳ್ಳದಿದ್ದರೆ ಕನ್ನಡಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕಳವಳ ವ್ಯಕ್ತಪಡಿಸಿದರು.

ಬೆಂಗಳೂರು ನಗರದಲ್ಲಿ ಪ್ರಾಧಿಕಾರದಿಂದ ʼಕನ್ನಡದಲ್ಲಿ ಹೊಸ ಲಿಪಿ ವಿನ್ಯಾಸ ಅಭಿವೃದ್ಧಿʼಪಡಿಸುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.

“ಹಲವಾರು ತಾಂತ್ರಿಕ ಪರಿಣಿತರು ಯುನಿಕೋಡ್‌ನಲ್ಲಿ ವಿವಿಧ ಮಾದರಿಯ ಕನ್ನಡ ಲಿಪಿಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಇವೆಲ್ಲವೂ ಸಾರ್ವಜನಿಕರಿಗೆ ಲಭ್ಯವಾದಲ್ಲಿ ಕನ್ನಡ ಲಿಪಿಗಳಿಗೆ ವೈವಿಧ್ಯತೆ ದೊರಕಲಿದ್ದು, ತಂತ್ರಾಂಶದಲ್ಲಿ ಕನ್ನಡದ ಬಳಕೆ ಹೆಚ್ಚುತ್ತದೆ. ಜನಸ್ನೇಹಿ ಲಿಪಿಗಳ ವಿನ್ಯಾಸದ ಅಭಿವೃದ್ಧಿ, ತಂತ್ರಾಂಶ ವ್ಯವಸ್ಥೆಯನ್ನು ಪೋಷಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಈ ಹೊಣೆಗಾರಿಕೆಯನ್ನು ನಿರ್ವಹಿಸಲಿದೆ. ಲಿಪಿ ವಿನ್ಯಾಸ ಅಭಿವೃದ್ಧಿ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಪರಿಣಿತರು ಪ್ರಾಧಿಕಾರದೊಂದಿಗೆ ಕೈ ಜೋಡಿಸಬಹುದಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ‌ | ಡಿಜಿಟಲ್ ಅರೆಸ್ಟ್ ಮೂಲಕ 89ಲಕ್ಷ ರೂ ವಂಚನೆ ಪ್ರಕರಣ, ಓರ್ವನ ಬಂಧನ

“ಮೊಬೈಲ್ ತಂತ್ರಾಂಶ, ಕ್ಲೌಡ್ ತಂತ್ರಾಂಶಗಳಲ್ಲಿಯೂ ಹೊಸ ವಿನ್ಯಾಸಗಳ ಕನ್ನಡ ಲಿಪಿಯ ಅಗತ್ಯವಿದೆ. ಕನ್ನಡದ ಕೀಲಿಮಣೆಯ ವಿನ್ಯಾಸದಲ್ಲಿಯೂ ಒಂದು ಸಮಾನತೆ ಬೇಕಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಒಂದು ಸಂಹಿತೆಯನ್ನೇ ರೂಪಿಸಬೇಕಿದೆ. ಈ ಕುರಿತಂತೆ ಸಮಿತಿಯು ಸರ್ಕಾರಕ್ಕೆ ಶೀಘ್ರವೇ ಸಮಗ್ರ ವರದಿ ಸಲ್ಲಿಸಲಿದೆ” ಎಂದು ಬಿಳಿಮಲೆ ಅವರು ಹೇಳಿದರು.

ತಾಂತ್ರಿಕ ಕ್ಷೇತ್ರದ ಪರಿಣತರಾದ ಜಿ ಎನ್ ಮೋಹನ್, ಮಧು ವೈ ಎನ್, ಮಂಜುನಾಥ ಆರ್ ಆರ್, ಎನ್ ರವಿಕುಮಾರ್ ಮತ್ತು ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...